'ನಾವು ಮನುಷ್ಯರು, ನಮ್ಮನ್ನು ಘನತೆಯಿಂದ ಬದುಕಲು ಬಿಡಿ'
ಬೆಂಗಳೂರು, ನವೆಂಬರ್. 23: 'ನಾವು ಮನುಷ್ಯರು. ಘನತೆ, ಗೌರವದಿಂದ ಬದುಕಲು ಬಿಡಿ, ಸಲ್ಲದ ಕಾನೂನು ಹೇರಿ ಬದುಕುವ ಹಕ್ಕು ಕಸಿದುಕೊಳ್ಳಬೇಡಿ' ಎಂಬ ಘೋಷಣೆಗಳು ಬೆಂಗಳೂರಿನಲ್ಲಿ ಮಾರ್ದನಿಸಿದವು.
'ಬೆಂಗಳೂರು ಪ್ರೈಡ್ ಮತ್ತು ಕರ್ನಾಟಕ ಕ್ವೀರ್ ಹಬ್ಬ'ದ ಅಂಗವಾಗಿ ಆಯೋಜಿಸಿದ್ದ ಈ ಮೆರವಣಿಗೆಯಲ್ಲಿ, ದೇಶದ ನಾನಾ ಭಾಗಗಳ ಸಲಿಂಗಿಗಳು ಹಾಗೂ ಲೈಂಗಿಕ ಅಲ್ಪಸಂಖ್ಯಾತರು ಭಾಗವಹಿಸಿ ಸರ್ಕಾರಕ್ಕೆ ತಮ್ಮ ಬೇಡಿಕೆ ಮತ್ತು ಸಮಸ್ಯೆಗಳ ಮನವರಿಕೆ ಮಾಡಿಕೊಟ್ಟರು.
ಸ್ವಾತಂತ್ರ್ಯ, ಸಮಾನತೆ, ನ್ಯಾಯ ಹಾಗೂ ಘನತೆಯ ಬದುಕಿನ ಹಕ್ಕಿಗೆ ಆಗ್ರಹಿಸಿ, ತುಳಸಿ ತೋಟದಿಂದ (ಚಿಕ್ಕ ಲಾಲ್‌ಬಾಗ್) ನಗರದ ಪುರಭವನದವರೆಗೆ ಮೆರವಣಿಗೆಯಲ್ಲಿ ತೆರಳಿದರು. [ಸಲಿಂಗಕಾಮ ರೋಗದ ಲಕ್ಷಣವಲ್ಲ]
ಭಾರತೀಯ ದಂಡ ಸಂಹಿತೆ ಕಲಂ 377 ಅನ್ನು ರದ್ದು ಮಾಡಬೇಕು. ದಾಖಲು ಮಾಡಿರುವ ಸುಳ್ಳು ಪ್ರಕರಣ ಹಿಂದಕ್ಕೆ ಪಡೆಯಬೇಕು. ಸಲಿಂಗ ಕಾಮ ಅಪರಾಧ ಎನ್ನುವ ಬಗೆಯ ಕಾನೂನುಗಳು ಸಂಪೂರ್ಣವಾಗಿ ಮಾಯವಾಗಬೇಕು ಎಂದು ಆಗ್ರಹಿಸಿದರು.

ನಮಗೂ ಜೀವನವಿದೆ
ಎಲ್ ಜಿಬಿಟಿ ಒಕ್ಕೂಟದ ಸಹ ಸಂಸ್ಥಾಪಕರಾದ ಅಕ್ಕೈ ಪದ್ಮಸಾಲಿ ಮಾತನಾಡಿ, ಲೈಂಗಿಕ ಅಲ್ಪಸಂಖ್ಯಾತರನ್ನು ಸಮಾಜ ನಿಕೃಷ್ಟವಾಗಿ ಕಾಣುವುದನ್ನು ನಿಲ್ಲಿಸಬೇಕು. ಐಪಿಸಿ ಕಲಂ 377 ನ್ನು ತೆಗೆದು ಹಾಕಿದರೆ ನಮ್ಮ ಹೋರಾಟಕ್ಕೆ ಅರ್ಥ ಬರುತ್ತದೆ ಎಂದು ಹೇಳಿದರು.

ಕಾಯ್ದೆ ರದ್ದು ಮಾಡಿ
ಲೈಂಗಿಕ ಅಲ್ಪಸಂಖ್ಯಾತರ ಮೇಲೆ ನಿಗಾ ಇಡುವ ಕರ್ನಾಟಕ ಪೊಲೀಸ್ ಕಾಯ್ದೆ- 36(ಎ) ನಮ್ಮ ಮೂಲಭೂತ ಹಕ್ಕುಗಳ ಉಲ್ಲಂಘನೆ ಮಾಡುವಂತಿದೆ. ಇದರ ನೆರವು ಪಡೆದುಕೊಳ್ಳುವ ಪೊಲೀಸರು ಸುಳ್ಳು ಪ್ರಕರಣ ದಾಖಲು ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂತು.

2008 ರಿಂದ ಆರಂಭ
ಬೆಂಗಳೂರು ಮೂಲದ ಸಿಎಸ್ಎಂಆರ್ ಸಂಸ್ಥೆ ಮೆರವಣಿಗೆ ಆಯೋಜಿಸಿತರ್ತು. ಸಲಿಂಗಿ, ಉಭಯಲಿಂಗಿ, ತೃತೀಯ ಲಿಂಗಿ ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಪ್ರಾತಿನಿಧಿಕ ಸಂಘಟನೆ 2008ರಿಂದ 'ಬೆಂಗಳೂರು ಪ್ರೈಡ್ ಮತ್ತು ಕರ್ನಾಟಕ ಕ್ವೀರ್ ಹಬ್ಬ'ವನ್ನು ಆಚರಿಸಿಕೊಂಡು ಬರುತ್ತಿದೆ.

ನಮ್ಮ ಅಭಿಪ್ರಾಯಕ್ಕೆ ಬೆಲೆ ಇಲ್ಲ
ಲೈಂಗಿಕ ಅಲ್ಪಸಂಖ್ಯಾತರಿಗೆ ಸಂಬಂಧಿಸಿದ ಯಾವುದೇ ಕರಡು ಮಾಡುವ ಮುನ್ನ ಸರ್ಕಾರಗಳು ನಮ್ಮ ಅಭಿಪ್ರಾಯ ಪಡೆಯದೇ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿವೆ. ಕಾನೂನು ನಮ್ಮ ವಿರುದ್ಧ ನಿರ್ಮಾಣವಾಗುತ್ತಿರುವುದಕ್ಕೆ ಇದೇ ಮೂಲ ಕಾರಣ ಎಂದು ಆರೋಪಿಸಿದರು.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ












Click it and Unblock the Notifications