ಬೆಂಗಳೂರಿಗೂ ಬರುವ ಮುನ್ನ ಕನ್ನಡದಲ್ಲಿ ಟ್ವೀಟ್ ಮಾಡಿ ಕನ್ನಡಿಗರ ಮನಗೆದ್ದ ಪ್ರಧಾನಿ ಮೋದಿ: ಭಾರೀ ವೈರಲ್
ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಆಗಸ್ಟ್ 10) ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ವೇಳೆ ಬಹುನಿರೀಕ್ಷಿತ ನಮ್ಮ ಮೆಟ್ರೋ ಯೆಲ್ಲೋ ಮಾರ್ಗವನ್ನು ಉದ್ಘಾಟನೆ ಮಾಡಲಿದ್ದಾರೆ. ಜೊತೆಗೆ ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದಾರೆ. ಇನ್ನೂ ಈ ಬಗ್ಗೆ ಕನ್ನಡದಲ್ಲ ಟ್ವೀಟ್ ಮಾಡಿ ಅವರು ಹೆಚ್ಚು ಗಮನ ಸೆಳೆದಿದ್ದು, ಇದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರ್ ಆಗುತ್ತಿದೆ.
ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಆಗಮಿಸುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಕನ್ನಡದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಆಗಸ್ಟ್ 10ರಂದು ಬೆಂಗಳೂರಿನ ಜನರೊಂದಿಗಿಗೆ ಇರಲು ಎದುರು ನೋಡುತ್ತಿದ್ದೇನೆ. ಸಂಪರ್ಕ ಸುಧಾರಿಸುವ ಮೂರು ವಂದೇ ಭಾರತ ಎಕ್ಸ್‌ಪ್ರೆಸ್ ರೈಲುಗಳಿಗೆ ಕೆಎಸ್ಆರ್ ರೈಲು ನಿಲ್ದಾಣದಿಂದ ಹಸಿರು ನಿಶಾನೆ ತೋರಿಸಲಾಗುವುದು ಎಂದು ಬರೆದುಕೊಂಡಿದ್ದಾರೆ.

ಅಲ್ಲದೆ, ಬೆಂಗಳೂರಿನ ಬಹುನಿರೀಕ್ಷಿತ ಬೆಂಗಳೂರು ಮೆಟ್ರೋ ಯೆಲ್ಲೋ ಮಾರ್ಗನ್ನು ಉದ್ಘಾಟನೆ ಮಾಡಲಾಗುವುದು. ಇದೇ ವೇಳೆ ಬೆಂಗಳೂರು ಮೆಟ್ರೋದ 3ನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಬಳಿಕ ನಗರದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಾಗುವುದು ಎಂದು ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇನ್ನು ವಂದೇ ಭಾರತ್ ಉದ್ಘಾಟನೆಗಾಗಿ ಕೆಎಸ್ಆರ್ ರೈಲ್ವೆಗೆ ಭೇಟಿ ನೀಡಲಿದ್ದಾರೆ. ಅಲ್ಲದೆ, ಹಳದಿ ಮಾರ್ಗವನ್ನು ಉದ್ಘಾನೆ ಮಾಡಿ, ಅದರಲ್ಲಿ ಪ್ರಯಾಣ ಮಾಡಲಿದ್ದಾರೆ. ಈ ಹಿನ್ನೆಲೆ ಮೆಟ್ರೋ ಹಾಗೂ ಕೆಎಸ್‌ಆರ್ ರೈಲ್ವೆ ನಿಲ್ದಾಣಗಳಲ್ಲಿ ಭಾರೀ ಬಂದೋಬಸ್ತ್ ಮಾಡಲಾಗಿದ್ದು, ಇದರಿಂದ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಮೆಟ್ರೋದಲ್ಲಿ ಪ್ರಯಾಣಿಸುವ ಪ್ರಯಾಣಿಕರು ತುಂಬಾ ತೊಂದರೆ ಅನುಭವಿಸುವಂತಾಗಿದೆ.
ಮೆಜೆಸ್ಟಿಕ್‌ನಲ್ಲಿ ಬಂದೋಬಸ್ತ್ ಕಾರಣ ಪ್ರವೇಶ ಮಾರ್ಗ ಬದಲಾಯಿಸಿದ್ದರಿಂದ ಮೆಟ್ರೋದಲ್ಲಿ ಪ್ರಯಾಣಿಸುವ ರೈಲು ಪ್ರಯಾಣಿಕರು ಮತ್ತು ಕೆಎಸ್ಆರ್ ಮೆಟ್ರೋ ನಿಲ್ದಾಣದಲ್ಲಿ ಜನದಟ್ಟಣೆ ಹೆಚ್ಚಾಗಿದೆ. ಇದರಿಂದ ಪ್ರಯಾಣಿಕರು ತುಂಬಾ ಸಮಸ್ಯೆ ಎದುರಿಸಿದ್ದು, ಈ ವಿಡಿಯೋ ಸಹ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ಪ್ರಧಾನಿ ಮೋದಿ ಕಾರ್ಯಕ್ರಮಗಳು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಳಗ್ಗೆ 10 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಬಳಿಕ ಅಲ್ಲಿಂದ ಹೆಲಿಕಾಪ್ಟರ್‌ನಲ್ಲೊ ಮೇಖ್ರಿ ವೃತ್ತದ ಬಳಿಯ ಮಿಲಿಟರಿ ಬೇಸ್‌ಗೆ ಬರಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಬೆಳಗ್ಗೆ 11ಕ ಗಂಟೆಗೆ ಕೆಎಸ್‌ಆರ್ ರೈಲು ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿ ಮೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ.
ಬೆಳಗ್ಗೆ 11:30ಕ್ಕೆ ರಸ್ತೆ ಮಾರ್ಗವಾಗಿ ಆರ್‌ವಿ ರಸ್ತೆಯ ಮೆಟ್ರೋ ನಿಲ್ದಾಣ ತಲುಪಿ ಬೆಳಗ್ಗೆ 11:45ಕ್ಕೆ ಆರ್‌ವಿ ರಸ್ತೆ ರಾಗೀಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ. ಇನ್ನು ಮಧ್ಯಾಹ್ನ 12:55ಕ್ಕೆ ಆರ್‌ವಿ ರಾಗೀಗುಡ್ಡ ಮೆಟ್ರೋ ನಿಲ್ದಾಣದಿಂದ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲಿದ್ಸದಾರೆ.
ಮಧ್ಯಾಹ್ನ 1 ಗಂಟೆಗೆ ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಕೇಂದ್ರದ ಸಭಾಂಗಣಕ್ಕೆ ಆಗಮಿಸಿ ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿಸಿದ್ದಾರೆ. ಮಧ್ಯಾಹ್ನ 1:30ಕ್ಕೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಲಿದ್ದು, ಬಳಿಕ ದೆಹಲಿಗೆ ಹಿಂದಿರುಗಲಿದ್ದಾರೆ.












Click it and Unblock the Notifications