ಬೆಂಗಳೂರಲ್ಲಿ ಸೆ.1 ರಿಂದ ಪ್ಲಾಸ್ಟಿಕ್ ನಿಷೇಧ; ಬಳಸಿದರೆ ದಂಡ

ಬೆಂಗಳೂರು, ಆಗಸ್ಟ್ 19 : ಬೆಂಗಳೂರು ನಗರದಲ್ಲಿ ಸೆಪ್ಟೆಂಬರ್ 1 ರಿಂದ ಪ್ಲಾಸ್ಟಿಕ್ ನಿಷೇಧ ಕಟ್ಟುನಿಟ್ಟಾಗಿ ಜಾರಿಗೆ ಬರಲಿದೆ. ಜನರು ಪ್ಲಾಸ್ಟಿಕ್ ಬಳಕೆ ಮಾಡಿದರೆ ಸ್ಥಳದಲ್ಲಿಯೇ ದಂಡ ಹಾಕಲು ಪಾಲಿಕೆ ತೀರ್ಮಾನಿಸಿದೆ.

ನಗರದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸುವ ನಿಯಮ ಹಿಂದಿನಿಂದಲೂ ಜಾರಿಯಲ್ಲಿದೆ. ಆದರೆ, ಈಗ ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸಿದ್ಧತೆ ನಡೆದಿದೆ. ಈಗಾಗಲೇ ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಲಾಗಿದೆ.

ಸೆಪ್ಟೆಂಬರ್ 1 ರಿಂದ ಯಾವುದೇ ಅಂಗಡಿಗಳಲ್ಲಿ ಗ್ರಾಹಕರಿಗೆ ಸಾಮಾಗ್ರಿಗಳನ್ನು ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳಲ್ಲಿ ಕೊಡುವಂತಿಲ್ಲ. ಜನರು ಸಹ ಕೈಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಹಿಡಿದು ಓಡಾಡುವಂತಿಲ್ಲ.

Plastic Ban In Bengaluru City From September 1

ಪ್ಲಾಸ್ಟಿಕ್ ಬಳಕೆ ಮಾಡಿದರೆ ಮೊದಲ ಬಾರಿಗೆ 500 ರೂ., 2 ನೇ ಬಾರಿಗೆ 5000 ರೂ. ದಂಡ ವಿಧಿಸಲಾಗುತ್ತದೆ. ಪ್ಲಾಸ್ಟಿಕ್ ಉತ್ಪಾದಕರು ಮತ್ತು ಮಾರಾಟ ಮಾಡುವವರಿಗೂ ಈ ಕುರಿತು ಈಗಾಗಲೇ ಸೂಚನೆ ನೀಡಲಾಗಿದೆ.

ಪಾಲಿಕೆಯ ವಿಶೇಷ ಕೌನ್ಸಿಲ್ ಸಭೆಯಲ್ಲಿ ಭಾಗವಹಿಸಿದ್ದ ಎನ್‌ಜಿಟಿ ರಾಜ್ಯ ಸಮಿತಿಯ ಅಧ್ಯಕ್ಷ ನ್ಯಾಯಮೂರ್ತಿ ಸುಭಾಷ್ ಬಿ. ಅಡಿ ಈ ವಿಷಯವನ್ನು ಪ್ರಕಟಿಸಿದರು. ಈ ವಿಚಾರವನ್ನು ಕೆಲವು ಸದಸ್ಯರು ಸ್ವಾಗತಿಸಿದರು. ಆದರೆ, ಪೂರ್ವ ಸಿದ್ಧತೆ ಇಲ್ಲದೆ ದಂಡ ಹಾಕುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

"ಈಗಾಗಲೇ ಪ್ಲಾಸ್ಟಿಕ್ ತಯಾರಿಕೆಯ ಕೆಲ ಘಟಕಗಳನ್ನು ಬಂದ್ ಮಾಡಲಾಗಿದೆ. ಮತ್ತಷ್ಟು ಘಟಕಗಳನ್ನು ಪತ್ತೆ ಹಚ್ಚಿ ಬಾಗಿಲು ಹಾಕಿಸುವ ಕೆಲಸವನ್ನು ಮುಂದುವರೆಸಲಾಗುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಪ್ಲಾಸ್ಟಿಕ್‌ಗೆ ಪರ್ಯಾಯವಾಗಿ ಬಟ್ಟೆ ಬ್ಯಾಗ್ ಸಿಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ನ್ಯಾಯಮೂರ್ತಿಗಳು ವಿವರಣೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+