• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಾಜಿ ಕ್ರಿಕೆಟಿಗ ಅರವಿಂದ್ ಅವರ ಬೈಕ್ ಕದ್ದಿದ್ದ ಇಬ್ಬರ ಬಂಧನ

|

ಬೆಂಗಳೂರು, ಜನವರಿ 3: ರಣಜಿ ಮಾಜಿ ಆಟಗಾರನ ಬೈಕ್ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ರಣಜಿ ತಂಡದ ಮಾಜಿ ಆಟಗಾರ ಎಸ್ ಅರವಿಂದ್ ಅವರ ಬುಲೆಟ್ ಬೈಕ್ ಕಳವು ಮಾಡಿದ್ದ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರ್‌ಟಿ ನಗರದಲ್ಲಿ ವಾಸವಿದ್ದ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಅಬ್ದುಲ್ ವಹೀದ್ ಹಾಗೂ ಅಬ್ರಾರ್ ಬಂಧಿತರು. ಕೆಲ ದಿನಗಳ ಹಿಂದೆ ಮತ್ತಿಕೆರೆಯ ಈಶ್ವರ ದೇಗುಲದ ಸಮೀಪ ನಡೆದುಕೊಂಡು ಹೋಗುತ್ತಿದ್ದ ಗೀತಾ ಎಂಬುವವರ ಬಳಿ ಚಿನ್ನದ ಸರ ಕಿತ್ತುಕೊಂಡು ಹೋಗುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದಾಗ ಕ್ರಿಕೆಟಿಗ ಅರವಿಂದ್ ಬೈಕ್ ಇನ್ನಿತರೆ 20 ಬೈಕ್ ಕಳವು ಪ್ರಕರಣ ಬೆಳಕಿಗೆ ಬಂದಿದೆ.

ಮಚ್ಚಿನಿಂದ ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ, ವಿಡಿಯೋ ವೈರಲ್

ಆ ಬೈಕ್‌ಗಳನ್ನು ತೆಗೆದುಕೊಂಡು ಹೋಗಿ ಅಲ್ಲಿ ಪರಿಚಯಸ್ಥರಿಗೆ 25-30 ಸಾವಿರ ರೂಗಳಿಗೆ ಮಾರಾಟ ಮಾಡುತ್ತಿದ್ದರು. ಬಂದ ಹಣದಲ್ಲಿ ಮೋಜಿನ ಜೀವನ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಿಂದ ಮೂರು ರಾಯಲ್ ಎನ್‌ಫೀಲ್ಡ್ ಸೇರಿ 25 ಲಕ್ಷ ರೂ ಮೌಲ್ಯದ ವಿವಿಧ ಮಾದರಿಯ ಬೈಕ್‌ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

English summary
Bengaluru Mattikere police arrested tow bike robbers, Who is recently robbed former cricketer Aravind's Bullet bike.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X