ಎಚ್‌ಡಿಕೆ ಫೋನ್ ಕದ್ದಾಲಿಕೆ ಮಾಡಿರುವುದು ಮೇಲ್ನೋಟಕ್ಕೆ ಧೃಡ: ಶೆಟ್ಟರ್

ಬೆಂಗಳೂರು, ಆಗಸ್ಟ್ 19: ಮಾಜಿ ಸಿಎಂ ಕುಮಾರಸ್ವಾಮಿ ಫೋನ್ ಟ್ಯಾಪಿಂಗ್ ಮಾಡಿರುವುದು ಮೇಲ್ನೋಟಕ್ಕೆ ಧೃಡವಾಗಿದೆ ಎಂದು ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಟೆಲಿಗ್ರಾಫ್ ಕಾಯ್ದೆಯ ಪ್ರಕಾರ ಫೊನ್ ಕದ್ದಾಲಿಕೆ ಮಾಡುವಂತಿಲ್ಲ, ಅದು ಕಾನೂನಿಗೆ ವಿರುದ್ಧವಾದುದು, ಶಿಕ್ಷಾರ್ಹ ಅಪರಾಧ ಎಂದ ಅವರು, ಕುಮಾರಸ್ವಾಮಿ ಅವರು ಫೋನ್ ಕದ್ದಾಲಿಕೆ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಹೇಳಿದ್ದಾರೆ.

ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿರುವ ಯಡಿಯೂರಪ್ಪ ಕ್ರಮವನ್ನು ಸ್ವಾಗತಿಸಿರುವ ಜಗದೀಶ್ ಶೆಟ್ಟರ್ ಅವರು, ತನಿಖೆಯಿಂದ ಪೂರ್ಣ ನಿಜಾಂಶ ಹೊರಗೆ ಬರಲಿದೆ ಎಂದರು.

Phone tapping case handed over to CBI. Jagadish Shettar well come the decision

ಕುಮಾರಸ್ವಾಮಿ ಅವರು ಟೆಲಿಫೋನ್ ಕದ್ದಾಲಿಕೆ ಮಾಡಿದ್ದಾರೆ ಎಂದು ಅನರ್ಹ ಶಾಸಕ ಎಚ್.ವಿಶ್ವನಾಥ್ ಮತ್ತು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಅದರಂತೆ ಈ ತನಿಖೆಯನ್ನು ಯಡಿಯೂರಪ್ಪ ಅವರು ಸಿಬಿಐ ತನಿಖೆಗೆ ವಹಿಸಿದ್ದಾರೆ.

ಕುಮಾರಸ್ವಾಮಿ ಅವರು ಸರ್ಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್‌ನ ಕೆಲವು ನಾಯಕರು, ಸ್ವ ಪಕ್ಷದ ಶಾಸಕರು, ಐಪಿಎಸ್ ಅಧಿಕಾರಿಗಳು ಹಾಗೂ ಕೆಲವು ಪತ್ರಕರ್ತರ ಫೋನ್ ಟ್ಯಾಪಿಂಗ್ ನಡೆಸಿದ್ದರು ಎಂದು ಆರೋಪಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+