ಜನರ ವಿರೋಧ ಧಿಕ್ಕರಿಸಿ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್‌ ಶೋ: ನೀಟ್‌ ವಿದ್ಯಾರ್ಥಿಗಳಿಗೂ ಸಂಕಷ್ಟ- ಸಿದ್ದರಾಮಯ್ಯ ಟ್ವೀಟ್‌

ಬೆಂಗಳೂರು, ಮೇ 06: ಪ್ರಧಾನಿ ಮೋದಿ ಅವರ ಬೆಂಗಳೂರಿನ ರೋಡ್‌ ಶೋಗೆ ಜನಾಕ್ರೋಶ ವ್ಯಕ್ತವಾದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೋದಿ ರೋಡ್‌ ಶೋ ಇಂದ ನಾಳೆ ಪರೀಕ್ಷೆ ಬರೆಯುತ್ತಿರುವ ನೀಟ್‌ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ನೀಟ್ ಪರೀಕ್ಷಾರ್ಥಿಗಳು ಮತ್ತು ಬೆಂಗಳೂರಿನ ಜನರ ವಿರೋಧವನ್ನು ಧಿಕ್ಕರಿಸಿ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಂಗಳೂರಿನಲ್ಲಿ ನಡೆಸಲಿರುವ ರೋಡ್ ಶೋ ಅತ್ಯಂತ ಬೇಜವಾಬ್ದಾರಿತನದ ನಡೆ. ಮೋದಿ ಅವರು ಪ್ರಚಾರ ಮಾಡಲಿ ನಮ್ಮ ತಕರಾರು ಇಲ್ಲ. ಆದರೆ ವಿದ್ಯಾರ್ಥಿಗಳಿಗೆ ಆಗುವ ತೊಂದರೆಗೆ ಯಾರು ಹೊಣೆ?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

PM Modis road show in Bengaluru: NEET students are also in trouble - Siddaramaiahs tweet

ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋವನ್ನು ಒಂದು ದಿನ ಮುಂದಕ್ಕೆ ಹಾಕಬಹುದು ಆದರೆ ವಿದ್ಯಾರ್ಥಿಗಳು ಪರೀಕ್ಷೆ ನಾಳೆ ಬರೆಯುತ್ತೇನೆ ಎಂದರೆ ಆಗುತ್ತಾ? ವಿನಾಶಕಾಲೇ ವಿಪರೀತ ಬುದ್ದಿ ಎನ್ನುವ ಹಾಗಿದೆ ಬಿಜೆಪಿ ಹಠಮಾರಿತನ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.

'ಜನಾಕ್ರೋಶಕ್ಕೆ ಮಣಿದು ರೋಡ್ ಶೋವನ್ನು ರದ್ದುಗೊಳಿಸುವುದು ಬಿಟ್ಟು ಅದನ್ನು ಸಮರ್ಥಿಸಿಕೊಂಡು, ವಿರೋಧಿಸುವವರ ಮೇಲೆ ಎರಗುತ್ತಿರುವುದು ಬಿಜೆಪಿ ನಾಯಕರ ತಲೆಗೇರಿರುವ ಅಧಿಕಾರದ ಮದವನ್ನು ತೋರಿಸುತ್ತದೆ' ಎಂದೂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

PM Modis road show in Bengaluru: NEET students are also in trouble - Siddaramaiahs tweet

'ರೋಡ್ ಶೋ ದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುವುದಿದ್ದರೆ ಅವರು ಮುಂಚಿತವಾಗಿ ಹೋಗಿ ಉಳಿದುಕೊಳ್ಳಲಿ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೇಳಿಕೆ ಅತ್ಯಂತ ಹೊಣೆಗೇಡಿತನ ಮತ್ತು ದುರಹಂಕಾರದ್ದು. ಬಡ ವಿದ್ಯಾರ್ಥಿಗಳಿಗೆ ಇದು ಆಗುತ್ತಾ?' ಎಂದು ಪ್ರಶ್ನಿಸಿದ್ದಾರೆ.

'ವಿದ್ಯಾರ್ಥಿಗಳು ಅನುಭವಿಸಬೇಕಾಗಿರುವ ಕಷ್ಟಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತಂದು ರೋಡ್ ಶೋ ರದ್ದು ಮಾಡಬೇಕಾಗಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ರೋಡ್ ಶೋವನ್ನು ಸಮರ್ಥಿಸುತ್ತಿರುವುದು ಬಿಜೆಪಿ ಸಚಿವರ ಗುಲಾಮಗಿರಿ ಮನಸ್ಥಿತಿಗೆ ಒಂದು ಉದಾಹರಣೆ' ಎಂದೂ ಸಿದ್ದು ಆರೋಪಿಸಿದ್ದಾರೆ.

PM Modis road show in Bengaluru: NEET students are also in trouble - Siddaramaiahs tweet

'ಜವಾಬ್ದಾರಿ ಸ‍್ಥಾನದಲ್ಲಿರುವ ಕೇಂದ್ರ ಸಚಿವೆ ಶೋಭಾ ಅವರಿಗೆ ತಮ್ಮ ನಾಯಕನಿಗೆ ಸರಿಯಾದ ಸಲಹೆ ಕೊಡುವ ಧೈರ್ಯವಿಲ್ಲ. ಇದರ ಬದಲಾಗಿ ಅವರು ವಿದ್ಯಾರ್ಥಿಗಳಿಗೆ ಬುದ್ಧಿ ಹೇಳಲು ಹೊರಟಿದ್ದಾರೆ. ಇದು ಖಂಡನೀಯ' ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ರೋಡ್‌ ಶೋ ಕಾರಣಕ್ಕೆ ನನ್ನ ಸಂಚಾರಕ್ಕೂ ಪೊಲೀಸರು ನಿರ್ಬಂಧ ಹಾಕಿದ್ದರು. ಮೋದಿ ಅವರು ಹೊಸಪೇಟೆಗೆ ಹೋಗುತ್ತಿದ್ದರು, ನಾನು ಗಂಗಾವತಿಗೆ ಹೊರಟಿದ್ದೆ, ಮೋದಿ ಅವರು ಹೋಗುತ್ತಿರುವ ಕಾರಣಕ್ಕೆ ನನಗೆ ಗಂಗಾವತಿ ಹೋಗಲು ಅನುಮತಿಯನ್ನೇ ನೀಡಿಲ್ಲ. ವಿಧವಿಧವಾಗಿ ನಾನು ಮನವಿ ಮಾಡಿದೆ, ಆದರೂ ಅನುಮತಿ ಕೊಡಲಿಲ್ಲ. ಒಬ್ಬ ವಿರೋಧ ಪಕ್ಷದ ನಾಯಕನಿಗೆ ಹೀಗಾದರೆ, ಸಾಮಾನ್ಯ ಜನರ ಗತಿಯೇನು ಬಿಜೆಪಿ? ಎಂದು ಪ್ರಶ್ನಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+