ಅಶ್ವತ್ಥನಾರಾಯಣ ಅವರ ಸ್ವಚ್ಛಭಾರತ ಕಳಕಳಿಗೆ ಭೇಷ್ ಎಂದ ಮೋದಿ
Recommended Video

ಬೆಂಗಳೂರು, ಸೆಪ್ಟೆಂಬರ್ 22: ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರನ್ನು ಪ್ರಧಾನಿ ನರೇಂದ್ರ ಮೊದಿಯವರು ಶ್ಲಾಘಿಸಿ ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗಷ್ಟೇ ನರೇಂದ್ರ ಮೋದಿಯವರು ಉದ್ಘಾಟಿಸಿದ 'ಸ್ವಚ್ಛತಾ ಹಿ ಸೇವಾ' ಅಭಿಯಾನದ ಭಾಗವಾಗಿ ಬೆಂಗಳೂರಿನ ಮತ್ತಿಕೆರೆಯ ಜಯರಾಮ್ ಕಾಲೋನಿಯಲ್ಲಿ ಡಾ.ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ನಡೆದ ಸ್ವಚ್ಛತಾ ಅಭಿಯಾನದ ಚಿತ್ರಗಳನ್ನು ಅಶ್ವತ್ಥನಾರಾಯಣ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು.
ಅಶ್ವತ್ಥನಾರಾಯಣ ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ ಮೋದಿಯವರು ಇಂಥ ಕಾರ್ಯಗಳು ಮತ್ತಷ್ಟು ನಡೆಯಲಿ ಎಂದು ಅಭಿಪ್ರಾಯಪಟ್ಟರು.
|
ಪ್ರಧಾನಿ ನರೇಂದ್ರ ಮೋದಿಯವರ ಟ್ವೀಟ್
ಡಾ.ಅಶ್ವತ್ಥ ನಾರಾಯಣ ಅವರ 'ಸ್ವಚ್ಛತಾ ಹಿ ಸೇವಾ' ಅಭಿಯಾನದ ಚಿತ್ರಗಳನ್ನು ಕಂಡು ಸಂತಸ ವ್ಯಕ್ತಪಡಿಸಿದ ಮೋದಿ, ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿ, 'ಎಕ್ಸೆಲೆಂಟ್! ನಗರದ ಸ್ವಚ್ಛತೆಯನ್ನು ಕಾಪಾಡುವಲ್ಲಿ ಇಂಥ ಕೆಲಸಗಳು ಮತ್ತಷ್ಟು ನಡೆಯಬೇಕು' ಎಂದಿದ್ದಾರೆ.
| Array |
ಧನ್ಯವಾದ ಅರ್ಪಿಸಿದ ಅಶ್ವತ್ಥನಾರಾಯಣ
ಮೋದಿಯವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ ಅಶ್ವತ್ಥ ನಾರಾಯಣ, 'ಧನ್ಯವಾದಗಳು ಪ್ರಧಾನಿ ನರೇಂದ್ರ ಮೋದಿಯವರೇ. ನಾವೆಲ್ಲ ಸ್ವಚ್ಛ ಭಾರತ ವ್ರತವನ್ನು ಸಮರ್ಪಣಾ ಭಾವದಿಂದ ಮಾಡುತ್ತಿದ್ದೇವೆ. ನಿಮ್ಮ ನಾಯಕತ್ವದಲ್ಲಿ ನಾವು ಮಹಾತ್ಮಾ ಗಾಂಧೀಜಿಯವರ ಸ್ವಚ್ಛಭಾರತದ ಕನಸನ್ನು ಖಂಡಿತ ಈಡೇರಿಸುತ್ತೇವೆ ಎಂದಿದ್ದಾರೆ.'

ಎನ್ ಸಿಸಿ, ಎನ್ ಎಸ್ ಎಸ್ ವಿದ್ಯಾರ್ಥಿಗಳು ಭಾಗಿ!
ಗಾಯತ್ರಿ ನಗರದ ಡಿ ಬ್ಲಾಕ್ ನಲ್ಲೂ ಇತ್ತೀಚೆಗೆ ಕಸ ವಿಭಜನೆ ಕುರಿತು ಅರಿವು ಮೂಡಿಸುವ ಕಾರ್ಯದಲ್ಲಿ ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಕಾಲೇಜಿನ ಎನ್ ಎಸ್ ಎಸ್ ಮತ್ತು ಎನ್ ಸಿಸಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇದೂ ಸಹ ಅಶ್ವತ್ಥ ನಾರಾಯಣ ಅವರ ನೇತೃತ್ವದಲ್ಲಿ ನಡೆದ 'ಸ್ವಚ್ಛತಾ ಹಿ ಸೇವಾ' ಅಭಿಯಾನದ ಭಾಗವೇ ಆಗಿತ್ತು.

ಮಹಾತ್ಮಾ ಗಾಂಧಿಯವರ 150 ನೇ ಜನ್ಮದಿನಾಚರಣೆ
ಈ ವರ್ಷದ ಅಕ್ಟೋಬರ್ 2 ರಂದು ರಾಷ್ತ್ರಪಿತ ಮಹಾತ್ಮಾ ಗಾಂಧೀಜಿಯವರ 150 ನೇ ಜನ್ಮದಿನಾಚರಣೆಯ ನಿಮಿತ್ತ 'ಸ್ವಚ್ಛತಾ ಹಿ ಸೇವಾ' ಅಭಿಯಾನವನ್ನು ನರೇಂದ್ರ ಮೋದಿಯವರು ಸೆ.15 ರಂದು ಉದ್ಘಾಟಿಸಿದರು. ಈ ಅಭಿಯಾನದ ಅಡಿಯಲ್ಲಿ ದೇಶದಾದ್ಯಂತ ಹಲವು ನಗರಗಳಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು, ವಿದ್ಯಾರ್ಥಿಗಳು, ರಾಜಕಾರಣಿಗಳು ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ. ಇದೇ ಅಕ್ಟೋಬರ್ 2 ರಂದು ಸ್ವಚ್ಛ ಭಾರತ ಯೋಜನೆ ಜಾರಿಗೆ ಬಂದೂ ನಾಲ್ಕು ವರ್ಷವಾಗಲಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications