ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನಲ್ಲಿ ಜ.3 ರಂದು ಭಾರತೀಯ ವಿಜ್ಞಾನ ಕಾಂಗ್ರೆಸ್ ಗೆ ಪ್ರಧಾನಿ ಚಾಲನೆ.!

ವಿಜ್ಞಾನ, ತಂತ್ರಜ್ಞಾನ ಹಾಗೂ ಗ್ರಾಮೀಣಾಭಿವೃದ್ಧಿಯಲ್ಲಿ ಯಶಸ್ಸು ಸಾಧಿಸುವ ಉದ್ದೇಶ ಹೊಂದಿರುವ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನಕ್ಕೆ ಬೆಂಗಳೂರಿನಲ್ಲಿ ಜನೆವರಿ 03 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯಯವರು ಚಾಲನೆ ನೀಡಲಿದ್ದಾರೆ.

|
Google Oneindia Kannada News

ಬೆಂಗಳೂರು, ಡಿಸೆಂಬರ್ 19: ವಿಜ್ಞಾನ, ತಂತ್ರಜ್ಞಾನ ಹಾಗೂ ಗ್ರಾಮೀಣಾಭಿವೃದ್ಧಿಯಲ್ಲಿ ಯಶಸ್ಸು ಸಾಧಿಸುವ ಉದ್ದೇಶ ಹೊಂದಿರುವ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನಕ್ಕೆ ಬೆಂಗಳೂರಿನಲ್ಲಿ ಜನೆವರಿ 03 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯಯವರು ಚಾಲನೆ ನೀಡಲಿದ್ದಾರೆ.

ಭಾರತೀಯ ವಿಜ್ಞಾನನ ಕಾಂಗ್ರೆಸ್ ಸಮ್ಮೇಳನ ಉದ್ಘಾಟನೆಗೊಳ್ಳುವ ದಿನವೇ ನಗರದಲ್ಲಿ ರೈತರ ಸಮಾವೇಶ ಕೂಡಾ ನಡಯಲಿದ್ದು, ಇದರಲ್ಲಿಯೂ ಪ್ರಧಾನಿ ಮೋದಿ ಪಾಲ್ಗೊಂಡು ರೈತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.

ಜನವರಿ 3ರಂದು ಕರ್ನಾಟಕಕ್ಕೆ ನರೇಂದ್ರ ಮೋದಿ ಭೇಟಿಜನವರಿ 3ರಂದು ಕರ್ನಾಟಕಕ್ಕೆ ನರೇಂದ್ರ ಮೋದಿ ಭೇಟಿ

ಈ ಬಗ್ಗೆ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಜನೆವರಿ 03 ರಂದು ವಿಜ್ಞಾನ ಸಮ್ಮೇಳನ ಹಾಗೂ ರೈತ ಸಮಾವೇಶ ಹಿನ್ನೆಲೆಯಲ್ಲಿ ಜನೆವರಿ 02 ರಂದೇ ಪ್ರಧಾನಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.

PM Narendra Modi Inaguration For Indian Science Congress In Bangalore

ತುಮಕೂರು ನಗರದಲ್ಲಿ ರೈತ ಸಮಾವೇಶ ನಡೆಯಲಿದ್ದು, ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನ ಕುರಿತು ಇನ್ನು ಚರ್ಚೆ ನಡೆಯುತ್ತಿದೆ. ಂತಿಮ ಮಾಹಿತಿಗಾಗಿ ಪ್ರಧಾನಮಂತ್ರಿ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದರು.

ರೈತ ಸಮಾವೇಶದಲ್ಲಿ ದೊಡ್ಡ ಮಟ್ಟದಲ್ಲಿ ರೈತರು ಪಾಲ್ಗೊಳ್ಳಲಿದ್ದಾರೆ, ಜನೆವರಿ 03 ರಂದು 5 ದಿನಗಳ ಕಾಲ 107 ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಗೆ ಚಾಲನೆ ನೀಡಲಿದ್ದಾರೆ ಎಂದು ಸಿಎಂ ಹೇಳಿದರು.

PM Narendra Modi Inaguration For Indian Science Congress In Bangalore

ಈ ಬಾರಿಯ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನದಲ್ಲಿ ಕೃಷಿ ಹಾಗೂ ವನ ವಿಜ್ಞಾನ, ಜಾನುವಾರು, ಪಶು ವೈದ್ಯಕೀಯ, ಮೀನುಗಾರಿಕೆ ವಿಜ್ಞಾನ, ಮಾನವ ಶಾಸ್ತ್ರ, ನಡವಳಿಕೆ ವಿಜ್ಞಾನ, ರಸಾಯನಿಕ ವಿಜ್ಞಾನ, ಭೂ ರಚನಾ ವ್ಯೆವಸ್ಥೆ, ಇಂಜನಿಯರಿಂಗ್, ಪರಿಸರ ವಿಜ್ಞಾನ, ಮಾಹಿತಿ ಸಂವಹನ, ವಿಜ್ಞಾನ-ತಂತ್ರಜ್ಞಾನ, ಗಣಿತ, ವೈದ್ಯಕೀಯ ವಿಜ್ಞಾನ, ಭೌತಿಕ ವಿಜ್ಞಾನ, ಸಸ್ಯ ಶಾಸ್ತ್ರಗಳು ಮುಖ್ಯ ವಿಷಯಗಳಾಗಿರಲಿವೆ ಎಂದು ತಿಳಿದು ಬಂದಿದೆ.

ರಾಜ್ಯಾದ್ಯಂತ 3 ದಿನ ನಿಷೇಧಾಜ್ಞೆ: ಡಿಜಿಪಿಗೆ ಸಿಎಂ ಕೊಟ್ಟ ಸಂದೇಶವೇನುರಾಜ್ಯಾದ್ಯಂತ 3 ದಿನ ನಿಷೇಧಾಜ್ಞೆ: ಡಿಜಿಪಿಗೆ ಸಿಎಂ ಕೊಟ್ಟ ಸಂದೇಶವೇನು

ಸಮ್ಮೇಳನದಲ್ಲಿ ವಿದೇಶಿ ಸಂಸ್ಥೆಗಳಿಂದ ನೊಬೆಲ್ ಪ್ರಶಸ್ತಿ ವಿಜೇತರು, ವಿದ್ವಾಂಸರು ಹಾಗೂ ಪ್ರಧಾನ ಉಪನ್ಯಾಸಕರು, ಕಾರ್ಯಕ್ರಮ ರಚಿಸುವವರು, ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

English summary
Prime Minister Narendra Modi will hold an Indian Science Congress conference on January 3 in Bangalore with the aim of achieving success in science, technology and rural development.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X