ಶಾಸಕ ಎಸ್. ಆರ್. ವಿಶ್ವನಾಥ್ ಹತ್ಯೆಗೆ ಸ್ಕೆಚ್ : ರೌಡಿ ಕುಳ್ಳ ದೇವರಾಜ್ ಮತ್ತು ಗೋಪಾಲಕೃಷ್ಣ ನಡುವೆ 20 ಭೇಟಿ
ಬೆಂಗಳೂರು, ಡಿ. 02: ಶಾಸಕ ಎಸ್. ಆರ್. ವಿಶ್ವನಾಥ್ ಹತ್ಯೆಗೆ ಸ್ಕೆಚ್ ರೂಪಿಸಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಹಾಗೂ ರೌಡಿ ಶೀಟರ್ ಕುಳ್ಳ ದೇವರಾಜ್ 20 ಕ್ಕೂ ಹೆಚ್ಚು ಬಾರಿ ಭೇಟಿ ಮಾಡಿರುವ ಸಂಗತಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಯಲಹಂಕ ಕ್ಷೇತ್ರದ ಶಾಸಕ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದೂರುದಾರ ಎಸ್.ಆರ್. ವಿಶ್ವನಾಥ್ ಅವರಿಂದ ಹೆಚ್ಚಿನ ಹೇಳಿಕೆ ಪಡೆಯುವ ಸಂಬಂಧ ರಾಜಾನುಕುಂಟೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಪೊಲೀಸರ ನಡೆ ಅನುಮಾನ:
ಶಾಸಕ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ಕುಳ್ಳ ದೇವರಾಜ್ ಹೆಸರನ್ನು ಕೈ ಬಿಡಲಾಗಿದೆ. ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ವಿರುದ್ಧ ಮಾತ್ರ ಎಫ್ಐಆರ್ ದಾಖಲಿಸಲಾಗಿದೆ. ರಾಜಾನುಕುಂಟೆ ಪೊಲೀಸರ ಈ ನಡೆ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಎಫ್ಐಆರ್ ದಾಖಲಿಸಿರುವ ಪಿಎಸ್ಐ ಬಬಿತಾ ಅವರ ಅವರು ಶಾಸಕರ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರಾ ಎಂಬ ಅನುಮಾನ ಮೂಡಿದೆ.

ರಾಜಾನುಕುಂಟೆಯಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ದೂರುದಾರ, ಶಾಸಕ ಎಸ್.ಆರ್ ವಿಶ್ವನಾಥ್ ಅವರಿಗೆ ನೋಟಿಸ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ಎಸ್.ಆರ್. ವಿಶ್ವನಾಥ್ ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ, ಬೆಂಗಳೂರು ಗ್ರಾಮಾಂತರ ಎಸ್ಪಿ ವಂಶಿಕೃಷ್ಣ ರಾಜಾನುಕುಂಟೆ ಠಾಣೆಗೆ ಭೇಟಿ ನೀಡಿದ್ದಾರೆ. ಶಾಸಕರ ಹೇಳಿಕೆ ಬಳಿಕ ಸುಪಾರಿ ನೀಡಿದ ಅರೋಪ ಎದುರಿಸುತ್ತಿರುವ ಗೋಪಾಲಕೃಷ್ಣ ಮತ್ತು ಕುಳ್ಳ ದೇವರಾಜ್ ಅವರನ್ನು ರಾಜಾನುಕುಂಟೆ ಪೊಲೀಸರು ವಿಚಾರಣೆ ನಡೆಸಲಿದ್ದಾರೆ.
ಕಡಪ ಕಿಲ್ಲರ್ಸ್ ಎಂಟ್ರಿ ಮಾತು:
ಶಾಸಕ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸ್ಕೆಚ್ ಹಾಕಿದ ಸಂಬಂಧ ಅಡಿಯೋ ವೈರಲ್ ಆಗಿದೆ. ಅದರಲ್ಲಿ ಕಡಪದಿಂದ ಕಾಂಟ್ರ್ಯಾಕ್ಟ್ ಕಿಲ್ಲರ್ಸ್ ನ್ನು ಬೆಂಗಳೂರಿಗೆ ಕರೆಸಲಾಗಿತ್ತಾ? ಅವರು ಬೆಂಗಳೂರಿನ ಹೋಟೆಲ್ ನಲ್ಲಿ ಬಾಡಿಗೆ ಹಂತಕರು ತಂಗಿದ್ದರು. ಅವರ ಹಣ ನಾನೇ ಪಾವತಿ ಮಾಡುತ್ತೇನೆ ಎಂದು ಹೇಳಿದ್ದಾಗಿ ರೌಡಿ ಶೀಟರ್ ದೇವರಾಜ್ ಮತ್ತು ಗೋಪಾಲಕೃಷ್ಣ ನಡುವಿನ ಸಂಭಾಷಣೆಯ ಅಡಿಯೂ ವೈರಲ್ ಆಗಿದೆ. ಇದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಸುಪಾರಿ ಕಿಲ್ಲರ್ಸ್ ಕರೆಸಿ ಹತ್ಯೆ ಮಾಡುವ ಪ್ಲಾನ್ ರೂಪಿಸಿದವರು ಅದನ್ನು ರೆಕಾರ್ಡ್ ಮಾಡಿಕೊಂಡಿದ್ದು ಯಾಕೆ ? ಸಂಚು ರೂಪಿಸಿದವರು ರೆಕಾರ್ಡ್ ಮಾಡಿಕೊಳ್ಳುತ್ತಾರಾ ? ಅಥವಾ ಗೋಪಾಲಕೃಷ್ಣ ನನ್ನು ಹಳ್ಳಕ್ಕೆ ತಳ್ಳಲು ಸುಫಾರಿ ಕಿಲ್ಲಿಂಗ್ ಪ್ರಕರಣವೇ ನಾಟಕವಾ ಎಂಬುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬರಬೇಕಿದೆ.
ವಿಡಿಯೋ ರೆಕಾರ್ಡ್ ಮೊಬೈಲ್ ಇಲ್ಲ:
ಶಾಸಕ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸ್ಕೆಚ್ ಹಾಕಿದ ಪ್ರಕರಣದಲ್ಲಿ ವಿಡಿಯೋ ಮಾಡಿರುವ ಮೂಲ ಮೊಬೈಲ್ ನಾಪತ್ತೆಯಾಗಿದೆ. ರೆಕಾರ್ಡ್ ಮಾಡಿದ ವಿಡಿಯೂ ಕೂಡ ಎಡಿಟ್ ಮಾಡಿದ್ದು, ಮೂಲ ಮೊಬೈಲ್ ಗಾಗಿ ಪೊಲೀಸರು ನಡೆಸುತ್ತಿದ್ದಾರೆ. ಮೂಲ ವಿಡಿಯೋಗಾಗಿ ಶೋಧ ನಡೆಸಲಾಗುತ್ತಿದೆ. ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ವಿಡಿಯೋ ರವಾನಿಸಲು ಪೊಲೀಸರು ಮೂಲ ಮೊಬೈಲ್ ಹಾಗೂ ಎಡಿಟ್ ಆಗದ ವಿಡಿಯೋ ಬೇಕಾಗಿದ್ದು, ಅದಕ್ಕಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಗೋಪಾಲಕೃಷ್ಣ ಮುಗಿಸಲು ಸ್ಟಿಂಗ್ ಪ್ಲಾನ್ :
ಇನ್ನು ಶಾಸಕ ಎಸ್.ಆರ್. ವಿಶ್ವನಾಥ್ ವಿರೋಧಿ, ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಅವರ ರಾಜಕೀಯ ಭವಿಷ್ಯ ಮುಗಿಸಲು ಕುಳ್ಳ ದೇವರಾಜ್ ನೇತೃತ್ವದಲ್ಲಿ "ಸಂಚು" ರೂಪಿಸಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಒಬ್ಬ ರೌಡಿ ಶೀಟರ್ ಹಣಕ್ಕಾಗಿ ಬಾಡಿಗೆ ಹಂತಕರನ್ನು ತರುವುದು, ಶಾಸಕರ ಕೊಲೆಗೆ ಮುಹೂರ್ತ ಇಡುವುದು, ಆ ಬಳಿಕ ರೌಡಿಗೆ ಪಶ್ಚಾತಾಪ ಕಾಡುವುದು, ಆತ, ಕ್ಷಮಾಪಣ ಪತ್ರ ಬರೆದು ಶಾಸಕರ ಮನೆ ಬಾಗಿಲಿನಲ್ಲಿ ಹಾಕುವುದು, ಅದನ್ನು ನೋಡಿ ಶಾಸಕರು ಗಾಬರಿಯಾಗಿ ಪೊಲೀಸ್ ಠಾಣೆಗೆ ದೂರು ನೀಡುವುದು, ಸ್ಯಾಂಡಲ್ ವುಡ್ ಸಿನಿಮಾಗಾಗಿ ರೂಪಿಸಿದ ಕಥೆಯಂತಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications