ಬೆಂಗಳೂರಿಗೆ ಪ್ರಧಾನಿ ಮೋದಿ; 3 ರಾಜ್ಯದಲ್ಲಿ ಗೆಲುವು, ನಮೋ ಸಂಭ್ರಮದ ಭಾಷಣ

ಬೆಂಗಳೂರು: ಬಹುನಿರೀಕ್ಷೆಯ 2026ರ ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಿದೆ. ಮೂರು ರಾಜ್ಯಗಳಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲು, ಪದಗ್ರಹಣಕ್ಕೆ ಮಹೂರ್ತ ಫಿಕ್ಸ್ ಆಗಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿಯವರು ರಾಜಧಾನಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಗೆಲುವಿನ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಕಾರ್ಯಕರ್ತರನ್ನುದ್ದೇಶಿಸಿ ಕೆಲ ಹೊತ್ತು ಮಾತನಾಡಲಿದ್ದಾರೆ.

ಪುದುಚೇರಿ, ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯದಲ್ಲಿ ಬಿಜೆಪಿ ಗೆದ್ದು ಜಯಭೇರಿ ಭಾರಿಸಿದೆ. ಪಶ್ಚಿಮ ಬಂಗಾರದಲ್ಲಿ 'ದಿದಿ' ಮಮತಾ ಬ್ಯಾನರ್ಜಿ ಅವರ ಟಿಎಂಸಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿದೆ. ದೇಶವ್ಯಾಪಿ ಬಿಜೆಪಿ ನಾಯಕರು ಸಂಭ್ರಮದಲ್ಲಿದ್ದಾರೆ. ಇದರ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿಯವರು ಮೇ 10ರಂದು ಬೆಂಗಳೂರಿಗೆ ಬರಲಿದ್ದಾರೆ.

PM Narendra Modi

ಎಚ್‌ಎಎಲ್ ವಿಮಾನ ನಿಲ್ದಾಣ ದ್ವಾರ ಬಾಗಿಲು ಸಮೀಪ ಆವರಣದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಅಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿಯವರು ಬೆಳಗ್ಗೆ 9.45ರಿಂದ 10.15ರವರೆಗೆ ಮಹತ್ವದ ಭಾಷಣ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

TVK Govt: ಸರ್ಕಾರ ರಚಿಸಲು ಟಿವಿಕೆಗೆ ಷರತ್ತುಬದ್ದ ಬೆಂಬಲ ಘೋಷಿಸಿದ ಕಾಂಗ್ರೆಸ್‌, ಷರತ್ತುಗಳೇನು?
TVK Govt: ಸರ್ಕಾರ ರಚಿಸಲು ಟಿವಿಕೆಗೆ ಷರತ್ತುಬದ್ದ ಬೆಂಬಲ ಘೋಷಿಸಿದ ಕಾಂಗ್ರೆಸ್‌, ಷರತ್ತುಗಳೇನು?

ಮೂರು ರಾಜ್ಯಗಳಲ್ಲಿ ಗೆಲ್ಲಲ್ಲು ಪ್ರಧಾನಿ ಮೋದಿಯವರ ದೂರದೃಷ್ಟಿ, ಜನರ ಕಾರ್ಯಕ್ರಮ, ಅಭಿವೃದ್ಧಿಯ ವೇಗವೇ ಕಾರಣ ಎಂದು ಈಗಾಗಲೇ ರಾಜ್ಯ ಬಿಜೆಪಿ ನಾಯಕರು ಹೇಳಿದ್ದಾರೆ. ಅಂದಿನ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ವತಿಯಿಂದ ಪ್ರಧಾನಿ ಮೋದಿಯವರನ್ನು ಸನ್ಮಾನಿ ಅಭಿನಂದಿಸಲು ತೀರ್ಮಾನಿಸಲಾಗಿದೆ. ಅಂದು ರಾಜ್ಯದ ಎಲ್ಲ ಬಿಜೆಪಿ ನಾಯಕರು, ಶಾಸಕರು, ಸಂಸದರು ಹಾಗೂ ಕೆಲವು ಕೇಂದ್ರ ಸಚಿವರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಸಂಚಾರ ಬದಲಾವಣೆ ಸಾಧ್ಯತೆ: ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಅಂದು ಪ್ರಧಾನಿ ಮೋದಿ ಅವರ ಆಗಮನ ಕಾರಣಕ್ಕೆ ಅತಿಥಿಗಳು, ರಾಜಕೀಯ ಗಣ್ಯರ ಓಡಾಟ ಹೆಚ್ಚಿರುವ ಕಾರಣಕ್ಕೆ ಈ ಮಾರ್ಗದಲ್ಲಿ ವಾಹನಗಳ ಸಂಚಾರ ಬದಲಾವಣೆಯನ್ನು ನಿರೀಕ್ಷಿಸಲಾಗಿದೆ.

ಮೂರು ರಾಜ್ಯಗಳಲ್ಲಿ ಬಿಜೆಪಿ ಸಂಭ್ರಮ

ಪಂಚ ರಾಜ್ಯಗಳ ಪೈಕಿ ಪುದುಚೇರಿಯಲ್ಲಿ ಒಟ್ಟು 30 ಸೀಟುಗಳಲ್ಲಿ 18 ಬಿಜೆಪಿ ನೇತೃತ್ವದ ಒಕ್ಕೂಟವು ಗೆದ್ದಿದೆ. ಪಶ್ಚಿಮ ಬಂಗಾಳದಲ್ಲಿನ ಒಟ್ಟು 294 ಕ್ಷೇತ್ರಗಳಲ್ಲಿ ಬಿಜೆಪಿ ಒಂದೆ 207 ಸೀಟುಗಳನ್ನು ಬಾಚಿಕೊಂಡು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅಧಿಕಾರ ಕಸಿದುಕೊಂಡಿದೆ. ಬಿಜೆಪಿಗೆ ರಾಜ್ಯದಲ್ಲಿ ಜನಾರ್ಶಿವಾದ ದೊರೆತಿದೆ. ಇನ್ನೂ ಅಸ್ಸಾಂ ರಾಜ್ಯದಲ್ಲಿ 126 ಸೀಟುಗಳ ಪೈಕಿ 102 ಸೀಟುಗಳನ್ನು ಗೆದ್ದು ಅಧಿಕಾರ ಹಿಡಿಯಲು ಸಜ್ಜಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+