ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕಕ್ಕೆ ಜ.12ಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗಿ: ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಜನವರಿ 09: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇದೇ ವಾರ ಕರ್ನಾಟಕ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಅಂದು ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳುವ ಜೊತೆಗೆ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಜನವರಿ 12 ರಂದು ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಬಿಜೆಪಿ ನಡೆಯಲಿರುವ ಬೃಹತ್ 'ರಾಷ್ಟ್ರೀಯ ಯುವಜನೋತ್ಸವ' ಸಮಾರಂಭದಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಒಂದೇ ತಿಂಗಳಲ್ಲಿ ಬಿರುಕು ಬಿಟ್ಟ ದೇಶದ ಮೊದಲ 'ರ‍್ಯಾಪಿಡ್‌ ರಸ್ತೆ': ಬಿಬಿಎಂಪಿಗೆ ಶಾಪ ಹಾಕಿದ ಬೆಂಗಳೂರು ಜನ ಒಂದೇ ತಿಂಗಳಲ್ಲಿ ಬಿರುಕು ಬಿಟ್ಟ ದೇಶದ ಮೊದಲ 'ರ‍್ಯಾಪಿಡ್‌ ರಸ್ತೆ': ಬಿಬಿಎಂಪಿಗೆ ಶಾಪ ಹಾಕಿದ ಬೆಂಗಳೂರು ಜನ

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದು ಅವರು, 'ರಾಷ್ಟ್ರೀಯ ಯುವಜನೋತ್ಸವ' ಏಳು ದಿನಗಳ ಕಾಲ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಗಳು ಸೆರಿದಂತೆ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರಾಡಳಿತ ಪ್ರಾಂತ್ಯದಿಂದ ಯುವಜನರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದು ಹೇಳಿದರು.

PM Narendra Modi Participate in National Youth Festival at Hubballi on Jan.12 Says CM Bommai

ಜನವರಿ 19 ರಂದು ಪ್ರಧಾನಿ ಮೋದಿಯವರು ನಾರಾಯಣಪುರಕ್ಕೆ ಆಗಮಿಸಲಿದ್ದಾರೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಅನುದಾನಿತ ನಾರಾಯಣಪುರ ಎಡದಂಡೆ ಕಾಲುವೆ (ಎನ್‌ಎಲ್‌ಬಿಸಿ) ಆಧುನೀಕರಣದ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಾಗುವುದು. ಇದೇ ಸಂದರ್ಭದಲ್ಲಿ ಗುಲ್ಬರ್ಗಾದ ಬಂಜಾರ ಸಮಾವೇಶ ನಡೆಸುವ ಚಿಂತನೆ ಇದ್ದು, ಪ್ರಧಾನಿ ನರೇಂದ್ರ ಮೋದಿಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಇನ್ನೂ ನಿಶ್ಚಯವಾಗಿಲ್ಲ ಎಂದು ತಿಳಿಸಿದರು.

ಜನವರಿ 12ರಂದು ಮಲೆನಾಡು ಜಿಲ್ಲೆ ಶಿವಮೊಗ್ಗ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣವನ್ನು ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ. ಶಿವಮೊಗ್ಗದಲ್ಲಿನ ವಿಮಾನ ನಿಲ್ದಾಣ ನಿರ್ಮಾಣ ಕೆಲಸ ಅಂತಿಮ ಘಟ್ಟಕ್ಕೆ ಬಂದಿದೆ. ಆದಷ್ಟು ಶೀಘ್ರವೇ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರೊ ಮೋದಿಯವರು ಕರ್ನಾಟಕ ಭೇಟಿಯು ವಿವಿರ, ಕಾರ್ಯಕ್ರಮಗಳ ಸಂಪೂರ್ಣ ಪಟ್ಟಿ ಅಧಿಕೃತವಾಗಿ ಪ್ರಕಟವಾಗಬೇಕಿದೆ.

English summary
PM Narendra Modi Karnataka Visit: PM Narendra Modi Participate in National Youth Festival at Hubballi on Jan.12 Says CM Basavaraj Bommai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X