ಬೆಂಗಳೂರು: ನಕಲಿ ಪತ್ರಕರ್ತನ ಅಸಲಿ ದಂಧೆ ಬಯಲು
ಬೆಂಗಳೂರು, ನವೆಂಬರ್ 22 : ಪತ್ರಕರ್ತ ಎಂದು ಹೇಳಿಕೊಂಡು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದ ನಕಲಿ ಪತ್ರಕರ್ತನ ಅಸಲಿ ದಂಧೆಯನ್ನು ಬೆಂಗಳೂರು ಪೊಲೀಸರು ಬಯಲಿಗೆಳೆದಿದ್ದಾರೆ.
ಪತ್ರಕರ್ತ ಎಂದು ಹೇಳಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ನಕಲಿ ಪತ್ರಕರ್ತನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಉಳ್ಳಾಲ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ನಕಲಿ ಪತ್ರಕರ್ತ ಕಿರಣ್ ಎನ್ನುವಾತನನ್ನು ಪೊಲೀಸರು ಬಂಧಿಸಿ, ಈತನಿಂದ 3 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಪತ್ರಕರ್ತ ಎಂದು ಹೇಳಿಕೊಂಡು ತಿರುಗಾಡುತ್ತಿದ್ದ ಕಿರಣ್, ನಗರದಲ್ಲಿ ಗಾಂಜಾ ಮಾರಾಟ ದಂಧೆಯನ್ನು ಮಾಡುತ್ತಿದ್ದ. ಅದೇ ತರ ಉಳ್ಳಾಲ್ ನಲ್ಲಿ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.












Click it and Unblock the Notifications