ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಾಂಬ್ ನಾಗನ ವಿಡಿಯೋ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ದಿನ ಸ್ಥಳ ಬದಲಾಯಿಸುತ್ತಿರುವ ಬಾಂಬ್ ನಾಗನನ್ನು ಬಂಧಿಸಿದ ನಂತರವಷ್ಟೇ ಮುಂದಿನ ತನಿಖೆ ಎಂದ ಪರಮೇಶ್ವರ್.

|
Google Oneindia Kannada News

ಬೆಂಗಳೂರು, ಏಪ್ರಿಲ್ 22: ಆರ್ಥಿಕ ಅವ್ಯವಹಾರಗಳ ಆರೋಪ ಹೊತ್ತಿರುವ ಬಾಂಬ್ ನಾಗ ಕಳುಹಿಸಿರುವ ವಿಡಿಯೋ ಬಗ್ಗೆ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಪೊಲೀಸರಿಗೆ ಸಿಗದೇ ಪರಾರಿಯಾಗಿರುವ ನಾಗ, ಅಜ್ಞಾತ ಸ್ಥಳದಿಂದ ಶನಿವಾರ (ಏಪ್ರಿಲ್ 22) ಸಂಜೆ ವಿಡಿಯೋ ಕಳುಹಿಸಿದ್ದು, ಅದರಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಅಕ್ರಮಗಳಲ್ಲಿ ತೊಡಗಿದ್ದಾರೆಂದು ಆರೋಪಿಸಿದ್ದಾನೆ. ಅಲ್ಲದೆ, ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರು, ತಮ್ಮ ವಿರುದ್ಧ ಪಿತೂರಿ ನಡೆಸಿದ್ದಾರೆಂದೂ ಆರೋಪಿಸಿದ್ದಾನೆ.

Police arrest bomb Naga first then investigate: Parameshwar

ಈ ಬಗ್ಗೆ ಪ್ರತಿಕ್ರಿಯಿಸಿರುವ ಪರಮೇಶ್ವರ್, ''ಮೊದಲು ಬಾಂಬ್ ನಾಗನನ್ನು ಬಂಧಿಸಿ ಆನಂತರ ಆತ ನೀಡಿರುವ ಹೇಳಿಕೆಗಳ ಬಗ್ಗೆ ತನಿಖೆ ನಡೆಸಲಾಗುವುದು'' ಎಂದು ತಿಳಿಸಿದ್ದಾರೆ.

''ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿರುವ ಬಾಂಬ್ ನಾಗನನ್ನು ಬಂಧಿಸುವ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ನಾಗನ ಪ್ರಕರಣದ ತನಿಖೆಯಾಗಲಿ. ತನಿಖೆಯಲ್ಲಿ ನಾಗ ಮಾಡಿರುವ ಆರೋಪಗಳು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು'' ಎಂದು ತಿಳಿಸಿದರು.

English summary
Home minister G. Parameshwar reacts to the video sent by Bomb Naga and says that police will first arrest Naga and then investigate about his allegations.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X