ಕೊಡಗು ಜಿಲ್ಲೆಗೆ ರೈಲು ಬಿಡೋದು ಬೇಡ: ಪಿಐಎಲ್ ಸಲ್ಲಿಕೆ
ಬೆಂಗಳೂರು, ಜು.12: ಕೊಡಗಿನಲ್ಲಿ ಉದ್ದೇಶಿತ ರೈಲು ಮಾರ್ಗ ನಿರ್ಮಾಣದಿಂದ ಜಿಲ್ಲೆಯ ಜೀವವೈವಿದ್ಯ ಪ್ರದೇಶಗಳ ಮೇಲೆ ಪರಿಣಾಮ ಬೀರಲಿದೆ ಎಂದು ಎನ್‌ಜಿಒ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದೆ.
ಕೊಡಗು ಜಿಲ್ಲೆಯ ಸೂಕ್ಷ್ಮ ಜೀವವೈವಿದ್ಯ ಪ್ರದೇಶದಲ್ಲಿ ಉದ್ದೇಶಿತ ರೈಲು ಮಾರ್ಗ ನಿರ್ಮಾಣ ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಪ್ರಕರಣ ಸಂಬಂಧ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಮಾಹಿತಿ ಪಡೆದುಕೊಂಡು ನ್ಯಾಯಾಲಯಕ್ಕೆ ತಿಳಿಸುವಂತೆ ವಕೀಲರಿಗೆ ನ್ಯಾಯಪೀಠ ಸೂಚಿಸಿ ಅರ್ಜಿ ವಿಚಾರಣೆಯನ್ನು ಜು.25ಕ್ಕೆ ಮುಂದೂಡಿದೆ.

ಉದ್ದೇಶಿತ ರೈಲು ನಿರ್ಮಾಣ ಯೋಜನೆ ಪ್ರಶ್ನಿಸಿ ಕೂರ್ಗ್ ವೈಲ್ಡ್ ಲೈಫ್ ಎಂಬ ಎನ್‌ಜಿಓ ಸಲ್ಲಿಸಿರುವ ಪಿಐಎಲ್, ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠದ ಮುಂದೆ ವಿಚಾರಣಗೆ ಬಂದಿತು.
ಕೊಡಗು ಜಿಲ್ಲೆಯ ಮೂಲಕ ಕೇರಳದ ತಲಚೇರಿ ಮತ್ತು ಮೈಸೂರು ನಡುವೆ ರೈಲು ಮಾರ್ಗ ಹಾಗೂ ಮೈಸೂರು-ಕುಶಾಲನಗರ-ಮಡಿಕೇರಿ ರೈಲು ಮಾರ್ಗ ನಿರ್ಮಿಸಲು ಉದ್ದೇಶಿಸಲಾಗಿದೆ. ಇದರಿಂದ ಕೊಡಗು ಜಿಲ್ಲೆಯ ಜೀವವೈವಿದ್ಯ ಪ್ರದೇಶಗಳ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಅರ್ಜಿದಾರರು ದೂರಿದ್ದಾರೆ.












Click it and Unblock the Notifications