ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರಧಾನಿ ಮೋದಿಯಿಂದ ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ: ಸಿಎಂ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 06: ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಹಾಗೂ ಕೆಂಪೇಗೌಡ ಥೀಮ್ ಪಾರ್ಕ್ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸೂಕ್ತ ವ್ಯವಸ್ಥೆಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣ ಬಳಿ ನಿರ್ಮಾಣವಾಗುತ್ತಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ನಿರ್ಮಾಣವಾಗುತ್ತಿದೆ. ಶೀಘ್ರವೇ ಉದ್ಘಾಟನೆಗೊಳ್ಳಲಿದೆ. ಈ ಕುರಿತು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ 6ನೇ ಸಭೆಯಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.

PM Modi to unveil Kempegowda bronze statue, CM instructs complete work on Kudalasangama

ನಾಡಿನ ವಿವಿಧ ಸ್ಥಳಗಳಿಂದ ಪವಿತ್ರ ಮೃತ್ತಿಕೆ ಹಾಗೂ ಜಲಸಂಗ್ರಹಿಸುವ ಅಭಿಯಾನದಲ್ಲಿ ತಾಲ್ಲೂಕು ಕೇಂದ್ರಗಳಿಗೆ ಮಣ್ಣನ್ನು ಜಿಲ್ಲಾ ಕೇಂದ್ರಕ್ಕೆ ತರಿಸುವಂತೆ ಸೂಚಿಸಿದರು. ಕೆಂಪೇಗೌಡರ ಜೀವನ ಚರಿತ್ರೆಯನ್ನು ಬಿಂಬಿಸುವ ವಿಡಿಯೋ ಮ್ಯಾಪಿಂಗ್ ಹಾಗೂ ನೃತ್ಯ ರೂಪಕ ಆಯೋಜಿಸಬಹುದು ಎಂದು ಅನುಮತಿ ನೀಡಿದರು.

ಕೆಂಪೇಗೌಡರ ಸಮಾಧಿ ಅಭಿವೃದ್ಧಿಗೆ ಭೂಸ್ವಾಧೀನ ಪ್ರಕ್ರಿಯೆ, 46 ತಾಣಗಳಲ್ಲಿ ನಾಮಫಲಕಗಳ ಅಳವಡಿಕೆ, ಮಾಗಡಿ ಕೋಟೆ ಸಂರಕ್ಷಣೆ ಸೇರಿದಂತೆ ಮುಂತಾದ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚಿಸಿದರು. ಸಭೆಯಲ್ಲಿ ಸಚಿವರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ್, ಆರ್. ಅಶೋಕ್, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತಿತರರು ಉಪಸ್ಥಿತರಿದ್ದರು.

ಕೂಡಲಸಂಗಮ ಕ್ಷೇತ್ರದಲ್ಲಿ ವಿವಿಧ ಕಾಮಗಾರಿ

ಬಸವಣ್ಣನವರ ಐಕ್ಯ ಸ್ಥಳವಾದ ಕೂಡಲಸಂಗಮ ಕ್ಷೇತ್ರದಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು 2023ರ ಜನವರಿ ಒಳಗೇ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

PM Modi to unveil Kempegowda bronze statue, CM instructs complete work on Kudalasangama

ಸಿಎಂ ಬಸವರಾಜ ಬೊಮ್ಮಾಯಿಗೆ ಮೆಚ್ಯೂರಿಟಿ ಇದೆಯಾ: ಎಚ್‌ಡಿಕೆಸಿಎಂ ಬಸವರಾಜ ಬೊಮ್ಮಾಯಿಗೆ ಮೆಚ್ಯೂರಿಟಿ ಇದೆಯಾ: ಎಚ್‌ಡಿಕೆ

ಗುರುವಾರ ನಡೆದ ಕೂಡಲ ಸಂಗಮ ಅಭಿವೃದ್ಧಿ ಮಂಡಳಿ ಜತೆಗಿನ 16ನೇ ಸಭೆಯಲ್ಲಿ ಮಾತನಾಡಿದ ಅವರು, ಬಸವ ಅಂತಾರಾಷ್ಟ್ರೀಯ ಕೇಂದ್ರದ ಕಟ್ಟಡ, ಡಿಜಿಟಲ್ ಕೇಂದ್ರ, ವಸ್ತುಸಂಗ್ರಹಾಲಯ, ಕೂಡಲಸಂಗಮ ಸಂಕೀರ್ಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಬೇಕು. ಕೂಡಲ ಸಂಗಮದಲ್ಲಿ ಬಸವಣ್ಣನವರ ಜೀವನ ಚರಿತ್ರೆ ಹಾಗೂ ವಿಚಾರಧಾರೆಗಳ ಪೂರ್ಣ ಚಿತ್ರಣವನ್ನು ಬಿಂಬಿಸಬೇಕು ಎಂದು ಅಧಿಕಾರಿಗಳಿಗೆ ಬೊಮ್ಮಾಯಿ ತಿಳಿಸಿದರು.

ಸಭೆಯಲ್ಲಿ ಸಚಿವ ಆರ್.ಅಶೋಕ್, ಮುರುಗೇಶ್ ನಿರಾಣಿ, ಹುನುಗುಂದ ಶಾಸಕ ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ ಹಾಗೂ ಕೂಡಲು ಸಂಗಮ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು, ಸದಸ್ಯರು ಪಾಲ್ಗೊಂಡಿದ್ದರು.

English summary
PM Narendra Modi to unveil Kempegowda bronze statue in Devanahalli. CM Basavaraj Bommai instructs to complete work on Kudalasangama.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X