ಫೋನ್ ಕದ್ದಾಲಿಕೆ: ಎಸಿಪಿ ರಾಮಚಂದ್ರಪ್ಪ ತನಿಖೆ ನಡೆಸಿದ ಸಿಬಿಐ
ಬೆಂಗಳೂರು, ಸೆಪ್ಟೆಂಬರ್ 29: ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಪೊಲೀಸರು ಎಸಿಪಿ ರಾಮಚಂದ್ರಪ್ಪ ಅವರ ವಿಚಾರಣೆ ನಡೆಸಿದ್ದಾರೆ.
ಈಗಾಗಲೇ ಫೋನ್ ಕದ್ದಾಲಿಕೆ ಕುರಿತು ಸಾಕಷ್ಟು ಸಾಕಷ್ಟು ವಿವಾದಗಳು ಸೃಷ್ಟಿಯಾಗಿವೆ. ಹಾಗೆಯೇ ಫೋನ್ ಕದ್ದಾಲಿಕೆ ಕುರಿತು ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಸತತ ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು.
ಕುಮಾರಕೃಪಾ ಅತಿಥಿಗೃಹದ ಸಿಬಿಐ ಕಚೇರಿಯಲ್ಲಿ ಅಧಿಕಾರಿಗಳ ಮುಂದೆ ಎಸಿಪಿ ರಾಮಚಂದ್ರಪ್ಪ ವಿಚಾರಣೆಗೆ ಹಾಜರಾಗಿದ್ದರು. ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಅಧಿಕಾರಿಗಳು ಎಸಿಪಿ ರಾಮಚಂದ್ರಪ್ಪನವರಿಗೆ ಸಮನ್ಸ್ ನೀಡಿದ್ದರು.

ಫೋನ್ ಕದ್ದಾಲಿಕೆ ನಡೆದ ವೇಳೆ ಸಿಸಿಬಿ ಟೆಕ್ನಿಕಲ್ ಸೆಲ್ ನ ಎಸಿಪಿಯಾಗಿದ್ದ ರಾಮಚಂದ್ರಪ್ಪನವರಿಗೂ ಸಿಬಿಐ ತನಿಖೆಯ ಬಿಸಿ ತಟ್ಟಿದೆ. ಇದೀಗ ಅವರ ವಿಚಾರಣೆ ಮುಗಿದಿದ್ದು, ಕೆಲವು ದಾಖಲೆಗಳ ಸಮೇತ ವಿಚಾರಣೆ ನಡೆಸಲಾಗಿದೆ. ಮತ್ತೆ ವಿಚಾರಣೆಗೆ ಕರೆದಾಗ ಬರುವಂತೆ ಸಿಬಿಐ ಅಧಿಕಾರಿಗಳು ಸೂಚಿಸಿದ್ದಾರೆ.
ಈ ಬಗ್ಗೆ ಸಮಗ್ರ ತನಿಖೆ ನಡೆಸಲು ಈಗಿನ ಬಿಜೆಪಿ ಸರ್ಕಾರ ಸಿಬಿಐಗೆ ವಹಿಸಿತ್ತು. ಈ ಹಿನ್ನೆಲೆಯಲ್ಲಿ ಎಚ್ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಅವಧಿಯಲ್ಲಿ ಪೊಲೀಸ್ ಆಯುಕ್ತರಾಗಿದ್ದ ಅಲೋಕ್ ಕುಮಾರ್ ಅವರ ಮನೆಯ ಮೇಲೂ ಸಿಬಿಐ ದಾಳಿ ನಡೆಸಲಾಗಿತ್ತು. 3 ದಿನಗಳ ಕಾಲ ಅಲೋಕ್ ಕುಮಾರ್ ಅವರ ವಿಚಾರಣೆ ನಡೆಸಲಾಗಿತ್ತು.
ಮೂರು ದಿನಗಳಿಂದ ಕೆಎಸ್ಆರ್ಪಿ ಎಡಿಜಿಪಿ ಅಲೋಕ್ ಕುಮಾರ್ ಅವರ ವಿಚಾರಣೆ ನಡೆಸಿದ್ದ ಸಿಬಿಐ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳನ್ನು ಕಲೆಹಾಕಿದ್ದರು.
ಅಲೋಕ್ ಕುಮಾರ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದಾಗ ಬಿಜೆಪಿ ಆಪರೇಷನ್ ಕಮಲ ನಡೆಸಿ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಸೆಳೆಯಲು ಪ್ರಯತ್ನಿಸಿತ್ತು.
ಈ ಹಿನ್ನೆಲೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರ ಕೆಲವು ರಾಜಕಾರಣಿಗಳು, ಮಠಾಧೀಶರು, ರಾಜಕಾರಣಿಗಳ ಆಪ್ತರ ಫೋನ್ ಕದ್ದಾಲಿಕೆ ಮಾಡಿಸಿತ್ತು ಎಂಬ ಆರೋಪ ಕೇಳಿಬಂದಿತ್ತು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications