ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಫೋನ್ ಟ್ಯಾಪಿಂಗ್: ಎಡಿಜಿಪಿ ಅಲೋಕ್ ಕುಮಾರ್ ವರ್ಗಾವಣೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 27: ಪ್ರಮುಖ ವ್ಯಕ್ತಿಗಳ ದೂರವಾಣಿ ಕದ್ದಾಲಿಕೆ ಪ್ರಕರಣದಲ್ಲಿ ಸಿಬಿಐನಿಂದ ವಿಚಾರಣೆಗೆ ಒಳಗಾಗಿರುವ ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ.

ದೂರವಾಣಿ ಕದ್ದಾಲಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಅಲೋಕ್ ಕುಮಾರ್ ಅವರ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸಿತ್ತು. ಬಳಿಕ ಅವರನ್ನು ವಿಚಾರಣೆಗೆ ಒಳಪಡಿಸಿತ್ತು.

ಅಲೋಕ್ ಕುಮಾರ್ ಸಿಬಿಐ ಮುಂದಿಟ್ಟ ಸ್ಫೋಟಕ ಮಾಹಿತಿಅಲೋಕ್ ಕುಮಾರ್ ಸಿಬಿಐ ಮುಂದಿಟ್ಟ ಸ್ಫೋಟಕ ಮಾಹಿತಿ

ಈಗ ರಾಜ್ಯ ಸರ್ಕಾರ ಅಲೋಕ್ ಕುಮಾರ್ ಅವರನ್ನು ವರ್ಗಾವಣೆ ಮಾಡಿದೆ. ಆದರೆ ಅವರಿಗೆ ಸ್ಥಳ ನಿಯೋಜನೆ ಮಾಡಿಲ್ಲ. ಸಿಟಿಆರ್ ಎಸ್ ಎಡಿಜಿಪಿಯಾಗಿರುವ ಪಿಎಸ್ ಸಂಧು ಅವರಿಗೆ ಕೆಎಸ್‌ಆರ್‌ಪಿ ಎಡಿಜಿಪಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

Phone Tapping Case KSRP ADGP Alok Kumar Tranfsered

ಅಲೋಕ್ ಕುಮಾರ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಸಿಬಿಐ ವಶಕ್ಕೆ ಪಡೆದುಕೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಅವರನ್ನು ವಶಕ್ಕೆ ಪಡೆದರೆ ಸೇವೆಯಿಂದ ಅಮಾನತುಗೊಳಿಸುವ ಸಾಧ್ಯತೆ ಕೂಡ ಇದೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸುಮಾರು 600 ವ್ಯಕ್ತಿಗಳ ದೂರವಾಣಿ ಕದ್ದಾಲಿಕೆ ಮಾಡಲಾಗಿದೆ. ಅಲೋಕ್ ಕುಮಾರ್ ಅವರ ನಿವಾಸದಲ್ಲಿಯೇ ದೂರವಾಣಿ ಕದ್ದಾಲಿಕೆಯ ವ್ಯವಸ್ಥೆ ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ.

English summary
State government has transfered KSRP ADGP Alok Kumar who is facing phone tapping allegation during coalication government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X