ಪೋಕ್ಸೋ ಪ್ರಕರಣ: ಚಿತ್ರದುರ್ಗ ಮುರುಘಾ ಶ್ರೀಗೆ ಜಾಮೀನು, ಆದ್ರೂ ಬಿಡುಗಡೆಯಿಲ್ಲ ಯಾಕೆ?
ಬೆಂಗಳೂರು, ನವೆಂಬರ್, 08: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಫೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶ್ರೀಗಳಿಗೆ ಕರ್ನಾಟಕ ಹೈಕೋರ್ಟ್ 7 ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ.

ಚಿತ್ರದುರ್ಗ ಜಿಲ್ಲೆಗೆ ಪ್ರವೇಶಿಸುವಂತಿಲ್ಲ
ಚಿತ್ರದುರ್ಗ ಮುರುಘಾ ಶ್ರೀಗೆ ಜಾಮೀನು ಸಿಕ್ಕಿದೆ, ಆದರೆ ಬಿಡುಗಡೆ ಇಲ್ಲ. ಜಾಮೀನು ಮಂಜೂರು ಮಾಡಿರುವ ಹೈಕೋರ್ಟ್, ಚಿತ್ರದುರ್ಗ ಜಿಲ್ಲೆಗೆ ಪ್ರವೇಶಿಸುವಂತಿಲ್ಲ ಎಂದು ಹೇಳುವ ಮೂಲಕ ಷರತ್ತುಗಳನ್ನು ವಿಧಿಸಿದೆ. ಮೊದಲು ದಾಖಲಾಗಿದ್ದ ಒಂದು ಪ್ರಕರಣದಲ್ಲಿ ಜಾಮೀನು ಲಭ್ಯವಾಗಿದ್ದು, ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದಲ್ಲಿ ಅವರು ಜೈಲಿನಲ್ಲೇ ಇರಲಿದ್ದಾರೆ.
ಹೈ ಕೋರ್ಟ್ ವಿಧಿಸಿದ ಷರತ್ತುಗಳು
ಮತ್ತೊಂದು ಪ್ರಕರಣದಲ್ಲಿ ಅರ್ಜಿ ವಿಚಾರಣೆ ಬಾಕಿದ್ದು, ಚಿತ್ರದುರ್ಗಕ್ಕೆ ಪ್ರವೇಶಿಸುವಂತಿಲ್ಲ, ಪಾಸ್‌ಪೋರ್ಸ್ ಕೋರ್ಟ್ ವಶಕ್ಕೆ ನೀಡಬೇಕು. ಇಂತಹ ಕೃತ್ಯಗಳನ್ನು ಪುನಾರವರ್ತನೆ ಮಾಡುವಂತಿಲ್ಲ. ಪಾಸ್‌ಪೋರ್ಟ್ ಕೋರ್ಟ್ ವಶಕ್ಕೆ ನೀಡಬೇಕು. ಇಬ್ಬರ ಶ್ಯೂರಿಟಿ ಒದಗಿಸಲೇಬೇಕು ಎಂದು ಷರತ್ತುಗಳನ್ನು ವಿಧಿಸಿದೆ. ಹಾಗೆಯೇ ಜಾಮೀನು ಸಿಕ್ಕರೂ ಸದ್ಯ ಬಿಡುಗಡೆಯಿಲ್ಲ ಅಂತಲೂ ಹೇಳಿದೆ.
ಪ್ರಕರಣದ ಹಿನ್ನೆಲೆ
ಚಿತ್ರದುರ್ಗದ ಮುರುಘಾ ಮಠಕ್ಕೆ ಸಂಬಂಧಿಸಿದ ವಿದ್ಯಾರ್ಥಿ ನಿಲಯದ ಹಲವು ವಿದ್ಯಾರ್ಥಿನಿಯರಿಗೆ ಮುರುಘಾ ಶ್ರೀಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯ ಬಳಿ ಅಳಲು ತೋಡಿಕೊಂಡಿದ್ದಾರು.
ಮುರುಘಾ ಮಠದ ವಿದ್ಯಾರ್ಥಿ ನಿಲಯದಲ್ಲಿರುವ ನಮ್ಮನ್ನು ಸ್ವಾಮೀಜಿಗಳು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.ಸ್ವಾಮೀಜಿಯವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ಅವರೇ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು ಎಂದು ಆರೋಪಿಸಿ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಪ್ರಕರಣ ದಾಖಲಿಸಿದ್ದರು. ಬಳಿಕ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆಯಾಗಿದ್ದು, ಫೋಕ್ಸೋ ಪ್ರಕರಣದಡಿ ಮುರುಘಾ ಶ್ರೀಗಳನ್ನು 2022ರ ಸೆಪ್ಟೆಂಬರ್ 1ರಂದು ಪೊಲೀಸರು ಬಂಧಿಸಿದ್ದರು.












Click it and Unblock the Notifications