ಮೋದಿಗೆ ಘೇರಾವ್ ಹಾಕಲು ಬಂದಿದ್ದ 30 ಮಂದಿ ಪೊಲೀಸ್ ವಶಕ್ಕೆ

ಬೆಂಗಳೂರು, ಜೂನ್ 20: ಕರ್ನಾಟಕಕ್ಕೆ ಎರಡು ದಿನ ಪ್ರವಾಸ ಕೈಗೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯ ಭೇಟಿ ಸಂದರ್ಭದಲ್ಲಿ ಪ್ರತಿಭಟನೆಗೆ ಮುಂದಾಗಿದ್ದ 30 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮೋದಿ ರಾಜ್ಯ ಭೇಟಿ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (ಕೆಪಿಸಿಸಿ) ಕಿಸಾನ್ ಘಟಕದ ಕಾರ್ಯಕರ್ತರು ಪ್ರಧಾನಿಗೆ ಘೇರಾವ್ ಹಾಕುವುದಕ್ಕೆ ಮುಂದಾಗಿದ್ದರು. ಈ ವೇಳೆ 30 ಮಂದಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸೋಮವಾರ ಪ್ರಧಾನಿ ಮೋದಿ ಎರಡು ದಿನಗಳ ಕರ್ನಾಟಕ ಪ್ರವಾಸವನ್ನು ಆರಂಭಿಸಲಿದ್ದಾರೆ. ಅವರ ಭೇಟಿಯ ಸಂದರ್ಭದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಭಾರತೀಯ ವಿಜ್ಞಾನ ಸಂಸ್ಥೆಯ ಉದ್ಘಾಟನೆ ಮತ್ತು ಶಂಕುಸ್ಥಾಪನೆ, ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಅನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.

Police detained 30 People, who planning protest during PM Modi Karnataka Visit

ವಿವಿಧ ರೈಲ್ವೆ ಯೋಜನೆಗಳಿಗೆ ಮೋದಿ ಶಂಕುಸ್ಥಾಪನೆ: ವಿವಿಧ ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಪ್ರಧಾನಿಮಂತ್ರಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದರ ಜೊತೆಗೆ "ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮಗಳಿಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದೇವೆ. ಹಿರಿಯ ಅಧಿಕಾರಿಗಳು ಕಾಮಗಾರಿ ಮೇಲ್ವಿಚಾರಣೆ ನಡೆಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Police detained 30 People, who planning protest during PM Modi Karnataka Visit

ಸೋಮವಾರ ಸಂಜೆ ಚಾಮುಂಡಿ ಬೆಟ್ಟಕ್ಕೆ ಪ್ರಧಾನಿ: "ಸೋಮವಾರ ಸಂಜೆ ಮೈಸೂರಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ, ಅದೇ ದಿನ ಸಂಜೆ ಸುತ್ತೂರು ಮಠ ಮತ್ತು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಮೈಸೂರು ಅರಮನೆ ಆವರಣದಲ್ಲಿ ಮಂಗಳವಾರ ನಡೆಯುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸಹ ಭಾಗವಹಿಸಲಿದ್ದಾರೆ. ತದನಂತರದಲ್ಲಿ ತಿರುವನಂತಪುರಕ್ಕೆ ತೆರಳಲಿದ್ದಾರೆ,"ಎಂದು ಬೊಮ್ಮಾಯಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+