ಬೆಂಗಳೂರಿನಲ್ಲಿ ಮತ್ತೆ ಮೋದಿ ರೋಡ್‌ ಶೋ: ಯಾವಾಗ, ಎಲ್ಲಿ? ಆರ್. ಅಶೋಕ್ ಹೇಳಿದ್ದಿಷ್ಟು

ಕರ್ನಾಟಕ ವಿಧಾನಸಭೆ ಚುನಾವಣೆ ಬಳಿಕ ರಾಜ್ಯಕ್ಕೆ ಮೊದಲ ಬಾರಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ರೋಡ್ ಶೋ ನಡೆಸಲು ಬಿಜೆಪಿ ಸಿದ್ಧತೆ ಮಾಡಿಕೊಳ್ಳತ್ತಿದೆ. ಈ ಬಗ್ಗೆ ಮಾಜಿ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದು, ಮೋದಿ ಬೆಂಗಳೂರು ಭೇಟಿ ಬಗ್ಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಆರ್. ಅಶೋಕ್, ಶನಿವಾರ ಬೆಳಗ್ಗೆ ನರೇಂದ್ರ ಮೋದಿ ಬೆಂಗಳೂರಿಗೆ ಬರುತ್ತಿದ್ದಾರೆ, ಎಚ್‌ಎಎಲ್ ನಲ್ಲಿ ಪ್ರಧಾನಿಯವರನ್ನು ನಾವು ಸ್ವಾಗತಿಸುತ್ತಿದ್ದೇವೆ, ಮೋದಿಯವರನ್ನು ಸ್ವಾಗತಿಸಲು ಸುಮಾರು 5-6 ಸಾವಿರ ಜನ ಸೇರಲಿದ್ದಾರೆ ಎಂದು ಹೇಳಿದರು.

 PM Narendra Modis Roadshow in Bengaluru Scheduled for Saturday

ವಿಮಾನ ನಿಲ್ದಾಣದ ಬಳಿ ಮೋದಿ ಎಲ್ಲರನ್ನೂ ಉದ್ದೇಶಿಸಿ ಮಾತನಾಡಬಹುದು ಎಂದು ಹೇಳಿದ್ದಾರೆ. ನರೇಂದ್ರ ಮೋದಿಯವರಿಗೆ ಅದ್ದೂರಿಯಾಗಿ ಸ್ವಾಗತ ಕೋರಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು. ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಮೋದಿ ನೇರವಾಗಿ ಇಸ್ರೋ ಸಂಸ್ಥೆಗೆ ತೆರಳಲಿದ್ದಾರೆ.

ಇಸ್ರೋ ಸಂಸ್ಥೆ ಇರುವ ಪ್ರದೇಶದಲ್ಲಿ ಮೋದಿಯವರು ಬಂದಾಗ ರೋಡ್ ಶೋ ಮಾಡ್ತೇವೆ ಎಂದು ಅಶೋಕ್ ತಿಳಿಸಿದರು. ರೋಡ್ ಶೋ ನಡೆಸಲು ಕೇಂದ್ರ ಬಿಜೆಪಿಯಿಂದ ಸೂಚನೆ ಬಂದಿದೆ, ದಾಸರಹಳ್ಳಿ ಕ್ಷೇತ್ರದಲ್ಲಿ ಇಸ್ರೋ ಸಂಸ್ಥೆ ಇದೆ, ಅಲ್ಲಿ ಒಂದು ಕಿ.ಮೀವರೆಗೆ ರೋಡ್ ಶೋ‌ ಮಾಡಲಾಗುತ್ತದೆ. ರೋಡ್ ಶೋ ಬಗ್ಗೆ ದಾಸರಹಳ್ಳಿ ಶಾಸಕ ಮುನಿರಾಜು ಜತೆ ಚರ್ಚೆ ಮಾಡಿದ್ದೇವೆ, ಈ ಬಗ್ಗೆ ಇಂದು ಸಂಜೆ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಲಾಗುವುದು, ಮೋದಿಯವರ ಭೇಟಿ ದಿನದ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್‌ನವರು ಬುದ್ದಿ ಕಲಿಯಲಿ

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದ ಆರ್ ಅಶೋಕ್, ಕಾಂಗ್ರೆಸ್‌ನವರು ಇನ್ನಾದರೂ ಬುದ್ದಿ ಕಲಿಯಲಿ. ಚಂದ್ರಯಾನ3 ಗೆ ಸರಿಸಾಟಿಯಾದ ಕೆಲಸವನ್ನು ಜಗತ್ತಿನಲ್ಲಿ ಬೇರೆ ಯಾರೂ ಮಾಡಿಲ್ಲ, ಈ ಸಾಧನೆಯಿಂದ ನಮಗೆಲ್ಲ ಬಹಳ ಹೆಮ್ಮೆ ಇದೆ ಎಂದು ಹೇಳಿದರು.

ದಕ್ಷಿಣ ಆಫ್ರಿಕಾದಿಂದ ನೇರ ಬೆಂಗಳೂರಿಗೆ

ಸದ್ಯ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದು, ಬ್ರಿಕ್ಸ್ ಸಭೆಯಲ್ಲಿ ಪಾಲ್ಗೊಳ್ಳಲು ಜೋಹಾನ್ಸ್‌ಬರ್ಗ್‌ಗೆ ತೆರಳಿದ್ದಾರೆ, ಅಲ್ಲಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಚಂದ್ರಯಾನ 3 ಸಾಫ್ಟ್ ಲ್ಯಾಂಡಿಂಗ್ ಸಂದರ್ಭದಲ್ಲಿ ಕೂಡ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು.

ಶನಿವಾರ ಬೆಳಗ್ಗೆ 5.55ಕ್ಕೆ ಪ್ರಧಾನಿ ನರೇಂದ್ರ ಮೋದಿ ನೇರವಾಗಿ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಒಂದು ಕಿಲೋಮೀಟರ್ ರೋಡ್‌ಶೋಗೆ ಬಿಜೆಪಿ ತೀರ್ಮಾನಿಸಿದೆ. 7 ಗಂಟೆಗೆ ಪೀಣ್ಯದಲ್ಲಿರುವ ಇಸ್ಟ್ರಾಕ್‌ಗೆ ಮೋದಿ ಭೇಟಿ ನೀಡಲಿದ್ದಾರೆ. ಅಲ್ಲಿ, ಇಸ್ರೋ ಮುಖ್ಯಸ್ಥರು, ವಿಜ್ಞಾನಿಗಳಿಗೆ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಲಿದ್ದಾರೆ. ಬೆಳಗ್ಗೆ8 ಗಂಟೆವರೆಗೆ ವಿಜ್ಞಾನಿಗಳ ಜತೆಗೆ ಸಭೆ ನಡೆಸಲಿದ್ದಾರೆ. ಬೆಳಗ್ಗೆ 8.35ಕ್ಕೆ ಎಚ್‌ಎಎಲ್‌ನಿಂದ ಹೊರಟು 11.35ಕ್ಕೆ ನವದೆಹಲಿಗೆ ವಾಪಸ್ ಹೋಗಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+