ಕ್ವಾರಂಟೈನ್‌ಗೆ ಒಳಗಾದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
ಬೆಂಗಳೂರು, ಆಗಸ್ಟ್ 04: ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರೂ ಕೂಡ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಡುತ್ತಿದ್ದಂತೆಯೇ ಕಮಲ್ ಪಂತ್ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.
Recommended Video
ಆಯುಕ್ತರಾಗುವ ಮುನ್ನ ಕಮಲ್ ಪಂತ್ ರಾಜ್ಯ ಗುಪ್ತದಳದ ಎಡಿಜಿಪಿ ಆಗಿದ್ದರು. ಪ್ರತಿದಿನ ಬೆಳಿಗ್ಗೆ ಮುಖ್ಯಮಂತ್ರಿಯನ್ನು ಭೇಟಿಯಾಗಿ ರಾಜ್ಯದ ಸ್ಥಿತಿಗತಿ ಬಗ್ಗೆ ಮಾತಿ ನೀಡುವುದು ನಿಯಮ. ಅದರಂತೆ ನಿತ್ಯ ಕಮಲ್ ಪಂತ್ ಅವರು ಮುಖ್ಯಮಂತ್ರಿಗಳ ಸಂಪರ್ಕದಲ್ಲಿದ್ದರು.
ಶನಿವಾರವಷ್ಟೇ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಕಮಲ್ ಪಂತ್ ಅವರು ಭಾನುವಾರದಿಂದಲೇ ಕ್ವಾರಂಟೈನ್‌ಗೆ ಒಳಪಟ್ಟಿದ್ದಾರೆ.

ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಬಳಿಕವೂ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದರು. ಕಳೆದ 3 ದಿನಗಳಿಂದ ರಾಜ್ಯ ಗುಪ್ತದಳದ ಎಡಿಜಿಪಿಯಾಗಿ ಕರ್ತವ್ಯನಿರ್ವಹಿಸುತ್ತಿರುವ ಬಿ.ದಯಾನಂದ್ ಅವರೂ ಕೂಡ ಇದೀಗ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.
ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೂ ಕೂಡ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.












Click it and Unblock the Notifications