ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸರಗಳ್ಳರ ಬಂಧನಕ್ಕೆ ಪೊಲೀಸ್ ಇಲಾಖೆ ರಣತಂತ್ರ

By Kiran B Hegde
|
Google Oneindia Kannada News

ಬೆಂಗಳೂರು, ಡಿ. 26: ನಗರದಲ್ಲಿ ಹೆಚ್ಚುತ್ತಿರುವ ಸರಗಳ್ಳರ ಹಾವಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ರಣತಂತ್ರ ರೂಪಿಸಿದೆ.

ಬೆಂಗಳೂರಿನಲ್ಲಿ ಕೇವಲ ಎರಡು ದಿನಗಳಲ್ಲಿ ಸುಮಾರು 20 ಸರಗಳ್ಳತನ ದೂರು ದಾಖಲಾಗಿದೆ. ವರ್ಷದಿಂದ ವರ್ಷಕ್ಕೆ ಸರಗಳವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

thief

ಹೆಚ್ಚುವರಿ ಪೊಲೀಸ್ ಆಯುಕ್ತ (ಅಪರಾಧ) ಪಿ. ಹರಿಶೇಖರನ್ ಏಳು ವಿಭಾಗಗಳ ಡಿಸಿಪಿಗಳ ಜೊತೆ ಸಭೆ ನಡೆಸಿ ಕಾರ್ಯತಂತ್ರ ರೂಪಿಸಿದ್ದಾರೆ. ಈ ಕುರಿತು ವಿಶೇಷ ತಂಡ ರಚಿಸಿದ್ದಾರೆ. ಕಾರ್ಯಾಚರಣೆ ಕುರಿತು ವಿವರಿಸಿದ್ದಾರೆ.

ವಿಜಯನಗರ, ಕಾಮಾಕ್ಷಿಪಾಳ್ಯ, ಚಂದ್ರಾಲೇಔಟ್ ಹಾಗೂ ಜ್ಞಾನ ಭಾರತಿ ವ್ಯಾಪ್ತಿಯಲ್ಲಿ ಹೆಚ್ಚು ಸರಗಳವು ನಡೆದಿದೆ. ಆದ್ದರಿಂದ ಇಲ್ಲಿ ಹೆಚ್ಚಿನ ನಿಗಾ ಇಡಲಾಗಿದೆ. ಜನವಸತಿ ಪ್ರದೇಶಗಳಲ್ಲಿ ಹೊಯ್ಸಳ ಹಾಗೂ ಚೀತಾ ವಾಹನ ಗಸ್ತು ಹೆಚ್ಚಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಉತ್ತರ ಭಾರತ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನಿಂದ ತಂಡಗಳು ಬಂದು ಸರಗಳವು ನಡೆಸುತ್ತಿರುವ ಅನುಮಾನವಿದೆ.

ಕದ್ದ ಮಾಲುಗಳನ್ನು ಗಿರವಿ ಅಂಗಡಿಗಳು ಸ್ವೀಕರಿಸುತ್ತಿರುವ ಅನುಮಾನವಿದೆ. ಆದ್ದರಿಂದ ಗಿರವಿ ಅಂಗಡಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಇಂತಹ ಆಭರಣ ಸ್ವೀಕರಿಸಿದ್ದು ತಿಳಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

English summary
Police department has decided to take strict action on thieves. Police told that a team from another state is behind many theft cases happened in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X