ಬೆಂಗಳೂರಲ್ಲಿ ಎಲ್ಲೆಲ್ಲಿ ಮತ ಎಣಿಕೆ ನಡೆಯಲಿದೆ? ಇಲ್ಲಿದೆ ಮಾಹಿತಿ

ಬೆಂಗಳೂರು, ಮೇ 14: ರಾಜ್ಯದಲ್ಲಿ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳಿರುವುದು ಬೆಂಗಳೂರು ನಗರ ಜಿಲ್ಲೆಯಲ್ಲಿ, ಇಲ್ಲಿರುವ ಒಟ್ಟು ಕ್ಷೇತ್ರಗಳ ಸಂಖ್ಯೆ 28 ಅದರಲ್ಲಿ ಈ ಬಾರಿ 26 ಕ್ಷೇತ್ರಗಳಿಗೆ ಚುನಾವಣೆ ನಡೆದು ನಾಳೆ ಫಲಿತಾಂಶ ಪ್ರಕಟವಾಗಲಿದೆ. ಎಲ್ಲೆಲ್ಲಿ ಮತ ಎಣಿಕೆ ನಡೆಯಲಿದೆ ಎಂಬ ಮಾಹಿತಿ ಈ ಲೇಖನದಲ್ಲಿದೆ.

ಬೆಂಗಳೂರನ್ನು ಬಿಬಿಎಂಪಿ ಉತ್ತರ, ಬಿಬಿಎಂಪಿ ದಕ್ಷಿಣ, ಬೆಂಗಳೂರು ನಗರ, ಬಿಬಿಎಂಪಿ ಸೆಂಟ್ರಲ್ ಎಂದು ನಾಲ್ಕು ವಿಭಾಗಗಳಾಗಿ ವಿಂಗಡಿಸಿ ಮತ ಎಣಿಕೆ ಮಾಡಲಾಗುತ್ತದೆ, ಅಲ್ಲದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ಕ್ಷೇತ್ರಗಳ ಎಣಿಕೆ ಪ್ರಕ್ರಿಯೆಯೂ ಬೆಂಗಳೂರಿನಲ್ಲೇ ನಡೆಯಲಿದೆ.

ಬಿಬಿಎಂಪಿ ಸೆಂಟ್ರಲ್‌ ವಿಭಾಗದ ಒಟ್ಟು 7 ವಿಧಾನಸಭೆ ಕ್ಷೇತ್ರಗಳ ಮತ ಎಣಿಕೆಯನ್ನು ಬಸವನಗುಡಿಯ ಬಿಎಂಎಸ್‌ ಕಾಲೇಜಿನಲ್ಲಿ ಮಾಡಲಾಗುತ್ತದೆ. ಇಲ್ಲಿ ಒಟ್ಟು 15 ಸ್ಟ್ರಾಂಗ್‌ ರೂಮುಗಳನ್ನು ಸಿದ್ದಪಡಿಸಲಾಗಿದ್ದು, 7 ಮತ ಎಣಿಕೆ ಕೊಠಡಿಗಳಲ್ಲಿ ಮತ ಎಣಿಕೆ ನಡೆಯಲಿದೆ.

places detail of vote counting in Bengaluru

ಬಿಬಿಎಂಪಿ ಉತ್ತರ ವ್ಯಾಪ್ತಿಯ 7 ವಿಧಾನಸಭೆ ಕ್ಷೇತ್ರಗಳ ಮತಗಳ ಎಣಿಕೆಯನ್ನು ನಂ.58, ಅರಮನೆ ರಸ್ತೆ, ಫಾತಿಮಾ ಬ್ಲಾಕ್, ವಸಂತ ನಗರದ ಮೌಂಟ್‌ ಕಾರ್ಮೆಲ್ ಕಾಲೇಜಿನಲ್ಲಿ ನಡೆಸಲಾಗುತ್ತದೆ. ಇಲ್ಲಿ ಸಹ 9 ಸ್ಟ್ರಾಂಗ್ ರೂಮುಗಳನ್ನು ನಿರ್ಮಿಸಿದ್ದು, ಒಟ್ಟು 7 ಮತ ಎಣಿಕೆ ಕೊಠಡಿಗಳಲ್ಲಿ ಎಣಿಕೆ ಪ್ರಕ್ರಿಯೆ ನಡೆಯಲಿದೆ.

ಬಿಬಿಎಂಪಿ ದಕ್ಷಿಣ ವ್ಯಾಪ್ತಿಯ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯು 4ನೇ ಟಿ ಬ್ಲಾಕ್‌, 36ನೇ ಕ್ರಾಸು, ಜಯನಗರದ ಎಸ್‌ಎಸ್‌ಎಂಆರ್‌ವಿ ಕಾಲೇಜಿನಲ್ಲಿ ನಡೆಯಲಿದೆ. ಇಲ್ಲಿ 7 ಸ್ಟ್ರಾಂಗ್‌ ರೂಮುಗಳನ್ನು ಮಾಡಲಾಗಿದ್ದು, 7 ಮತ ಎಣಿಕೆ ಕೊಠಡಿಗಳನ್ನು ಎಣಿಕೆ ನಡೆಯಲಿದೆ.

ಬೆಂಗಳೂರು ನಗರ ವ್ಯಾಪ್ತಿಯ 7 ವಿಧಾನಸಭಾ ಕ್ಷೇತ್ರದ ಮತ ಎಣಿಕೆಯು ಶೇಷಾದ್ರಿ ರಸ್ತೆಯಲ್ಲಿನ ಮಹಾರಾಣಿ ಕಾಲೇಜಿನಲ್ಲಿ ನಡೆಯಲಿದೆ. ಇಲ್ಲಿ 7 ವಿಧಾನಸಭಾ ಕ್ಷೇತ್ರದ ಮತ ಎಣಿಕೆ ನಡೆಯಲಿದೆ, ಮತಯಂತ್ರಗಳನ್ನು 14 ಸ್ಟ್ರಾಂಗ್‌ ರೂಮ್‌ಗಳಲ್ಲಿ ಇಡಲಾಗಿದ್ದು, ಒಟ್ಟು 13 ಕೊಠಡಿಗಳಲ್ಲಿ ಮತ ಎಣಿಕೆ ನಡೆಯಲಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದ ಮತ ಎಣಿಕೆಯೂ ಸಹ ಬೆಂಗಳೂರಿನಲ್ಲೇ ನಡೆಯಲಿದೆ. ದೇವನಹಳ್ಳಿ, ಹೊಸಕೋಟೆ, ನೆಲಮಂಗಲ, ಹೊಸಕೋಟೆ ಕ್ಷೇತ್ರಗಳ ಚುನಾವಣೆಯ ಮತ ಎಣಿಕೆಯು ಆರ್‌ಸಿ ಕಾಜೇಜಿನಲ್ಲಿ ನಡೆಯಲಿದೆ. 10 ಸ್ಟ್ರಾಂಗ್‌ ರೂಮ್‌ನಲ್ಲಿ ಇವಿಎಂಗಳನ್ನು ಇಡಲಾಗಿದ್ದು, 8 ಕೊಠಡಿಗಳಲ್ಲಿ ಮತ ಎಣಿಕೆ ನಡೆಯಲಿದೆ.

ಮತ ಎಣಿಕೆಯು ನಾಳೆ (ಮೇ 15)ರ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಿ ಎಣಿಕೆ ಪೂರ್ಣಗೊಳ್ಳುವವರೆಗೂ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+