ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿದ ಸಿಎಂ ಯಡಿಯೂರಪ್ಪ!

ಬೆಂಗಳೂರು, ಅ. 21: "ಪೊಲೀಸ್ ಸಂಸ್ಮರಣಾ ದಿನಾಚರಣೆ" ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹುತಾತ್ಮ ಪೊಲೀಸರ ಸ್ಮಾರಕಕ್ಕೆ ಹೂಗುಚ್ಛ ಅರ್ಪಿಸಿ ಗೌರವ ಸೂಚಿಸಿದರು. ಬೆಂಗಳೂರಿನ ಮೈಸೂರು ರಸ್ತೆಯ ಬೆಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿದ ಯಡಿಯೂರಪ್ಪ ಅವರು, ನಂತರ ಹುತಾತ್ಮ ಪೊಲೀಸರಿಗೆ ಗೌರವ ಸಮರ್ಪಿಸಿದರು.

ಇದೇ ಅಕ್ಟೋಬರ್ 31 ರಂದು ಭಾರತ-ಚೀನಾ ಗಡಿ ಪ್ರದೇಶ ಲಡಾಖ್‌ನಲ್ಲಿ ಭಾರತೀಯ 9 ಸೈನಿಕರು ಹುತಾತ್ಮರಾಗಿದ್ದರು. ಅವರನ್ನು ಚೀನಿ ಸೇನೆ ಹತ್ಯೆಮಾಡಿತ್ತು. ಜೊತೆಗೆ ಇತ್ತೀಚೆಗೆ ಕೋವಿಡ್ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ ಕೊರೊನಾ ಯೋಧ ಪೊಲೀಸರಿಗೂ ಇದೇ ಸಂದರ್ಭದಲ್ಲಿ ಗೌರವ ಸಮರ್ಪಣೆ ಮಾಡಲಾಯಿತು. ವಿವಿಧ ಕಾರಣಗಳಿಂದ ಕಳೆದ ಒಂದು ವರ್ಷದಲ್ಲಿ ಇಡೀ ಭಾರತಾದ್ಯಂತ ಒಟ್ಟು 264 ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

Police Commemoration Day 2020 Yediyurappa pays tribute to martyrdom police

ಕರ್ತವ್ಯ ನಿರ್ವಹಿಸುವ ಅವಧಿಯಲ್ಲಿ ಮೃತಪಟ್ಟ ಪೊಲೀಸ್‌ ಸಿಬ್ಬಂದಿಗೆ ಗೌರವ ವಂದನೆಯನ್ನು ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್, ಡಿಜಿಪಿ ಪ್ರವೀಣ್ ಸೂದ್, ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು. ಕಾರ್ಯಕ್ರಮದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಗೆ ತೆರಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+