ವೈರಲ್ ಫೋಟೋ; ಎಂಟಿಬಿ ನಾಗರಾಜ್ ಮನೆಯಲ್ಲಿ ಆಯುಧ ಪೂಜೆ
ಬೆಂಗಳೂರು, ಅಕ್ಟೋಬರ್ 25 : ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಮನೆಯಲ್ಲಿ ಆಯುಧ ಪೂಜೆ ನಡೆಸಿರುವ ಪೋಟೋಗಳು ವೈರಲ್ ಆಗಿವೆ. ರೋಲ್ಸ್ ರಾಯ್ಸ್ ಸೇರಿದಂತೆ ಐಷಾರಾಮಿ ಕಾರುಗಳನ್ನು ಅವರು ಹೊಂದಿದ್ದಾರೆ.
ಭಾನುವಾರ ಮಹದೇವಪುರ ಬಳಿ ಇರುವ ಎಂಟಿಬಿ ನಾಗರಾಜ್ರ 'ಆಚಂದ್ರಾರ್ಕ ನಿಲಯ'ದಲ್ಲಿ ಆಯುಧ ಪೂಜೆಯನ್ನು ಮಾಡಲಾಯಿತು. ರೋಲ್ಸ್ ರಾಯ್ಸ್, ಫೆರಾರಿ ಕಾರುಗಳಿಗೆ ಪೂಜೆಯನ್ನು ಸಲ್ಲಿಸಲಾಯಿತು. ಈ ಫೋಟೋಗಳು ಈಗ ವೈರಲ್ ಆಗಿವೆ.

ಎಂಟಿಬಿ ನಾಗರಾಜ್ ಕುಟುಂಬ ಸದಸ್ಯರ ಜೊತೆ ಆಯುಧ ಪೂಜೆಯಲ್ಲಿ ಪಾಲ್ಗೊಂಡರು. ರೋಲ್ಸ್ ರಾಯ್ಸ್, ಫೆರಾರಿ, ಬೆಂಝ್, ಟೊಯೋಟಾ ಫಾರ್ಚುನರ್, ಇನ್ನೋವಾ ಸೇರಿದಂತೆ 8 ಐಷಾರಾಮಿ ಕಾರು, ತಮ್ಮ ಲೈಸೆನ್ಸ್ ಹೊಂದಿದ ಪಿಸ್ತೂಲ್ಗೆ ಸಹ ಎಂಟಿಬಿ ನಾಗರಾಜ್ ಪೂಜೆ ಸಲ್ಲಿಸಿದರು.
ಕರ್ನಾಟಕದಲ್ಲಿ ಅತಿ ಹೆಚ್ಚು ಆಸ್ತಿ ಹೊಂದಿರುವ ಜನಪ್ರತಿನಿಧಿಗಳಲ್ಲಿ ಎಂಟಿಬಿ ನಾಗರಾಜ್ ಸಹ ಒಬ್ಬರು. ಜೂನ್ನಲ್ಲಿ ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸುವಾಗ ಅವರು 1,224 ಕೋಟಿ ಆಸ್ತಿ ಇದೆ ಎಂದು ಘೋಷಣೆ ಮಾಡಿದ್ದರು.
ಎಂಟಿಬಿ ನಾಗರಾಜ್ ಹೆಸರಿನಲ್ಲಿ 884 ಕೋಟಿ ಆಸ್ತಿ, ಪತ್ನಿ ಶಾಂತಕುಮಾರಿ ಹೆಸರಿನಲ್ಲಿ 331 ಕೋಟಿ ಆಸ್ತಿ ಇದೆ. ಎಂಟಿಬಿ ನಾಗರಾಜ್ 52.72 ಕೋಟಿ ಸಾಲ ಮಾಡಿದ್ದಾರೆ.

ರೋಲ್ಸ್ ರಾಯ್ ಫಾಂಟಮ್, ಲ್ಯಾಂಡ್ ರೋವರ್, ಮರ್ಸಿಡಿಸ್ ಬೆಂಜ್, ಫಾರ್ಚೂನರ್ ಸೇರಿದಂತೆ ಐಷಾರಾಮಿ ಕಾರುಗಳ ಮಾಲೀಕರಾಗಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications