ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಣಿವರಿಯದೆ ದುಡಿದ ಪೊಲೀಸ್ ಅಧಿಕಾರಿಗೆ ಇಲಾಖೆಯಿಂದ ಪ್ರಶಂಸೆ

|
Google Oneindia Kannada News

ಬೆಂಗಳೂರು, ಮೇ 29: ಬೆಂಗಳೂರಿನಲ್ಲಿ ಸುರಿದ ಭಾರಿ ಗಾಳಿ ಮಳೆಗೆ ಮರಗಳು ಉರುಳಿಬಿದ್ದ ಸಂದರ್ಭದಲ್ಲಿ ರಾತ್ರಿಯಿಂದ ಬೆಳಗಿನ ಜಾವದವರೆಗೂ ಸ್ಥಳದಲ್ಲಿ ಬಿದ್ದಿರುವ ಮರಗಳನ್ನು ಕಟಾವು ಮಾಡಿಸಿ ರಸ್ತೆಯಿಂದ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಆರ್‌ಟಿನಗರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನಾಗಭೂಷಣ್‌ಗೆ ಪೊಲೀಸ್ ಇಲಾಖೆ ಪ್ರಶಂಸೆ ವ್ಯಕ್ತಪಡಿಸಿದೆ.

ಐಪಿಎಸ್ ಅಧಿಕಾರಿ ಅಣ್ಣಾಮಲೈ ಜನರಿಗೆ ಬರೆದ ಭಾವನಾತ್ಮಕ ಪತ್ರದಲ್ಲಿ ಏನಿದೆ?ಐಪಿಎಸ್ ಅಧಿಕಾರಿ ಅಣ್ಣಾಮಲೈ ಜನರಿಗೆ ಬರೆದ ಭಾವನಾತ್ಮಕ ಪತ್ರದಲ್ಲಿ ಏನಿದೆ?

ಮೇ 26ರಂದು ರಾತ್ರಿ ಭಾರಿ ಗಾಳಿ ಮಳೆ ಬಿದ್ದಿದ್ದರಿಂದ ಆರ್‌ಟಿ ನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಜೆಸಿ ರಸ್ತೆಯಲ್ಲಿ ಹಲವಾರು ಮರಗಳು ಗಾಳಿಗೆ ಮುರಿದು ರಸ್ತೆಯ ಮೇಲೆ ಬಿದ್ದು ಸಂಚಾರ ಅಸ್ತವ್ಯಸ್ಥಗೊಂಡಿತ್ತು. ಬೆಳಗಿನ ಜಾವ 4 ಗಂಟೆಯವರೆಗೂ ಸ್ಥಳದಲ್ಲಿದ್ದು ಬಿದ್ದಿರುವ ಮರಗಳನ್ನು ಕಟಾವುಮಾಡಿಸಿ ರಸ್ತೆಯಿಂದ ತೆರವುಗೊಳಿಸುವಲ್ಲಿ ಶ್ರಮಿಸಿದ್ದರು.

Police department congratulates RT nagar SI

ಇದು ಕರ್ತವ್ಯ ನಿಷ್ಠೆ ಹಾಗೂ ಕಾರ್ಯದಕ್ಷತೆಯನ್ನು ತೋರಿಸುತ್ತದೆ. ಈ ಸೇವೆಯನ್ನು ಸೇವಾ ಪುಸ್ತಕದಲ್ಲಿ ನಮೂದಿಸಲಾಗುತ್ತದೆ ಇದೇ ಸೇವಾ ಮನೋಭಾವವನ್ನು ಮುಂದಿನ ದಿನಗಳಲ್ಲಿಯೂ ಮುಂದುವರೆಸಿಕೊಂಡು ಹೋಗುತ್ತೀರಿ ಎಂದು ನಾನು ನಂಬಿದ್ದೇನೆ ಎಂದು ಸಂಚಾರ ವಿಭಾಗದ ಪೊಲೀಸ್ ಉಪ ಆಯುಕ್ತರು ಪತ್ರದ ಮೂಲಕ ತಿಳಿಸಿದ್ದಾರೆ.

English summary
Police department congratulates the RT nagar taffic police Nagabhushan for removing trees from the road day and night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X