ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿಗೆ ಮೋದಿ: 3 ದಿನ ಈ ರಸ್ತೆಗಳಲ್ಲಿ ಸಂಚಾರಕ್ಕೆ ನಿಷೇಧ, ಯಾವುದೆಲ್ಲಾ ತಿಳಿಯಿರಿ

ಪಿಎಂ ಮೋದಿ ಸೋಮವಾರ ಬೆಂಗಳೂರಿಗೆ ಆಗಮಿಸಲಿದ್ದು, ಸಹಜವಾಗಿ ಉಂಟಾಗುವ ಟ್ರಾಫಿಕ್‌ ಸಮಸ್ಯೆ ನಿಯಂತ್ರಿಸುವ ನಿಟ್ಟಿನಲ್ಲಿ 3 ದಿನಗಳ ಕಾಲ ಎಲ್ಲ ಮಾದರಿಯ ಸರಕು ಸಾಗಣೆ ವಾಹನಗಳ ನಗರ ಪ್ರವೇಶವನ್ನು ನಿಷೇಧಿಸಲಾಗಿದೆ.

|
Google Oneindia Kannada News

ಬೆಂಗಳೂರು, ಫೆಬ್ರವರಿ 4: ಬೆಂಗಳೂರಿಗೆ ಸೋಮವಾರ ಫೆಬ್ರವರಿ 6ರಂದು ಪ್ರಧಾನಿ ನರೇಂದ್ರ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಕೆಲವು ರಸ್ತೆಗಳಲ್ಲಿ ಮೂರು ದಿನಗಳ ಕಾಲ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಪಿಎಂ ಮೋದಿ ಸೋಮವಾರ ಬೆಂಗಳೂರಿಗೆ ಆಗಮಿಸಲಿದ್ದು, ಸಹಜವಾಗಿ ಉಂಟಾಗುವ ಟ್ರಾಫಿಕ್‌ ಸಮಸ್ಯೆ ನಿಯಂತ್ರಿಸುವ ನಿಟ್ಟಿನಲ್ಲಿ 3 ದಿನಗಳ ಕಾಲ ಎಲ್ಲ ಮಾದರಿಯ ಸರಕು ಸಾಗಣೆ ವಾಹನಗಳ ನಗರ ಪ್ರವೇಶವನ್ನು ನಿಷೇಧಿಸಲಾಗಿದೆ.

ಫೆ. 6ಕ್ಕೆ ಮೋದಿಯಿಂದ ತುಮಕೂರಿನ ಎಚ್‌ಎಎಲ್‌ ಘಟಕ ಉದ್ಘಾಟನೆಫೆ. 6ಕ್ಕೆ ಮೋದಿಯಿಂದ ತುಮಕೂರಿನ ಎಚ್‌ಎಎಲ್‌ ಘಟಕ ಉದ್ಘಾಟನೆ

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಅವರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಇಂಡಿಯಾ ಎನರ್ಜಿ ವೀಕ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮ ಫೆಬ್ರವರಿ 5ರಿಂದ 8ರವರೆಗೆ ಮೂರು ದಿನಗಳ ಕಾಲ ನಡೆಯಲಿದ್ದು ಇದನ್ನು ಮೋದಿ ಉದ್ಘಾಟಿಸಲಿದ್ದಾರೆ. ಇಲ್ಲಿ ದೇಶ ವಿದೇಶಗಳಿಂದ ಗಣ್ಯ ವ್ಯಕ್ತಿಗಳು ಬರಲಿದ್ದು, ಇದರ ಜೊತೆ ಪ್ರಧಾನಿ ಮೋದಿ ಭದ್ರತಾ ಪ್ರೋಟೋಕಾಲ್‌ ಅಡಿಯಲ್ಲಿ ಬೆಂಗಳೂರಿನ ರಸ್ತೆ ಸಂಚಾರ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಬರುವುದು ಮತ್ತು ಅಂತಾರಾಷ್ಟ್ರೀಯ ಮಟ್ಟದ ಎನರ್ಜಿ ವೀಕ್‌ ಕಾರ್ಯಕ್ರಮ ಹಿನ್ನೆಲೆಯಲ್ಲಿ ಫೆಬ್ರವರಿ 5, 6, 7 ರಂದು ಬೆಂಗಳೂರು ನಗರದೊಳಗೆ ಎಲ್ಲಾ ರೀತಿಯ ಲಘು, ಮಧ್ಯಮ ಹಾಗೂ ಭಾರಿ ಸರಕು ಸಾಗಣೆ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಇವುಗಳೊಂದಿಗೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆ ತನಕ ಕೆಲವು ಪ್ರಮುಖ ಮಾರ್ಗಗಳಲ್ಲಿ ಸಾರ್ವಜನಿಕ ವಾಹನಗಳ ಸಂಚಾರವನ್ನೂ ನಿರ್ಬಂಧಿಸಲಾಗಿದೆ.

ವಿಶ್ವದ ಅತ್ಯಂತ ಜನಪ್ರಿಯ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿಯೇ ನಂಬರ್ 1!ವಿಶ್ವದ ಅತ್ಯಂತ ಜನಪ್ರಿಯ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿಯೇ ನಂಬರ್ 1!

ಸೋಮನಹಳ್ಳಿಯವರೆಗೆ ಸಂಚಾರ ವ್ಯತ್ಯಯ

ಸೋಮನಹಳ್ಳಿಯವರೆಗೆ ಸಂಚಾರ ವ್ಯತ್ಯಯ

ಸರಕು ಸಾಗಣೆ ವಾಹನಗಳ ಸಂಚಾರ ನಿರ್ಬಂಧ ವಿಧಿಸಿರುವ ರಸ್ತೆಗಳೆಂದರೆ 1. ತುಮಕೂರು ರಸ್ತೆಯಿಂದ ಬೆಂಗಳೂರು ನಗರದೊಳಗೆ ಸರಕು ಸಾಗಣೆ ವಾಹನಗಳಿಗೆ ನಿರ್ಬಂಧ 2. ಮೈಸೂರು ರಸ್ತೆಯಿಂದ ನಾಯಂಡಹಳ್ಳಿ ಮತ್ತು ಸೋಮನಹಳ್ಳಿಯವರೆಗೆ ಸಂಚಾರ ಮಾಡುವಂತಿಲ್ಲ. 3. ಬಳ್ಳಾರಿ ರಸ್ತೆಯಿಂದ ಬೆಂಗಳೂರು ನಗರದೊಳಗೆ ಪ್ರವೇಶ ನಿಷೇಧ. 4. ಹೊಸಕೋಟೆ ರಸ್ತೆಯಿಂದ ಹೆಬ್ಬಾಳವರೆಗೆ ಸಂಚಾರ ಮುಕ್ತವಿಲ್ಲ. ಇವು ಸರಕು ಸಾಗಣೆ ವಾಹನಗಳಿಗೆ ಮಾತ್ರ.

ಸೊಂಡೆಕೊಪ್ಪ ಕ್ರಾಸ್ ನಲ್ಲಿ ಬಲ ತಿರುವು ಪಡೆಯಿರಿ

ಸೊಂಡೆಕೊಪ್ಪ ಕ್ರಾಸ್ ನಲ್ಲಿ ಬಲ ತಿರುವು ಪಡೆಯಿರಿ

ಇನ್ನು ಮಾರ್ಗ ಬದಲಾವಣೆ ಇರುವ ರಸ್ತೆಗಳೆಂದರೆ 1. ತುಮಕೂರು ಕಡೆಯಿಂದ ಬಳ್ಳಾರಿ ರಸ್ತೆ, ಹೈದರಾಬಾದ್ ಕಡೆಗೆ ಸಂಚರಿಸುವ ವಾಹನಗಳು ಡಾಬಸ್ ಪೇಟೆಯಲ್ಲಿ ಎಡ ತಿರುವು ಪಡೆದು ದೊಡ್ಡಬಳ್ಳಾಪುರ ಕಡೆಗೆ ಹೋಗಬೇಕು. 2. ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಸಂಚರಿಸುವ ವಾಹನಗಳು ಸೊಂಡೆಕೊಪ್ಪ ಕ್ರಾಸ್ ನಲ್ಲಿ ಬಲ ತಿರುವು ಪಡೆದು ತಾವರೆಕೆರೆ ಮುಖಾಂತರ ಮಾಗಡಿ ರಸ್ತೆಗೆ ಸಂಪರ್ಕ ಪಡೆದು ಆ ಮೂಲಕ ನೈಸ್ ರಸ್ತೆ ತಲುಪಿ ಮೈಸೂರು ರಸ್ತೆ, ಎಲೆಕ್ಟ್ರಾನಿಕ್ ಸಿಟಿ, ಹೊಸೂರು ಕಡೆಗೆ ಹೋಗಬೇಕು. 3. ಬಳ್ಳಾರಿ ರಸ್ತೆ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಸಂಚರಿಸುವ ವಾಹನಗಳು ದೇವನಹಳ್ಳಿ ಬಲ ತಿರುವು ಪಡೆದು ದೊಡ್ಡಬಳ್ಳಾಪುರ ರಸ್ತೆಯ ಮೂಲಕ ತುಮಕೂರು ಕಡೆಗೆ ಹೋಗಬಹುದು. 4. ಹೊಸಕೋಟೆಯಿಂದ ತುಮಕೂರು ಕಡೆಗೆ ಸಂಚರಿಸುವ ವಾಹನಗಳು ಬೂದಿಗೆರೆ ಕ್ರಾಸ್ ಮುಖಾಂತರ ದೇವನಹಳ್ಳಿ, ದೊಡ್ಡಬಳ್ಳಾಪುರ ಮೂಲಕ ಡಾಬಸ್ ಪೇಟೆ ಮೂಲಕ ತುಮಕೂರು ಮಾರ್ಗದತ್ತ ಸಂಚಾರ ಮಾಡಬೇಕು ಎಂದು ತಿಳಿಸಲಾಗಿದೆ.

11:25ಕ್ಕೆ ರಸ್ತೆ ಮೂಲಕ ಬಿಐಇಸಿಗೆ ಆಗಮನ

11:25ಕ್ಕೆ ರಸ್ತೆ ಮೂಲಕ ಬಿಐಇಸಿಗೆ ಆಗಮನ

ನರೇಂದ್ರ ಮೋದಿ ಪ್ರವಾಸ ವೇಳಾಪಟ್ಟಿ: ಫೆ. 6 ರಂದು ಬೆಳಿಗ್ಗೆ 8:20ಕ್ಕೆ ದೆಹಲಿಯಿಂದ ವಿಶೇಷ ವಿಮಾನದ ಬೆಂಗಳೂರಿಗೆ ಪ್ರಯಾಣ. ಬೆಳಗ್ಗೆ 10:55ಕ್ಕೆ ಬೆಂಗಳೂರು ಏರ್ಪೋರ್ಟ್ ತಲುಪಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಏರ್ಪೋರ್ಟ್ ನಿಂದ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರು ಅಂತರ್ ರಾಷ್ಟ್ರೀಯ ಎಕ್ಸಿಬಿಷನ್ ಸೆಂಟರ್‌ಗೆ ಆಗಮಿಸಲಿದ್ದಾರೆ. 11:25ಕ್ಕೆ ರಸ್ತೆ ಮೂಲಕ ಬಿಐಇಸಿ ತಲುಪಲಿರುವ ಮೋದಿ ಅವರು ಇಲ್ಲಿನ ಇಂಡಿಯಾ ಎನರ್ಜಿ ವೀಕ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಸಂಜೆ 4.30ಕ್ಕೆ ಎಚ್.ಎ. ಎಲ್ ಘಟಕ ಉದ್ಘಾಟನೆ

ಸಂಜೆ 4.30ಕ್ಕೆ ಎಚ್.ಎ. ಎಲ್ ಘಟಕ ಉದ್ಘಾಟನೆ

ಬಳಿಕ ಇನ್ನು ಬಿಐಇಸಿ ಕಾರ್ಯಕ್ರಮ ಮುಗಿಸಿದ ನಂತರ ಮಧ್ಯಾಹ್ನ 2.45ಕ್ಕೆ ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ತುಮಕೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸಂಜೆ 4.30ಕ್ಕೆ ಎಚ್.ಎ. ಎಲ್ ಹೆಲಿಕ್ಯಾಪ್ಟರ್ ತಯಾರಿಕ ಘಟಕವನ್ನು ಉದ್ಘಾಟನೆ ಮಾಡಲಿದ್ದಾರೆ. ನಂತರ, ಜಲಜೀವನ್ ಮಿಷನ್ ಯೋಜನೆಗಳನ್ನು ಇಲ್ಲಿ ಉದ್ಘಾಟಿಸಲಿದ್ದಾರೆ. ಸಂಜೆ 4.40ಕ್ಕೆ ತುಮಕೂರು ಹೆಲಿಪ್ಯಾಡ್ ನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದತ್ತ ಪ್ರಯಾಣ ಮಾಡಲಿದ್ದಾರೆ. ಸಂಜೆ 7.20ಕ್ಕೆ ಬೆಂಗಳೂರು ಏರ್ಪೋರ್ಟ್ ನಿಂದ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ. ರಾತ್ರಿ 8 ಗಂಟೆಗೆ ದೆಹಲಿ ತಲುಪಲಿದ್ದಾರೆ.

https://kannada.oneindia.com/features/karnataka-7th-pay-commission-questionnaire-on-pay-scale-and-allowances-282264.html

English summary
In view of Prime Minister Narendra's arrival in Bengaluru on Monday, February 6, traffic has been restricted on some roads in Bengaluru for three days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X