ಉಪಕಾರ ಮಾಡಿದ್ರೆ ನನ್ನ ವಿರುದ್ಧ ಹೀಗೆ ಮಾಡಿದ್ದಾರೆ: ಪೋಕ್ಸೋ ಪ್ರಕರಣಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ
ಬೆಂಗಳೂರು, ಮಾರ್ಚ್ 15: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಉಪಕಾರ ಮಾಡಿದ್ರೆ ನನ್ನ ವಿರುದ್ಧ ಹೀಗೆ ಮಾಡಿದ್ದಾರೆ ಎಂದು ತಾವು ನಿರಪರಾಧಿ ಎಂಬ ರೀತಿಯಲ್ಲಿ ಮಾತನಾಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, "ಯಾರೋ ಒಬ್ಬ ಹೆಣ್ಣು ಮಗಳು ಅನ್ಯಾಯವಾಗಿದೆ ಎಂದು ನನ್ನ ಬಳಿ ಬಂದಿದ್ದರು. ತಾಯಿ- ಮಗಳು ಹಲವು ಬಾರಿ ಬಂದು ಹೋಗುತ್ತಿದ್ದರು. ಅವರನ್ನು ಮನೆಯ ಒಳಗೆ ಕರೆಸಿ ಸಮಸ್ಯೆ ಕೇಳಿದ್ದೇನೆ. ಈ ವೇಳೆ ತಮಗೆ ಅನ್ಯಾಯವಾಗಿದೆ ಎಂದಿದ್ದರು. ಆಮೇಲೆ ನನ್ನ ಮೇಲೆ ಏನೇನೋ ಮಾತನಾಡಲು ಶುರು ಮಾಡಿದರು. ಕಮಿಷನರ್‌ಗೆ ಕರೆ ಮಾಡಿ ಅವರನ್ನು ಕಳುಹಿಸಿಕೊಟ್ಟೆ" ಎಂದಿದ್ದಾರೆ.

ಆದರೆ, ಈಗ ಅವರು ನನ್ನ ವಿರುದ್ಧವೆ ಏನೋ ಮಾಡುತ್ತಿದ್ದಾರೆ. ಹೆಣ್ಮಗಳು ನನ್ನ ಮೇಲೆ ಕಂಪ್ಲೆಂಟ್ ಕೊಟ್ಟಿದ್ದಾರೆ. ಆರೋಪ ನಿರಾಧಾರವಾಗಿದೆ. ಇರಲಿ ಎಲ್ಲವನ್ನು ಎದುರಿಸೋಣ. ಇದು ರಾಜಕೀಯ ಪ್ರೇರಿತ ಎಂದು ಹೇಳಲು ಇಷ್ಟಪಡುವುದಿಲ್ಲ. ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಮಾರ್ಚ್ ೧೪ರ ಗುರುವಾರ ತಡರಾತ್ರಿ 81 ವರ್ಷದ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗೃಹ ಚಿವ ಜಿ ಪರಮೇಶ್ವರ್ ಹೇಳಿದ್ದೇನು?
ಪ್ರಕರಣದ ಬಗ್ಗೆ ಮಾತನಾಡಿರುವ ಗೃಹ ಸಚಿವ ಜಿ ಪರಮೇಶ್ವರ್, "ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ತನಿಖೆ ಮಾಡುತ್ತಿದ್ದಾರೆ. ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸಲು ಸಾಧ್ಯವಿಲ್ಲ. ಇದು ಒಬ್ಬ ಮಾಜಿ ಮುಖ್ಯಮಂತ್ರಿ ವಿಷಯಕ್ಕೆ ಸಂಬಂಧಿಸಿದ್ದಾಗಿದೆ. ಇದು ಬಹಳ ಸೂಕ್ಷ್ಮ ವಿಷಯವಾಗಿದೆ. ಮಹಿಳೆಗೆ ರಕ್ಷಣೆ ಅಗತ್ಯ ಬಿದ್ದರೆ ಕೊಡುತ್ತೇವೆ" ಎಂದಿದ್ದಾರೆ.
ಮುಂದುವರಿದು, " ಯಡಿಯೂರಪ್ಪ ವಿರುದ್ಧ ದೂರು ನೀಡಿದ ಮಹಿಳೆ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಹೇಳುತ್ತಿದ್ದಾರೆ, ದೂರನ್ನು ಲಿಖಿತವಾಗಿ ನೀಡಿಲ್ಲ ಬದಲಿಗೆ ಟೈಪ್ ಮಾಡಿ ಕೊಟ್ಟಿದ್ದಾರೆ. ಇದು ಒಬ್ಬ ಮಾಜಿ ಸಿಎಂಗೆ ಸಂಬಂಧಿಸಿದ ವಿಷಯ. ಎಚ್ಚರಿಕೆಯಿಂದ ಮಾತನಾಡಬೇಕು" ಎಂದು ಹೇಳಿದ್ದಾರೆ.

ಫೆಬ್ರುವರಿ 2 ರಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಯಡಿಯೂರಪ್ಪ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಬಾಲಕಿಯ ತಾಯಿ ದೂರು ನೀಡಿದ್ದಾರೆ. ಪೋಕ್ಸೋ (Protection of Children from Sexual Offences (Pocso) Act) ಕಾನೂನಿನ ಸೆಕ್ಷನ್ 8 ಮತ್ತು ಐಪಿಸಿ ಸೆಕ್ಷನ್ 354 (ಎ) ಅಡಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಥಮ ಮಾಹಿತಿ ವರದಿ
ಎಫ್‌ಐಆರ್ ಪ್ರಕಾರ, ಮಗಳ ಮೇಲೆ ಈ ಹಿಂದೆ ಆಗಿದ್ದ ಅತ್ಯಾಚಾರ ಪ್ರಕರಣ ಸಂಬಂಧ ಎಸ್‌ಐಟಿ ತನಿಖೆಗೆ ವಹಿಸುವಂತೆ ಮನವಿ ಮಾಡಲು ಫೆಬ್ರುವರಿ 2 2024ರ ರಂದು ಯಡಿಯೂರಪ್ಪನವರ ಮನೆಗೆ ಸಂತ್ರಸ್ತ ಬಾಲಕಿ ಹಾಗೂ ತಾಯಿ ಹೋಗಿದ್ದಾರೆ. ಆ ವೇಳೆ ಅಪ್ರಾಪ್ತ ಬಾಲಕಿಯನ್ನು ತನ್ನ ರೂಮಿಗೆ ಕರೆದುಕೊಂಡು ಹೋಗಿ ಸುಮಾರು 5 ನಿಮಿಷಗಳ ಕಾಲ ಬಾಗಿಲು ಹಾಕಿಕೊಂಡು ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ. ರೇಪ್ ಆಗಿದೆಯೋ ಇಲ್ಲವೋ ಎಂದು ಚೆಕ್ ಮಾಡಲು ಹಾಗೆ ಮಾಡಿದೆ ಎಂದು ಹೇಳಿ ಕ್ಷಮೆ ಕೇಳಿದ್ದಾರೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications