ವಿಶ್ವ ಬ್ಯಾಂಕ್‌‌ನಿಂದ 1,500 ಕೋಟಿ ರೂಪಾಯಿ ಸಾಲ ಪಡೆದು ರಾಜ್ಯದ 72 ಕಾಲೇಜುಗಳ ಅಭಿವೃದ್ಧಿಗೆ ಪ್ಲಾನ್‌: ಉನ್ನತ ಶಿಕ್ಷಣ ಸಚಿವ

ಬೆಂಗಳೂರು, ಅಕ್ಟೋಬರ್‌, 24: ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರ ಗುಡ್‌ ನ್ಯೂಸ್‌ವೊಂದನ್ನು ನೀಡಿದೆ. ಸೆಂಟರ್‌‌ ಆಫ್ ಎಕ್ಸೆಲೆನ್ಸ್‌‌ ಯೋಜನೆಯಡಿ ವಿಶ್ವ ಬ್ಯಾಂಕ್‌‌ನಿಂದ 1,500 ಕೋಟಿ ರೂಪಾಯಿ ಸಾಲ ಪಡೆದು ಕಾಲೇಜುಗಳ ಅಭಿವೃದ್ಧಿಗೆ ಮುಂದಾಗಿದೆ.

ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಸರ್ಕಾರಿ ಕಾಲೇಜುಗಳ ಅಭಿವೃದ್ಧಿಗಾಗಿ ಸರ್ಕಾರ ಹೊಸದೊಂದು ಯೋಜನೆಗೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ವಿಶ್ವಬ್ಯಾಂಕ್‌ನಿಂದ 1,500 ಕೋಟಿ ರೂಪಾಯಿಗಳ ಸಾಲವನ್ನು ಪಡೆಯೋಕೆ ಮುಂದಾಗಿದೆ. ರಾಜ್ಯದ ಪ್ರತಿ ಜಿಲ್ಲೆಯಿಂದ ಒಂದೊಂದು ಕಾಲೇಜಿನಂತೆ ಒಟ್ಟು 72 ಕಾಲೇಜುಗಳನ್ನು ಸೆಂಟರ್‌ ಆಫ್‌ ಎಕ್ಸೆಲೆನ್ಸ್‌‌ ಯೋಜನೆಯಡಿ ಅಭಿವೃದ್ಧಿ ಮಾಡುವುದಕ್ಕೆ ಮುಂದಾಗಿದೆ. ಇನ್ನು ಈ ಬಗ್ಗೆ ಇತ್ತೀಚೆಗೆ ನಡೆದ ಸಿಎಂ ಜೊತೆಗಿನ ಸಭೆಯಲ್ಲಿ ಯೋಜನೆಗೆ ಒಪ್ಪಿಗೆ ಸಿಕ್ಕಿದೆ ಅಂತಾ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಮಾಹಿತಿ ನೀಡಿದ್ದಾರೆ.

Plan for 72 colleges development of state at cost of 1,500 crore rupees: Dr MC Sudhakar

ಏನಿದು ಸೆಂಟರ್‌ ಆಫ್‌ ಎಕ್ಸೆಲೆನ್ಸ್‌‌ ಯೋಜನೆ?

1.31 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 31 ಸರ್ಕಾರಿ ಪಾಲಿಟೆಕ್ನಿಕ್‌‌, 10 ಇಂಜಿನಿಯರಿಂಗ್ ಕಾಲೇಜುಗಳ ಆಯ್ಕೆ
2. ವಿಶ್ವ ಬ್ಯಾಂಕ್‌ನಿಂದ ಒಟ್ಟು 1,540 ಕೋಟಿ ರೂಪಾಯಿ ಸಾಫ್ಟ ಲೋನ್‌ ಮೂಲಕ ಪಡೆಯುವುದು
3. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 620 ಕೋಟಿ ರೂ. ಅಂದಾಜು ವೆಚ್ಚ
4. ಸರ್ಕಾರಿ ಪಾಲಿಟೆಕ್ನಿಕ್‌‌ ಕಾಲೇಜಿಗೆ 620 ಕೋಟಿ ವೆಚ್ಚ ಅಂದಾಜು
5. ಇಂಜಿನಿಯರ್ ಕಾಲೇಜಿಗೆ 300 ಕೋಟಿ ಅಂದಾಜು ವೆಚ್ಚದಲ್ಲಿ ಯೋಜನೆ ಪ್ಲಾನ್ ರೂಪಿಸಿಕೊಳ್ಳಲಾಗಿದೆ.

ಸರ್ಕಾರಿ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸೆಂಟರ್‌ ಆಫ್‌ ಎಕ್ಸೆಲೆನ್ಸ್‌ ಯೋಜನೆ ನೆರವಾಗಲಿದ್ದು, ಮೂಲಭೂತ ಸೌಕರ್ಯ, ಭೋಧನಾ ಸಿಬ್ಬಂದಿ ಅಗತ್ಯ ಬೇಡಿಕೆಗಳನ್ನು ಪೂರೈಸಲು ಇದು ನೆರವಾಗಲಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆಗೂ ಉನ್ನತ ಶಿಕ್ಷಣ ಸಚಿವ ಸುಧಾಕರ್ ಹಾಗೂ ಹಿರಿಯ ಅಧಿಕಾರಿಗಳು ಚರ್ಚೆ ಮಾಡಿದ್ದು, ಯೋಜನೆ ಜಾರಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆಯೂ ಸೂಚನೆ ನೀಡಿದ್ದಾರಂತೆ.

ಒಟ್ಟಾರೆ ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ಸರ್ಕಾರ ಸಿಹಿ ಸುದ್ದಿಯನ್ನ ನೀಡಿದ್ದು, ಖಾಸಗಿ ಶಿಕ್ಷಣ ಸಂಸ್ಥೆಗಳ ರೀತಿ ಗುಣಮಟ್ಟದ ಶಿಕ್ಷಣ ನೀಡುವ ಭರವಸೆ ನೀಡಿದೆ. ಸೆಂಟರ್ ಆಫ್‌ ಎಕ್ಸೆಲೆನ್ಸ್‌ ಯೋಜನೆಯಡಿಯಲ್ಲಿ ಬರೋಬ್ಬರಿ 1,500 ಕೋಟಿಗೂ ಹೆಚ್ಚಿನ ವೆಚ್ಚದಲ್ಲಿ ಸರ್ಕಾರಿ ಕಾಲೇಜುಗಳ ಅಭಿವೃದ್ಧಿಗೆ ಆಸಕ್ತಿ ತೋರಿದೆ. ಆದರೆ ಇಂತಹ ಭರವಸೆಗಳು ಕೇವಲ ಭರವಸೆಗಳಾಗಿ ಉಳಿಯದೆ ಶೀಘ್ರ ಕಾರ್ಯರೂಪಕ್ಕೆ ಬರಲಿ ಅನ್ನೋದೆ ಎಲ್ಲರ ಆಶಯ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+