ಬಿಎಂಟಿಸಿ ಬಸ್ ನಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬೆಂಗಳೂರು, ಡಿಸೆಂಬರ್.11: ಸಿಲಿಕಾನ್ ಸಿಟಿಯಾಗಿ ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಟ್ರಾಫಿಕ್ ಎಂಬುದು ದಿನನಿತ್ಯ ಜನರನ್ನು ಕಾಡುವ ಅತಿದೊಡ್ಡ ಸಮಸ್ಯೆಯಾಗಿದೆ. ಇದನ್ನ ಬಗೆಹರಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಸಲಾಗುತ್ತಿದೆ.

ಸ್ವತಃ ಬೆಂಗಳೂರು ನಗರ ಪೊಲೀಸ್ ಆಯುಕ್ತರೇ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನ ಪ್ರತಿ ಮನೆ ಮನೆಯಲ್ಲೂ ನಾಲ್ಕೈದು ವಾಹನಗಳಿವೆ. ದಿನ ಬೆಳಗಾದರೆ ನಗರದ ರಸ್ತೆಗಳು ಕಾರ್, ಬೈಕ್ ಸೇರಿದಂತೆ ವಾಹನ ಸಂಚಾರದಿಂದ ಗಿಜುಗುಡುತ್ತದೆ. ಇದಕ್ಕೆಲ್ಲ ಕಡಿವಾಣ ಹಾಕಬೇಕು ಎಂಬ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಮಾಡಲಾಯಿತು.

ಬೆಂಗಳೂರಿನಲ್ಲಿ ವೈಯಕ್ತಿಕ ವಾಹನಗಳ ಬಳಕೆಗಿಂತ ಸಾರ್ವಜನಿಕ ಸಾರಿಗೆಯನ್ನು ಹೆಚ್ಚಾಗಿ ಬಳಕೆ ಮಾಡುವಂತೆ ನಗರದ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಈ ಕುರಿತು ಸ್ವತಃ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರೇ ಜನರ ಬಳಿಗೆ ಬಂದಿದ್ದರು.

Police Commissioner Bhaskar Rao Today Travelled In BMTC Bus

ಬಿಎಂಟಿಸಿ ಬಸ್ ನಲ್ಲಿ ಪೊಲೀಸ್ ಆಯುಕ್ತರು

ಬೆಂಗಳೂರಿನ ಜನರು ಸಾರ್ವಜನಿಕ ಸಾರಿಗೆಯನ್ನು ಹೆಚ್ಚಾಗಿ ಬಳಕೆ ಮಾಡಬೇಕು. ಇದರಿಂದ ಸಂಚಾರದಟ್ಟಣೆಯನ್ನು ಕೊಂಚ ಮಟ್ಟಿಗಾದರೂ ಕಡಿಮೆ ಮಾಡಬಹುದು ಎಂದು ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಈ ಹಿನ್ನೆಲೆಯಲ್ಲಿ ಸ್ವತಃ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರೇ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣ ಬೆಳೆಸುವ ಮೂಲಕ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಿದರು. ಖಾಸಗಿ ವಾಹನಗಳ ಬಳಕೆಯೇ ನಗರದಲ್ಲಿ ಟ್ರಾಫಿಕ್ ಸಮಸ್ಯೆಗೆ ಮುಖ್ಯ ಕಾರಣವಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜನರು ಸಹಕರಿಬೇಕು ಎಂದು ಮನವಿ ಮಾಡಿಕೊಳ್ಳಲಾಯಿತು.

Police Commissioner Bhaskar Rao Today Travelled In BMTC Bus

ಸಂಚಾರ ದಟ್ಟಣೆಗೆ ಕಡಿವಾಣ ಹಾಗೂ ಸಾರ್ವಜನಿಕ ಸಾರಿಗೆ ಬಳಕೆ ಕುರಿತು ನಡೆದ ಜಾಗೃತಿಯಲ್ಲಿ ಭಾಸ್ಕರ್ ರಾವ್ ಅವರ ಜೊತೆ ನಟ ಚೇತನ್ ಕೂಡಾ ಭಾಗಿಯಾಗಿದ್ದರು. ನಗರ ಪೊಲೀಸ್ ಆಯುಕ್ತರೊಂದಿಗೆ ಬಿಎಂಟಿಸಿ ಬಸ್ ನಲ್ಲಿ ಸಂಚರಿಸುವ ಮೂಲಕ ಜನರಲ್ಲಿ ಅರಿವು ಮೂಡಿಸಲಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+