• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕ್ವಾರಂಟೈನ್‌ಗೆ ಒಳಗಾದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌

|

ಬೆಂಗಳೂರು, ಆಗಸ್ಟ್ 04: ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರೂ ಕೂಡ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಡುತ್ತಿದ್ದಂತೆಯೇ ಕಮಲ್ ಪಂತ್ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

   ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ | Oneindia Kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಆಯುಕ್ತರಾಗುವ ಮುನ್ನ ಕಮಲ್ ಪಂತ್ ರಾಜ್ಯ ಗುಪ್ತದಳದ ಎಡಿಜಿಪಿ ಆಗಿದ್ದರು. ಪ್ರತಿದಿನ ಬೆಳಿಗ್ಗೆ ಮುಖ್ಯಮಂತ್ರಿಯನ್ನು ಭೇಟಿಯಾಗಿ ರಾಜ್ಯದ ಸ್ಥಿತಿಗತಿ ಬಗ್ಗೆ ಮಾತಿ ನೀಡುವುದು ನಿಯಮ. ಅದರಂತೆ ನಿತ್ಯ ಕಮಲ್ ಪಂತ್ ಅವರು ಮುಖ್ಯಮಂತ್ರಿಗಳ ಸಂಪರ್ಕದಲ್ಲಿದ್ದರು.

   ಕಮಲ್ ಪಂತ್‌ಗೆ ಅಧಿಕಾರ ಹಸ್ತಾಂತರಿಸಿದ ಭಾಸ್ಕರ್ ರಾವ್

   ಶನಿವಾರವಷ್ಟೇ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಕಮಲ್ ಪಂತ್ ಅವರು ಭಾನುವಾರದಿಂದಲೇ ಕ್ವಾರಂಟೈನ್‌ಗೆ ಒಳಪಟ್ಟಿದ್ದಾರೆ.

   ಉಡ್ತಾ 'ಪಂಜಾಬ್‌'ನಿಂದ ಉಡ್ತಾ 'ಬೆಂಗಳೂರ್' ತನಕ!

   ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಬಳಿಕವೂ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದರು. ಕಳೆದ 3 ದಿನಗಳಿಂದ ರಾಜ್ಯ ಗುಪ್ತದಳದ ಎಡಿಜಿಪಿಯಾಗಿ ಕರ್ತವ್ಯನಿರ್ವಹಿಸುತ್ತಿರುವ ಬಿ.ದಯಾನಂದ್ ಅವರೂ ಕೂಡ ಇದೀಗ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

   ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೂ ಕೂಡ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

   ಮೋದಿ ಕನಸಿಗೆ ಕೊಳ್ಳಿ ಇಟ್ಟ ಕೆಎಸ್ಎಸ್ಐಡಿಸಿ, ಏನಿದು ಭಾರಿ ಆರೋಪ?

   English summary
   After Chief minister BS Yediyurappa tested positive for Coronavirus, Bengaluru police commissioner Kamal Pant goes under self-quarantine.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X