ಸರಗಳ್ಳನನ್ನು ಸಿನಿಮೀಯ ರೀತಿ ಚೇಸ್ ಮಾಡಿ ಹಿಡಿದ ಪೊಲೀಸರು
ಬೆಂಗಳೂರು, ಜನವರಿ 19: ಮಹಿಳೆಯ ಚೈನ್ ಅನ್ನು ಕಿತ್ತುಕೊಂಡು ಕಾರಿನಲ್ಲಿ ಪರಾರಿಯಾಗುತ್ತಿದ್ದ ಸರಗಳ್ಳನನ್ನು ಇಬ್ಬರು ಪೇದೆಗಳು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಬಂಧಿಸಿದ್ದಾರೆ.
ಮಂಗಳವಾರ ಎಚ್‌ಎಸ್‌ಆರ್ ಬಡಾವಣೆಯಲ್ಲಿ ಮುಂಜಾನೆ ವಾಕಿಂಗ್ ಮಾಡುತ್ತಿದ್ದ ಮಹಿಳೆಯೋರ್ವರ ಸರವನ್ನು ಕಿತ್ತುಕೊಂಡು ಕಳ್ಳ ಸೋಮಶೇಖರ್ ಕಾರಿನಲ್ಲಿ ಪರಾರಿಯಾಗಿದ್ದಾನೆ, ಕೂಡಲೇ ಮಹಿಳೆ ಪೊಲೀಸ್ ಕಂಟ್ರೋಲ್ ರೂಮ್‌ಗೆ ಕರೆ ಮಾಡಿ ಕಾರಿನ ಮಾಹಿತಿ, ಕಾರು ಹೋದ ದಿಕ್ಕು ಹೇಳಿದ್ದಾಳೆ.
ಮಹಿಳೆಯಿಂದ ಮಾಹಿತಿ ಪಡೆದ ಕಂಟ್ರೋಲ್ ರೂಮ್ ಪೊಲೀಸರು ಎಚ್.ಎಸ್.ಆರ್ ಬಡಾವಣೆಯಲ್ಲಿ ಬೀಟ್‌ನಲ್ಲಿದ್ದ ಪೇದೆಗಳಾದ ಮಹೇಶ್ ನಾಯಕ್ ಮತ್ತು ಬಸವೇಶ್ವರ್ ಅವರಿಗೆ ವಿಷಯ ಮುಟ್ಟಿಸಿದ್ದಾರೆ. ಕೂಡಲೇ ಎಚ್ಚೆತ್ತ ಪೇದೆಗಳು ಕಾರನ್ನು ಪತ್ತೆ ಹಚ್ಚಿ ಅದರ ಬೆನ್ನುಹತ್ತಿದ್ದಾರೆ.

ಬಹಳಾ ದೂರ ಬೆನ್ನುಹತ್ತಿದ ನಂತರ ಒಂದು ಘಟ್ಟದಲ್ಲಿ ಕಳ್ಳ ಕಾರಿನಿಂದ ಇಳಿದು ಮನೆ ಒಂದರ ಮೇಲೆ ಹತ್ತಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ, ಆದರೆ ಆತನ ಅದೃಷ್ಠ ಕೈಕೊಟ್ಟು ಕೆಳಗೆ ಬಿದ್ದಿದ್ದಾನೆ. ಕೆಳಗೆ ಬಿದ್ದ ಕಳ್ಳನನ್ನು ಬಂಧಿಸಲು ಹೋದಾಗ ಪ್ರತಿರೋಧ ವ್ಯಕ್ತಪಡಿಸಿದ ಕಳ್ಳ ಸೋಮಶೇಖರ್ ಇಬ್ಬರೂ ಪೇದೆಗಳನ್ನು ಗಾಯಗೊಳಿಸಿದ್ದಾನೆ. ಆದರೂ ಬಿಡದ ಪೇದೆಗಳು ಸೋಮಶೇಖರ್‌ನನ್ನು ವಶಕ್ಕೆ ಪಡೆಯಲು ಯಶಸ್ವಿಯಾಗಿದ್ದಾರೆ.
It's not a movie scene, it's our Bengaluru City Cops, live chasing & nabbing a chain snatcher red handed.
— BengaluruCityPolice (@BlrCityPolice) January 17, 2018
“ ಇದು ನಮ್ಮ ರಿಯಲ್ ಚೇಸಿಂಗ್ ನ ಒಂದು ತುಣುಕು “ pic.twitter.com/95YuCwRENV
ಕಳ್ಳ ಸೋಮಶೇಖರ್ ಮುಂಚೆ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ಆ ನಂತರ ಕೆಲಸಕ್ಕೆ ರಾಜಿನಾಮೆ ನೀಡಿ ಕಳ್ಳತನಕ್ಕೆ ಇಳಿದಿದ್ದ, ಎಚ್‌ಎಸ್‌ಆರ್ ಬಡಾವಣೆಯಲ್ಲಿ ಕಾರೊಂದನ್ನು ಕದ್ದು ಅದರ ಸಹಾಯದಿಂದ ಸರಗಳ್ಳತನ ಮಾಡಿ ಪರಾರಿಯಾಗುತ್ತಿದ್ದ, ಆದರೆ ಇಬ್ಬರು ಪೊಲೀಸ್ ಪೇದೆಗಳ ಸಾಹಸಮಯ ಕಾರ್ಯಾಚಾರಣೆಯಿಂದಾಗಿ ಈಗ ಕಂಬಿ ಎಣಿಸುತ್ತಿದ್ದಾನೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಐಪಿಎಲ್ ಪಂದ್ಯಗಳ ವೇಳೆ ಅಪ್ರಾಪ್ತರನ್ನು ಬಳಸಿ ಮೊಬೈಲ್ ಕಳ್ಳತನ: ಅಂತರರಾಜ್ಯ ಗ್ಯಾಂಗ್ ಬೆಂಗಳೂರಿನಲ್ಲಿ ವಶಕ್ಕೆ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications