ಬೀದರ್, ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ ಬೆನ್ನಲ್ಲೇ ಎಚ್ಚತ್ತು ಸೂಕ್ತ ಕ್ರಮಕ್ಕೆ ಮುಂದಾದ ಬೆಂಗಳೂರು ಪೊಲೀಸರು
ಬೆಂಗಳೂರು, ಜನವರಿ, 18: ಮೊನ್ನೆ ಬೀದರ್, ನಿನ್ನೆ (ಜನವರಿ 17) ಮಂಗಳೂರಿನಲ್ಲಿ ಸಿನಿಮಾ ರೀತಿಯಲ್ಲಿ ದರೋಡೆಕೋರಾರರು ಬ್ಯಾಂಕ್‌ನಲಿದ್ದ ಹಣ, ಚಿನ್ನ ದೋಚಿ ಪರರಾರಿಯಾಗಿದ್ದಾರೆ. ಇದರ ಬೆನ್ನಲ್ಲೆ ಎಚ್ಚೆತ್ತ ಬೆಂಗಳೂರು ಪೊಲೀಸ್ ಆಯುಕ್ತರು ನಗರದಲ್ಲಿ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಹಾಗಾದರೆ ಯಾವೆಲ್ಲ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಬೀದರ್, ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಅಲರ್ಟ್ ಆಗಿರಲು ನಗರ ಪೊಲೀಸ್ ಆಯುಕ್ತರಾದ ಬಿ ದಯಾನಂದ್ ಅವರು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ. ಎರಡು ಜಿಲ್ಲೆಗಳಲ್ಲಿ ನಡೆದ ದರೋಡೆ ಪ್ರಕರಣಗಳು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿವೆ. ಬೆಂಗಳೂರಿನಲ್ಲಿ ಅಂತಹ ಯಾವುದೇ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ.

ಬೀದರ್ ಹಾಗೂ ಮಂಗಳೂರಿನಲ್ಲಿ ಕೋಟ್ಯಂತರ ರೂಪಾಯಿ ದರೋಡೆ ನಡೆದ ಬೆನ್ನಲ್ಲೇ ಬೆಂಗಳೂರಿನ ಪ್ರತಿ ಬ್ಯಾಂಕ್, ಎಟಿಎಂಗಳ ಬಳಿ ಅಲರ್ಟ್ ಇರಲು ಸೆಕ್ಯುರಿಟಿ ಏಜೆನ್ಸಿಗಳಿಗೆ ಪೊಲೀಸ್ ಆಯುಕ್ತರಾದ ದಯಾನಂದ್ ಅವರು ಸೂಚನೆ ನೀಡಿದ್ದಾರೆ. ಅದರಲ್ಲೂ ಯಾರು ಯಾವ ಪಾಳಿಯಲ್ಲಿ ಕೆಲಸ ಮಾಡುತ್ತಾರೆ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕುವಂತೆ ಸೂಚಿಸಿದ್ದಾರೆ.
ಬ್ಯಾಂಕ್ ಮತ್ತು ಎಟಿಎಂಗಳ ಬಳಿ ಎಷ್ಟು ಜನ ಸೆಕ್ಯುರಿಟಿ ಇರುತ್ತಾರೆ, ರಾತ್ರಿ ಹಾಗೂ ಬೆಳಗಿನ ಪಾಳಿಯಲ್ಲಿ ಎಷ್ಟು ಮಂದಿ ಇರುತ್ತಾರೆ ಹಾಗೂ ಬ್ಯಾಂಕ್, ಎಟಿಎಂಗಳ ಬಳಿ ಸಿಸಿಟಿವಿ ಕ್ಯಾಮರಾ ಸರಿ ಇದೆಯಾ ಎನ್ನುವ ಎಂಬ ಬಗ್ಗೆ ಮಾಹಿತಿ ಪಡೆಯಲು ಇನ್ಸ್‌ಪೆಕ್ಟರ್‌ಗಳಿಗೆ ಕಮಿಷನರ್ ಸೂಚನೆ ನೀಡಿದರು. ಹೊಯ್ಸಳ ಸಿಬ್ಬಂದಿಯಿಂದ ಬ್ಯಾಂಕ್, ಎಟಿಎಂ ಬಳಿ ಗಸ್ತು ತಿರುಗಲು ಸೂಚನೆ ನೀಡಿದ್ದಾರೆ.
ಈಗಾಗಲೇ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಸಭೆ ನಂತರ ಅಧಿಕಾರಿ, ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಎಟಿಎಂಗಳಲ್ಲಿ ಸೆಕ್ಯೂರಿಟಿ ಇರುವ ಬಗ್ಗೆ ತಿಳಿದುಕೊಳ್ಳಲು ಸ್ಥಳಕ್ಕೆ ಭೇಟಿ ನೀಡಿ. ಹಣ ತುಂಬಲು ಹೋಗುವ ಏಜೆಸ್ಸಿ ವಾಹನಕ್ಕೆ ಭದ್ರತೆ ಹೆಚ್ಚಿಸಲು ತಿಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಮಾತನಾಡಿರುವ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು, ರಾಜ್ಯದ ಬೀದರ್ ಮತ್ತು ಮಂಗಳೂರಿನಲ್ಲಿ ದರೋಡೆ ಪ್ರಕರಣ ವರದಿ ಆಗಿದೆ. ಈ ಹಿನ್ನೆಲೆ ನಗರದ ಎಲ್ಲಾ ಕಡೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಬ್ಯಾಂಕ್, ಎಟಿಎಂಗೆ ಹಣ ಸಾಗಿಸುವ ವಾಹನಗಳಲ್ಲಿ ಭದ್ರತೆ ಬಗ್ಗೆ ಸೂಚಿಸಲಾಗಿದೆ. ಅಲ್ಲಿನ ಸಿಸಿಟಿವಿ ಸೇರಿದಂತೆ ಎಲ್ಲವನ್ನೂ ಪರಿಶೀಲನೆ ಮಾಡುವಂತೆ ತಿಳಿಸಲಾಗಿದೆ ಎಂದು ಹೇಳಿದರು.
ಬೀದರ್‌ನ ಎಸ್‌ಬಿಐ ಎಂಟಿಎಂ ಬಳಿ ಸಿಬ್ಬಂದಿಗೆ ಶೂಟ್ ಮಾಡಿ 97 ಲಕ್ಷಣ ರೂಪಾಯಿ ಹಣ ದೋಚಿದ್ದಾರೆ ಎನ್ನಲಾದ ಖದೀಮರಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಇಬ್ಬರ ಮೇಲೆ ದರೋಡೆಕೋರರು ಗುಂಡು ಹಾರಿಸಿ, ಹಣದ ಬಾಕ್ಸ್‌ನೊಂದಿಗೆ ಪರಾರಿಯಾಗಿದ್ದಾರೆ. ಗುಂಡಿನೇಟು ಬಿದ್ದವರ ಪೈಕಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಆರೋಪಿಗಳು ಬೀದರ್‌ನಿಂದ ಹೈದರಾಬಾದ್‌ವರೆಗೆ ಬೈಕ್‌ನಲ್ಲೇ ತೆರಳಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಮಂಗಳೂರಿನ ಕೋಟೆಕಾರು ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ದರೋಡೆಕೋರರು ಬಂದೂಕು ತೋರಿಸಿ ಹಣ ದೋಚಿದ್ದು, ಈ ವೇಳೆ 12 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ದರೋಡೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ ಎನ್ನಲಾಗುತ್ತಿದೆ.












Click it and Unblock the Notifications