ಗೌರಿ ಲಂಕೇಶ್ ಹತ್ಯೆ; 15 ದಿನ ಪೊಲೀಸ್ ವಶಕ್ಕೆ ಋಷಿಕೇಶ್
ಬೆಂಗಳೂರು, ಜನವರಿ 13 : ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಮುರಳಿಯನ್ನು 15 ದಿನಗಳ ಕಾಲ ಎಸ್‌ಐಟಿ ವಶಕ್ಕೆ ನೀಡಲಾಗಿದೆ. ಜಾರ್ಖಂಡ್‌ನ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ಎಸ್‌ಐಟಿ ಬಂಧಿಸಿ, ಬೆಂಗಳೂರಿಗೆ ಕರೆ ತಂದಿತ್ತು.
ಸೋಮವಾರ ಎಸ್‌ಐಟಿ ಪೊಲೀಸರು ಆರೋಪಿ ಋಷಿಕೇಶ್ ದೇವ್ಡೆಕರ್ ಅಲಿಯಾಸ್ ಮುರಳಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿತ್ತು. ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಮನವಿ ಮಾಡಿತ್ತು.

ನ್ಯಾಯಾಲಯ 15 ದಿನಗಳ ಕಾಲ ಆರೋಪಿಯನ್ನು ಪೊಲೀಸರ ವಶಕ್ಕೆ ನೀಡಿತು. ಜಾರ್ಖಂಡ್‌ನ ಧನಾಬಾದ್ ಜಿಲ್ಲೆಯ ಕತ್ರಾಸ್‌ನಲ್ಲಿನ ನಿವಾಸದಲ್ಲಿ ಋಷಿಕೇಶ್ ದೇವ್ಡೆಕರ್ ಬಂಧಿಸಲಾಗಿತ್ತು. ಮನೆ ಬಿಟ್ಟು ಬಂದಿರುವುದಾಗಿ ಹೇಳಿ ಅಲ್ಲಿನ ಪೆಟ್ರೋಲ್ ಬಂಕ್‌ನಲ್ಲಿ ಋಷಿಕೇಶ್ ಕೆಲಸ ಗಿಟ್ಟಿಸಿಕೊಂಡಿದ್ದ.
44 ವರ್ಷದ ಋಷಿಕೇಶ್ ದೇವ್ಡೆಕರ್ ಗೌರಿ ಲಂಕೇಶ್ ಹತ್ಯೆ ಪ್ರಕರಣದ 18ನೇ ಆರೋಪಿ. ಚಾರ್ಜ್ ಶೀಟ್‌ನಲ್ಲಿ ಆರೋಪಿ ಹೆಸರು ಉಲ್ಲೇಖಿಸಿದ್ದ ಎಸ್‌ಐಟಿ ಪೊಲೀಸರು ಎರಡು ವರ್ಷಗಳಿಂದ ಆತನಿಗಾಗಿ ಹುಡುಕಾಟ ನಡೆಸುತ್ತಿದ್ದರು.
ಋಷಿಕೇಶ್ ದೇವ್ಡೆಕರ್ ಮಹಾರಾಷ್ಟ್ರ ಮೂಲದವನು. ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆ ಬಂಧನವಾದ ಬಳಿಕ ಈತ ಜಾರ್ಖಂಡ್‌ಗೆ ಪರಾರಿಯಾಗಿದ್ದ. ಅಲ್ಲಿನ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡಿಕೊಂಡಿದ್ದ.
ಗೌರಿ ಲಂಕೇಶ್ ಹತ್ಯೆ ಮಾಡಿದ ಪಿಸ್ತೂಲ್ ನಾಶ ಪಡಿಸುವಲ್ಲಿ ಆರೋಪಿ ಪ್ರಮುಖ ಪಾತ್ರ ವಹಿಸಿದ್ದ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. 2017ರ ಸೆಪ್ಟೆಂಬರ್ 5ರಂದು ಗೌರಿ ಲಂಕೇಶ್‌ರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications