ಬೆಂಗಳೂರು: ಕೊಟ್ಟ ಸಾಲವನ್ನು ವಾಪಸ್ ಕೇಳಿದಕ್ಕೆ ಸ್ನೇಹಿತೆಯ ಹತ್ಯೆ
ಬೆಂಗಳೂರು, ಜನವರಿ 03 : ಕೊಟ್ಟ ಸಾಲವನ್ನು ವಾಪಾಸ್ ಕೇಳಿದ್ದಕ್ಕೆ ಮಹಿಳೆಯನ್ನು ಆಕೆಯ ಸ್ನೇಹಿತನೇ ಕೊಲೆ ಮಾಡಿರುವ ಆಘಾತಕಾರಿ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ
ಕಮರ್ಷಿಯಲ್ ಸ್ಟ್ರೀಟ್ ನಲ್ಲಿ ಈ ಘಟನೆ ನಡೆದಿದ್ದು, ಎರಡು ದಿನಗಳ ಹಿಂದೆ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸದ್ಯ ಪ್ರಕರಣ ಸಂಬಂಧ ಆರೋಪಿ ಗೋಪಿನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ಮಹಿಳೆಯನ್ನು ತಾರಾ ಎಂದು ಗುರುತಿಸಲಾಗಿದೆ.

ಎಚ್‍ಎಎಲ್ ನಲ್ಲಿ ಗುತ್ತಿಗೆ ಕಾರ್ಮಿಕನಾಗಿ ಕೆಲಸ ಮಾಡುತ್ತಿರೋ ಆರೋಪಿ ಗೋಪಿನಾಧ್ ಬೆಂಗಳೂರಿನ ಹೊರಮಾವು ನಿವಾಸಿಯಾಗಿದ್ದು, ತಾರಾ ಕುಟುಂಬಕ್ಕೆ ಆತ್ಮೀಯ ಸ್ನೇಹಿತನಾಗಿದ್ದ.
ಆರೋಪಿ ಗೋಪಿನಾಥ್, ತಾರಾ ಬಳಿ 11 ಲಕ್ಷ ರು ಸಾಲ ಪಡೆದಿದ್ದು, ಆ ಹಣವನ್ನು ತಾರಾ ವಾಪಸ್ ಕೊಡುವಂತೆ ಕೇಳಿದ್ದಾರೆ. ಈ ವಿಚಾರದಲ್ಲಿ ಇವರಿಬ್ಬರ ಮಧ್ಯೆ ನಡೆದ ಜಗಳ ನಡೆದಿದೆ. ಈ ವೇಳೆ ಗೋಪಿನಾಥ್, ತಾರಾಳ ಕುತ್ತಿಗೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.
ಕೊಲೆ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಗೋಪಿನಾಥ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.












Click it and Unblock the Notifications