ಏರೋ ಇಂಡಿಯಾ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರು, ಫೆ. 17 : ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 18 ರಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ 2015 ಪ್ರದರ್ಶನವನ್ನು ಉದ್ಘಾಟನೆ ಮಾಡಲಿದ್ದಾರೆ.
ಇಂಡಿಯನ್ ಇಸ್ಟಿಟ್ಯೂಟ್ ಆಫ್ ಸೈನ್ಸ್ ನ ವಿಜ್ಞಾನಿಗಳ ಜತೆ ಸಂವಾದ ನಡೆಸಲಿದ್ದಾರೆ. ನಿಮಾನ್ಸ್ ನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. [ಪ್ರದರ್ಶನಕ್ಕೆ ವಿಶೇಷ ಬಿಎಂಟಿಸಿ ಬಸ್ ಗಳು]

ಬೆಳಿಗ್ಗೆ 8.45ಕ್ಕೆ ಕೇಂಪೆಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ 9 ಗಂಟೆಗೆ ಏರೋ ಇಂಡಿಯಾ ಪ್ರದರ್ಶನ ಉದ್ಘಾಟನೆ ಮಾಡಲಿದ್ದಾರೆ. ನಂತರ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ವಿಜ್ಞಾನಿಗಳ ಜತೆ ಸಂವಾದ ನಡೆಸಲಿದ್ದಾರೆ.[ಏರೋ ಇಂಡಿಯಾ: ಬಳ್ಳಾರಿ ರಸ್ತೆ ಸಂಚಾರದಲ್ಲಿ ಬದಲಾವಣೆ]
ಬಳ್ಳಾರಿ ರಸ್ತೆ ಸಂಚಾರ ನಿಯಮ ಬದಲು
ಏರೋ ಇಂಡಿಯಾ ಹಿನ್ನೆಲೆಯಲ್ಲಿ ಬಳ್ಳಾರಿ ರಸ್ತೆಯಲ್ಲಿನ ಸಂಚಾರ ನಿಯಮ ಬದಲಾವಣೆ ಮಾಡಲಾಗಿದ್ದು, ಭಾರಿ ವಾಹನಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಅಲ್ಲದೇ ಪಾರ್ಕಿಂಗ್ ಗೂ ಅವಕಾಶವಿಲ್ಲ. ಏರೋ ಇಂಡಿಯಾ ಪ್ರದರ್ಶನ ನಡೆಯುವ ಅಷ್ಟೂ ದಿನ ಬದಲಾವಣೆ ಚಾಲ್ತಿಯಲ್ಲಿರುತ್ತದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.












Click it and Unblock the Notifications