ಮಾಣಿಕ್‌ ಷಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ: ಪೊಲೀಸರ ಹದ್ದಿನ ಕಣ್ಣು

ಬೆಂಗಳೂರು, ಆಗಸ್ಟ್ 13: ಬೆಂಗಳೂರಿನ ಮಾಣಿಕ್‌ ಷಾ ಪರೇಡ್‌ ಗ್ರೌಂಡ್‌ನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ವಿಜೃಂಭಣೆಯಿಂದ 72ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತಿದೆ. ಮೈದಾನದ ಬಿಗಿ ಭದ್ರತೆ ಕುರಿತು ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್‌ ಶಂಕರ್‌ ಹಾಗೂ ಬೆಂಗಳೂರು ಪೊಲೀಸ್‌ ಕಮಿಷನರ್‌ ಸುನೀಲ್‌ ಕುಮಾರ್‌ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದರು.

ಸ್ವಾಂತಂತ್ರ್ಯ ದಿನಾಚರಣೆ ವೇಳೆ ಅಹಿತಕರ ಘಟನೆಗಳು ನಡೆಯಂತೆ ನಿಗಾವಹಿಸಲು ಭಾರಿ ಪೊಲೀಸ್‌ ಭದ್ರತೆ ಕಲ್ಪಿಸಲಾಗುತ್ತಿದೆ. ಇಬ್ಬರು ಹೆಚ್ಚುವರಿ ಪೊಲೀಸ್‌ ಆಯುಕ್ತರು, 9 ಡಿಸಿಪಿ, 16 ಎಸಿಪಿ, 46 ಇನ್‌ಸ್ಪೆಕ್ಟರ್‌ ಸೇರಿ 1500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

9 ಕೆಎಸ್‌ಆರ್‌ಪಿ, 05 ಕಾರ್‌ ತುಕರಿ, 3 ಅಗ್ನಿಶಾಮಕ, 2 ಆಂಬ್ಯೂಲೆನ್ಸ್‌, 2 ಕ್ಷಿಪ್ರ ಕಾರ್ಯಾಚರಣೆ ಪಡೆ ನಿಯೋಜಿಸಲಾಗಿದೆ. ಮೈದಾನದಲ್ಲಿ 50 ಸಿಸಿಟಿವಿ ಕ್ಯಾಮರಾಗಳು, 4 ಬ್ಯಾಗೇಜ್‌ ಸ್ಕ್ಯಾನರ್‌ ಅಳವಡಿಸಲಾಗುತ್ತಿದೆ. ಗಣ್ಯ ವ್ಯಕ್ತಿಗಳಿಗಾಗಿ 1200 ಆಸನಗಳು, ಸ್ವಾತಂತ್ರ್ಯ ಹೋರಾಟಗಾರರು, ರಕ್ಷಣಾ ಇಲಾಖೆಯವರಿಗಾಗಿ 750 ಆಸನಗಳು, ಇತರೆ ಇಲಾಖೆ, ನಿವೃತ್ತ ಸೇನಾಧಿಕಾರಿಗಳಿಗೆ 2500 ಆಸನಗಳು, ಸಾರ್ವಜನಿಕರಿಗಾಗು 7 ಸಾವಿರ ಆಸನಗಳನ್ನು ಮೀಸಲಿರಿಸಲಾಗಿದೆ.

Police eagle eye on I-Day celebration manekshaw ground

ಶಸ್ತ್ರಾಸ್ತ್ರ, ಹರಿತವಾದ ವಸ್ತು, ಬಾಟಲಿಗಳು, ಕಪ್ಪು ಕರವಸ್ತ್ರ ತರುವಂತಿಲ್ಲ, ಈ ಬಾರಿ ಅಲ್ಪಸಂಖ್ಯಾತರು, ಎಚ್‌ಐವಿ ಪೀಡಿತರು, ಅನಾಥ ಮಕ್ಕಳು, ಬುದ್ಧಿಮಾಂದ್ಯರು, ಅಂಗವಿಕಲರಿಗೆ ವಿಶೇಷ ಆಹ್ವಾನ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+