ಪೊಲೀಸ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್ ಆರೋಪಿಗೆ ನ್ಯಾಯಾಂಗ ಬಂಧನ

ಬೆಂಗಳೂರು, ಡಿಸೆಂಬರ್ 04: ಸಿವಿಲ್ ಪೊಲೀಸ್ ಪೇದೆ ಪ್ರಶ್ನೆಪತ್ರಿಕೆ ಲೀಕ್ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್ ಅನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಸಿಟಿ ಸಿವಿಲ್ ನ್ಯಾಯಾಲಯ ನ್ಯಾಯಾಧೀಶ ಜಗದೀಶ್ ಅವರು ಆರೋಪಿ ಶಿವಕುಮಾರ್ ಅನ್ನು ನ್ಯಾಯಾಂಗ ಬಂದನಕ್ಕೆ ನೀಡಿ ಆದೇಶ ನೀಡಿದ್ದಾರೆ.

ಈ ಹಿಂದೆ ಸಿಸಿಬಿ ಪೊಲೀಸರ ವಶಕ್ಕೆ ಶಿವಕುಮಾರ್‌ ಅನ್ನು ನೀಡಲಾಗಿತ್ತು ಆ ಅವಧಿ ಇಂದಿಗೆ ಮುಗಿಯಿತು, ಹಾಗಾಗಿ ಶಿವಕುಮಾರ್‌ನನ್ನು ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 116 ಜನರನ್ನು ವಶಕ್ಕೆ ಪಡೆದಿದ್ದಾರೆ.

Police exam paper leak main accused Shivakumar gets 14 day judicial custody

ಸಿವಿಲ್ ಪೊಲೀಸ್ ಪೇದೆ ಪ್ರಶ್ನೆ ಪತ್ರಿಕೆಯನ್ನು ಲೀಕ್ ಮಾಡಿದ ಆರೋಪ ಇದೆ. ಪ್ರಕರಣವು ದಿನೇ ದಿನೇ ಟ್ವಿಸ್ಟ್‌ ಪಡೆದುಕೊಳ್ಳುತ್ತಿದ್ದು, ಶಿವಕುಮಾರ್‌ನಿಗೆ ಪಿಡಿಓ ಸೇರಿದಂತೆ ಪೊಲೀಸ್ ಇಲಾಖೆಯ ಪ್ರಮುಖ ಅಧಿಕಾರಿಗಳು ಬೆಂಬಲ ನೀಡಿದ್ದರು ಎನ್ನಲಾಗಿದೆ.

ಪಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನಲೆಯಲ್ಲಿ ನವೆಂಬರ್ 25ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ರದ್ದುಗೊಳಿಸಿ ನೇಮಕಾತಿ ವಿಭಾಗದ ಎಡಿಜಿಪಿ ಆದೇಶ ಹೊರಡಿಸಿದ್ದರು. ಪರೀಕ್ಷೆ ನಡೆಯುವ ಮುಂದಿನ ದಿನಾಂಕ ಇನ್ನೂ ಘೋಷಣೆಯಾಗಿಲ್ಲ.

ಪೊಲೀಸ್ ಪೇದೆ ನೇಮಕಾತಿ ಪ್ರವೇಶ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಸಿಕ್ಕಿತ್ತು. ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಕಿಂಗ್‌ಪಿನ್ ಶಿವಕುಮಾರ್ ಕೊಡಗು ಮತ್ತು ಹಾಸನ ಗಡಿ ಭಾಗದಲ್ಲಿ ಅದನ್ನು ಮಾರಾಟ ಮಾಡುತ್ತಿದ್ದೇನೆ ಎಂಬ ಮಾಹಿತಿಯೂ ಸಿಕ್ಕಿತ್ತು. ಸಿಸಿಬಿ ಎಸಿಪಿ ವೇಣುಗೋಪಾಲ್ ದಾಳಿ ನಡೆಸಿ ಶಿವಕುಮಾರ್‌ನನ್ನು ಹಿಡಿದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+