ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಪೀಡಿತ ಬೆಂಗಳೂರಿನ ಯಾವ ಕಂಪನಿಯಲ್ಲಿದ್ದ.? ಹೇಳಿ ಪ್ಲೀಸ್

|
Google Oneindia Kannada News

ಡೆಡ್ಲಿ ಕೊರೊನಾ ವೈರಸ್ ನಿಂದಾಗಿ ಇಡೀ ವಿಶ್ವಕ್ಕೆ ವಿಶ್ವವೇ ಆತಂಕಕ್ಕೀಡಾಗಿದೆ. ಮಹಾಮಾರಿ ಕೊರೊನಾ ವೈರಸ್ ನಿಂದ ಚೀನಾದಲ್ಲಿ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ.

ಮಾರಕ ಕೊರೊನಾ ವೈರಸ್ ಸೋಂಕು ಇದೀಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ತೆಲಂಗಾಣ ಮೂಲಕದ ಟೆಕ್ಕಿಗೂ ಕೊರೊನಾ ವೈರಸ್ ಸೋಂಕು ತಗುಲಿರುವುದು ಖಚಿತವಾಗಿದೆ.

ಈ ವಿಚಾರ ತಿಳಿಯುತ್ತಿದ್ದಂತೆಯೇ, ಆ ಕೊರೊನಾ ಸೋಂಕು ತಗುಲಿದ ವ್ಯಕ್ತಿ ಯಾರು.? ಆ ಟೆಕ್ಕಿ ಬೆಂಗಳೂರಿನ ಯಾವ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.? ಆತನ ವಿಳಾಸವನ್ನು ಬಹಿರಂಗ ಪಡಿಸಿ ಎಂದು ನೆಟ್ಟಿಗರು ಒತ್ತಾಯಿಸುತ್ತಿದ್ದಾರೆ. ಮುಂದೆ ಓದಿರಿ..

ಟೆಕ್ಕಿಗೆ ಕೊರೊನಾ; ಮಹತ್ವದ ಸಭೆ ಕರೆದ ಆರೋಗ್ಯ ಸಚಿವ ಶ್ರೀರಾಮುಲುಟೆಕ್ಕಿಗೆ ಕೊರೊನಾ; ಮಹತ್ವದ ಸಭೆ ಕರೆದ ಆರೋಗ್ಯ ಸಚಿವ ಶ್ರೀರಾಮುಲು

ಗುರುತು ಬಹಿರಂಗ ಪಡಿಸುವುದಿಲ್ಲ!

ಗುರುತು ಬಹಿರಂಗ ಪಡಿಸುವುದಿಲ್ಲ!

ಕೊರೊನಾ ವೈರಸ್ ಸೋಂಕು ತಗುಲಿರುವ ಟೆಕ್ಕಿಯ ಗುರುತು ಮತ್ತು ಆತ ಕೆಲಸ ಮಾಡುತ್ತಿದ್ದ ಬೆಂಗಳೂರಿನ ಕಂಪನಿಯ ಹೆಸರನ್ನು ಬಹಿರಂಗ ಪಡಿಸಿಲ್ಲ. ಗೌಪ್ಯತೆ ಕಾಪಾಡಿಕೊಳ್ಳುವ ದೃಷ್ಟಿಯಿಂದ ಟೆಕ್ಕಿ ಕೆಲಸ ಮಾಡುತ್ತಿದ್ದ ಕಂಪನಿಯ ಹೆಸರನ್ನು ಆರೋಗ್ಯ ಇಲಾಖೆ ಮುಚ್ಚಿಟ್ಟಿದೆ.

ಟ್ವಿಟ್ಟರ್ ನಲ್ಲಿ ಪ್ರಶ್ನೆಗಳ ಸುರಿಮಳೆ

ಟ್ವಿಟ್ಟರ್ ನಲ್ಲಿ ಪ್ರಶ್ನೆಗಳ ಸುರಿಮಳೆ

''ಕೊರೊನಾ ವೈರಸ್ ಸೋಂಕು ತಗುಲಿರುವ ಟೆಕ್ಕಿ ಬೆಂಗಳೂರಿನಲ್ಲಿ ಯಾವ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ ಅಂತ ಯಾರಿಗಾದರೂ ತಿಳಿದಿದೆಯಾ.? ಕೆಲವರು ಮಾನ್ಯತಾ ಟೆಕ್ ಪಾರ್ಕ್ ಅಂತ ಹೇಳುತ್ತಿದ್ದಾರೆ. ವಿಷಯ ಗೊತ್ತಾದರೆ ಪ್ಲೀಸ್ ತಿಳಿಸಿ'' ಎಂದು ಟ್ವೀಟಿಗರೊಬ್ಬರು ಟ್ವೀಟ್ ಮಾಡಿದ್ದಾರೆ.

ಯಾರೂ ಹೇಳುತ್ತಿಲ್ಲ ಯಾಕೆ.?

ಯಾರೂ ಹೇಳುತ್ತಿಲ್ಲ ಯಾಕೆ.?

''ಬೆಂಗಳೂರಿನಿಂದ ಹೈದರಾಬಾದ್ ಗೆ ಪ್ರಯಾಣ ಬೆಳೆಸಿದ ಕೊರೊನಾ ವೈರಸ್ ಸೋಂಕಿತ ವ್ಯಕ್ತಿ ಯಾವ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಂತ ಗೊತ್ತಿದ್ಯಾ? ಕಂಪನಿಯ ಹೆಸರನ್ನು ಯಾರೂ ಹೇಳುತ್ತಿಲ್ಲ. ಯಾಕೆ.? ಜನರ ಪ್ರಾಣಕ್ಕಿಂತ ಲಾಭವೇ ಹೆಚ್ಚಾಯ್ತಾ.?'' ಎಂಬ ಟ್ವೀಟ್ ಗಳೇ ಹೆಚ್ಚಾಗಿವೆ.

ಮಾಹಿತಿ ನೀಡಿ

ಮಾಹಿತಿ ನೀಡಿ

''ಕಂಪನಿಯ ಹೆಸರನ್ನು ಹೇಳಿ.. ನಮಗೆ ಆಫೀಸ್ ಗೆ ಹೋಗಲು ಭಯ ಆಗುತ್ತಿದೆ'' ಎಂದು ಟೆಕ್ಕಿಗಳು ತಮ್ಮ ಆತಂಕವನ್ನು ಟ್ವೀಟ್ ಮೂಲಕ ವ್ಯಕ್ತಪಡಿಸುತ್ತಿದ್ದಾರೆ.

ಟೆಕ್ಕಿಗೆ ಕೊರೊನಾ ಸೋಂಕು ತಗುಲಿದ್ದು ಹೇಗೆ.?

ಟೆಕ್ಕಿಗೆ ಕೊರೊನಾ ಸೋಂಕು ತಗುಲಿದ್ದು ಹೇಗೆ.?

ಫೆಬ್ರವರಿ 17 ರಂದು ಕೆಲಸದ ನಿಮಿತ್ತ ಟೆಕ್ಕಿ ದುಬೈಗೆ ತೆರಳಿದ್ದರು. ಅಲ್ಲಿ ಹಾಂಗ್ ಕಾಂಗ್ ನಿಂದ ಬಂದಿದ್ದವರ ಜೊತೆಗೆ ಆ ಟೆಕ್ಕಿ ಕೆಲಸ ಮಾಡಿದ್ದ. ದುಬೈನಿಂದ ಬೆಂಗಳೂರಿಗೆ ಬಂದಿದ್ದ ಟೆಕ್ಕಿಗೆ ಜ್ವರ ಕಾಣಿಸಿಕೊಂಡಿತ್ತು. ಬಳಿಕ ಬಸ್ ಮೂಲಕ ಹೈದರಾಬಾದ್ ಗೆ ಟೆಕ್ಕಿ ತೆರಳಿದ್ದ. ಜ್ವರ ಕಡಿಮೆ ಆಗದ ಕಾರಣ ಅಲ್ಲಿನ ಆಸ್ಪತ್ರೆಗೆ ದಾಖಲಾದ ಟೆಕ್ಕಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿತ್ತು.

English summary
Please reveal corona infected techie company name compels social media users.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X