ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪೊಲೀಸ್ ನೇಮಕಾತಿ ಪರೀಕ್ಷೆ; ಮಹತ್ವದ ಸೂಚನೆ ನೀಡಿದ ಇಲಾಖೆ

|
Google Oneindia Kannada News

Recommended Video

ಡಿಎಲ್ ಇಲ್ಲದವರ ನೆರವಿಗೆ ಬಂದ ಸಿಂಘಂ ರವಿ ಚೆನ್ನಣ್ಣನವರ್ | Oneinida Kannada

ಬೆಂಗಳೂರು, ಸೆಪ್ಟೆಂಬರ್ 13 : ಬೆಂಗಳೂರು ನಗರ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಸೆಪ್ಟೆಂಬರ್ 22ರಂದು ನಗರದ 26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಪೊಲೀಸ್ ಕಾನ್ಸ್‌ಟೇಬಲ್ (ಪುರುಷ/ಮಹಿಳಾ) ಹುದ್ದೆಗಳ ನೇಮಕಾತಿಗಾಗಿ ನಗರದಲ್ಲಿ ಪರೀಕ್ಷೆ ನಡೆಯಲಿದೆ. 18,500 ಅಭ್ಯರ್ಥಿಗಳಿಗೆ ಬೆಳಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆಯ ತನಕ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಈ ವರ್ಷ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 5982 ಹುದ್ದೆ ಭರ್ತಿಈ ವರ್ಷ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 5982 ಹುದ್ದೆ ಭರ್ತಿ

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಸೂಚನೆಯನ್ನು www.ksp.gov.inನಲ್ಲಿ ಬಿಡುಗಡೆ ಮಾಡಲಾಗಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಕರೆ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು.

ಕರ್ನಾಟಕ ಪೊಲೀಸ್ ನೇಮಕಾತಿ : 850 ಪಿಎಸ್‌ಐ, 8 ಸಾವಿರ ಪೇದೆಗಳುಕರ್ನಾಟಕ ಪೊಲೀಸ್ ನೇಮಕಾತಿ : 850 ಪಿಎಸ್‌ಐ, 8 ಸಾವಿರ ಪೇದೆಗಳು

Police Constable Written Exam Direction By Police Department

ಸೂಚಿಸಿದ ಸಮಯಕ್ಕೆ ಸರಿಯಾಗಿ ನಿಗದಿಪಡಿಸಿದ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಅಭ್ಯರ್ಥಿಗಳಿಗೆ ಪೊಲೀಸ್ ಇಲಾಖೆ ಸೂಚನೆಯನ್ನು ನೀಡಿದೆ.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 16,838 ಹುದ್ದೆಗಳು ಖಾಲಿ ಇವೆ. ಇವುಗಳಲ್ಲಿ 2019ರ ಅಂತ್ಯದೊಳಗೆ 5,982 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಗೃಹ ಇಲಾಖೆ ಕರ್ನಾಟಕ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.

ಗೃಹ ಇಲಾಖೆ 2020ರ ಮಾರ್ಚ್‌ನೊಳಗೆ 615 ಪಿಎಸ್‌ಐ, 4540 ಪೇದೆಗಳ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂದು ಹೇಳಿದೆ. ಮೊದಲ ಹಂತದ ನೇಮಕಾತಿ ಬಗ್ಗೆ ಅಕ್ಟೋಬರ್‌ನಲ್ಲಿ ವರದಿ ನೀಡಲು ಸೂಚನೆ ನೀಡಲಾಗಿದೆ.

English summary
Police constable written exam will be held on September 22, 2019 at 26 center in Bengaluru city. 18, 500 candidates will written exam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X