ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್ ಸಚ್ಚಿದಾನಂದ ಮೂರ್ತಿ ವಿರುದ್ಧ ದೂರು

|
Google Oneindia Kannada News

ಬೆಂಗಳೂರು, ಜೂನ್ 8: "ನಟ ಚೇತನ್ ಅಹಿಂಸಾ ವಿರುದ್ಧ ಬ್ರಾಹ್ಮಣರನ್ನು ಎತ್ತಿಕಟ್ಟಿ ಅಶಾಂತಿ ಸೃಷ್ಟಿಸಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್ ಸಚ್ಚಿದಾನಂದ ಮೂರ್ತಿ ಯತ್ನಿಸುತ್ತಿದ್ದಾರೆ'' ಎಂದು "ಸಮುದಾಯ ಬೆಂಗಳೂರು' ಸಂಸ್ಥೆಯ ಕಾರ್ಯದರ್ಶಿ ಕಾವ್ಯ ಅಚ್ಯುತ್ ಆರೋಪಿಸಿದ್ದಾರೆ.

"ಅಶಾಂತಿ ಸೃಷ್ಟಿಸುವುದಕ್ಕಾಗಿ ಸರ್ಕಾರಿ ಸಂಸ್ಥೆಯ ಹೆಸರು ಮತ್ತು ಸರ್ಕಾರಿ ಮುದ್ರೆ/ ಲಾಂಛನವನ್ನು ದುರುಪಯೋಗ ಪಡಿಸಿಕೊಂಡು ಕ್ರಿಮಿನಲ್ ಅಪರಾಧ ಮಾಡಿದ್ದಾರೆ'' ಎಂದು ಕಾವ್ಯ ಅಚ್ಯುತ್ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಬ್ರಾಹ್ಮಣರ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಮೀಸಲಾಗಿರುವ ಸರ್ಕಾರಿ ಸಂಸ್ಥೆಯಾಗಿದೆ. ಬಡ, ಹಿಂದುಳಿದ ಬ್ರಾಹ್ಮಣರ ಏಳಿಗೆಗಾಗಿ ಯೋಜನೆಗಳನ್ನು ರೂಪಿಸುವುದು ಮತ್ತು ಜಾರಿ ಮಾಡುವುದಷ್ಟೇ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಕೆಲಸವಾಗಿರುತ್ತದೆ.

Police Complaint Against Brahmin Development Board Chairman HS Sachhidananda Murthy

ಬಡ, ಹಿಂದುಳಿದ ಬ್ರಾಹ್ಮಣರ ಅಭಿವೃದ್ಧಿಯ ನಿಟ್ಟಿನಲ್ಲಿ ಕೆಲಸ ಮಾಡದ ಮಂಡಳಿ ಅಧ್ಯಕ್ಷರು, ಸರ್ಕಾರಿ ದಾಖಲೆ/ ಮುದ್ರೆ/ ಲಾಂಛನ ಮತ್ತು ಕರ್ನಾಟಕ ಸರ್ಕಾರ ಎಂಬ ಹೆಸರನ್ನು ದುರುಪಯೋಗಪಡಿಸಿಕೊಂಡು ನಟ ಚೇತನ್ ವಿರುದ್ಧ ದೂರು ನೀಡುವ ಮೂಲಕ ಕ್ರಿಮಿನಲ್ ಅಪರಾಧ ಮಾಡಿದ್ದಾರೆ ಎಂದು ಕಾವ್ಯ ಅಚ್ಯುತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Police Complaint Against Brahmin Development Board Chairman HS Sachhidananda Murthy

Recommended Video

Test ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರು | Oneindia Kannada

ಬಸವ ತತ್ವದ ಅನುಯಾಯಿ ಆಗಿರುವ ಶರಣ ಚೇತನ್ ಅಹಿಂಸಾ ವಿರುದ್ಧ ಸರ್ಕಾರಿ ದಾಖಲೆಯನ್ನು ದುರುಪಯೋಗಪಡಿಸಿಕೊಂಡು ಬ್ರಾಹ್ಮಣರನ್ನು ಎತ್ತಿಕಟ್ಟುವ, ಸಮುದಾಯಗಳ ಮಧ್ಯೆ ಅಶಾಂತಿ‌ ಸೃಷ್ಟಿಸುವ ಮತ್ತು ಸರ್ಕಾರಿ ಲಾಂಛನ ದುರುಪಯೋಗ ಪಡಿಸಿಕೊಂಡಿರುವ ಎಚ್.ಎಸ್ ಸಚ್ಚಿದಾನಂದ ಮೂರ್ತಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು "ಸಮುದಾಯ ಬೆಂಗಳೂರು' ಸಂಸ್ಥೆಯ ಕಾರ್ಯದರ್ಶಿ ಕಾವ್ಯ ಅಚ್ಯುತ್ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾರೆ.

English summary
Kavya Achyut alleges that Karnataka State Brahmin Development Board Chairman HS Sachhidananda Murthy is trying to create unrest in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X