• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾ ವೈರಸ್‌ಗೆ ಹೆದರಿ ಪೊಲೀಸ್ ಕಾನ್ಸ್ ಸ್ಟೇಬಲ್ ಆತ್ಮಹತ್ಯೆ

|

ಬೆಂಗಳೂರು, ಜೂನ್ 23: ಲಾಕ್‌ಡೌನ್‌ ಸಂದರ್ಭದಲ್ಲಿ ಕೊರೊನಾ ವೈರಸ್ ವಿರುದ್ಧ ರಾತ್ರಿ-ಹಗಲು ಎನ್ನದೇ ಕರ್ತವ್ಯ ನಿರ್ವಹಿಸಿದ್ದ ಪೊಲೀಸ್ ಇಲಾಖೆಗೆ ಈಗ ಕೊರೊನಾ ಭೀತಿ ಕಾಡುತ್ತಿದೆ.

ಒಂದರ ಹಿಂದೆ ಒಂದು ಎಂಬಂತೆ ಪೊಲೀಸ್ ಸಿಬ್ಬಂದಿಗಳಲ್ಲಿ ಕೊವಿಡ್ ಸೋಂಕು ವರದಿಯಾಗುತ್ತಿದೆ. ಈ ಮಧ್ಯೆ ಕೊರೊನಾ ಸೋಂಕು ಖಚಿತವಾದ ಬಳಿಕ ಹೆದರಿ ಪೊಲೀಸ್ ಕಾನ್ಸ್ ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Breaking: ಕರ್ನಾಟಕದಲ್ಲಿ ಕೊರೊನಾ ವೈರಸ್‌ಗೆ ಮೊದಲ ಪೊಲೀಸ್ ಸಾವು

50 ವರ್ಷದ ಕೆಎಸ್ ಆರ್ ಪಿ ಹೆಡ್ ಕಾನ್ಸ್ ಸ್ಟೇಬಲ್ ಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಬಸ್‌ನಲ್ಲಿ ಆಸ್ಪತ್ರೆಗೆ ಕರೆದಿಯ್ಯುವಾಗ ವೇಳೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.

4ನೇ ಬೆಟಾಲಿಯನ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಎಸ್ಆರ್ ಪಿ ಸಿಬ್ಬಂದಿ, ಸೋಂಕಿತ ಸಿಬ್ಬಂದಿ ಸಂಪರ್ಕದಲ್ಲಿದ್ದ ಹಿನ್ನಲೆ ಕೆಲ ದಿನಗಳಿಂದ ಕ್ವಾರಂಟೈನ್ ಮಾಡಲಾಗಿತ್ತು. ಜೂನ್ 20 ರಂದು ಅವರಿಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ನಿನ್ನೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆ ಹಿರಿಯ ಅಧಿಕಾರಿಗಳ ಸೂಚನೆಯಂತೆ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಕೆಎಸ್ ಆರ್ಪಿ ವಾಹನದಲ್ಲಿ ಸೋಂಕಿತ ಮತ್ತು ಓರ್ವ ಚಾಲಕನನ್ನ ಸಿವಿ ರಾಮನ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಬಸ್ಸಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಮಾರತ್‌ಹಳ್ಳಿಯ ಪೊಲೀಸ್ ಠಾಣೆಯ ನಾಲ್ಕು ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ತಿಳಿದು ಬಂದಿದೆ. ಇದಕ್ಕೂ ಮುಂಚೆ ಬೆಂಗಳೂರಿನ ವಿವಿ ಪುರಂ ಪೊಲೀಸ್ ಠಾಣೆಯ ಟ್ರಾಫಿಕ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಎಸ್ಐ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದರು.

ಈವರೆಗೆ ಕರ್ನಾಟಕದಲ್ಲಿ ಒಟ್ಟು ನಾಲ್ಕು ಪೊಲೀಸರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ ಎಂಬ ಮಾಹಿತ ಇದೆ.

English summary
Police Constable has Commit Suicide in ksrp bus After He tested COVID 19 positive at bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X