PM Modi In Tejas Aircraft: ತೇಜಸ್ ಯುದ್ಧ ವಿಮಾನದಲ್ಲಿ ಕಾಣಿಸಿಕೊಂಡ ಪ್ರಧಾನಿ ಮೋದಿ
ಬೆಂಗಳೂರು, ನವೆಂಬರ್ 25: ಮೇಡ್ ಇನ್ ಇಂಡಿಯಾ ತೇಜಸ್ ಯುದ್ಧ ವಿಮಾನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾರಾಟ ನಡೆಸಿದ್ದಾರೆ. ಇಂದು(ನವೆಂಬರ್ 25) ಶನಿವಾರ ಬೆಂಗಳೂರಿಗೆ ಭೇಟಿ ನೀಡಿದ ಪ್ರಧಾನಿ ಮೋದಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ವಿಮಾನ ನಿಲ್ದಾಣದಲ್ಲಿ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ.
ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿರುವ ಬಗ್ಗೆ ಅತೀವ ಸಂತೋಷ ಹಂಚಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ನಮ್ಮ ದೇಶದ ಸ್ವದೇಶಿ ಸಾಮರ್ಥ್ಯದ ಬಗ್ಗೆ ನನ್ನ ಆತ್ಮವಿಶ್ವಾಸ ಹೆಚ್ಚಾಗಿದೆ. ಇದು ನನ್ನಲ್ಲಿ ಹೆಮ್ಮೆ ಮೂಡಿಸಿದೆ ಎಂದು ಖುಷಿ ಹಂಚಿಕೊಂಡಿದ್ದಾರೆ.

2.5 ಸೆಕೆಂಡ್‌ಗೆ 240 ಕಿಲೋ ಮೀಟರ್ ವೇಗದಲ್ಲಿ ಸಂಚರಿಸುವ ಅಂದರೆ ಒಂದು ಗಂಟೆಗೆ 2,205 ಕಿಲೋ ಮೀಟರ್ ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿರುವ ತೇಜಸ್ ಯುದ್ಧ ವಿಮಾನದ ಹಾರಾಟದ ಅನುಭವವನ್ನು ಪ್ರಧಾನಿ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ.
ತೇಜಸ್‌ನಲ್ಲಿ ಯಶಸ್ವಿಯಾಗಿ ಪ್ರಯಾಣ ಪೂರೈಸಿದ್ದೇನೆ. ಈ ಒಂದು ಅನುಭವ ವಿಸ್ಮಯಕಾರಿಯಾಗಿದೆ. ಇನ್ ಇಂಡಿಯಾ ತೇಜಸ್ ಯುದ್ಧ ವಿಮಾನದ ಪ್ರಯಾಣದ ಬಳಿಕ ನಾವು ಇಡೀ ಜಗತ್ತಿನಲ್ಲಿ ಯಾರಿಗೂ ಕಡಿಮೆ ಇಲ್ಲ ಎಂದು ಎನಿಸಿದೆ. ನಮ್ಮ ದೇಶದ ಸ್ಥಳೀಯ ಸಾಮರ್ಥ್ಯಗಳಲ್ಲಿ ನನ್ನ ವಿಶ್ವಾಸ ಗಣನೀಯವಾಗಿ ಹೆಚ್ಚಾಗಿ. ನಮ್ಮ ರಾಷ್ಟ್ರೀಯ ಸಾಮರ್ಥ್ಯದ ಬಗ್ಗೆ ಹೊಸ ಹೆಮ್ಮೆ, ಹೊಸ ಆಶಾವಾದ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತೀಯ ವಾಯುಪಡೆ, ಡಿರ್‌ಡಿಒ ಮತ್ತು ಎಚ್‌ಎಎಲ್‌ಗೆ ಅಭಿನಂದನೆ ಸಲ್ಲಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ತೇಜಸ್ ಯುದ್ಧ ವಿಮಾನದ ಹಾರಾಟ ನಡೆಸಿದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.












Click it and Unblock the Notifications