ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪೊಲೀಸ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್ ಆರೋಪಿಗೆ ನ್ಯಾಯಾಂಗ ಬಂಧನ

|
Google Oneindia Kannada News

ಬೆಂಗಳೂರು, ಡಿಸೆಂಬರ್ 04: ಸಿವಿಲ್ ಪೊಲೀಸ್ ಪೇದೆ ಪ್ರಶ್ನೆಪತ್ರಿಕೆ ಲೀಕ್ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್ ಅನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಸಿಟಿ ಸಿವಿಲ್ ನ್ಯಾಯಾಲಯ ನ್ಯಾಯಾಧೀಶ ಜಗದೀಶ್ ಅವರು ಆರೋಪಿ ಶಿವಕುಮಾರ್ ಅನ್ನು ನ್ಯಾಯಾಂಗ ಬಂದನಕ್ಕೆ ನೀಡಿ ಆದೇಶ ನೀಡಿದ್ದಾರೆ.

ಪೊಲೀಸ್ ನೇಮಕಾತಿ ಪ್ರಶ್ನೆ ಪತ್ರಿಕೆ 6 ರಿಂದ 8 ಲಕ್ಷಕ್ಕೆ ಸೇಲ್ ಆಯ್ತು ಪೊಲೀಸ್ ನೇಮಕಾತಿ ಪ್ರಶ್ನೆ ಪತ್ರಿಕೆ 6 ರಿಂದ 8 ಲಕ್ಷಕ್ಕೆ ಸೇಲ್ ಆಯ್ತು

ಈ ಹಿಂದೆ ಸಿಸಿಬಿ ಪೊಲೀಸರ ವಶಕ್ಕೆ ಶಿವಕುಮಾರ್‌ ಅನ್ನು ನೀಡಲಾಗಿತ್ತು ಆ ಅವಧಿ ಇಂದಿಗೆ ಮುಗಿಯಿತು, ಹಾಗಾಗಿ ಶಿವಕುಮಾರ್‌ನನ್ನು ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 116 ಜನರನ್ನು ವಶಕ್ಕೆ ಪಡೆದಿದ್ದಾರೆ.

Police exam paper leak main accused Shivakumar gets 14 day judicial custody

ಸಿವಿಲ್ ಪೊಲೀಸ್ ಪೇದೆ ಪ್ರಶ್ನೆ ಪತ್ರಿಕೆಯನ್ನು ಲೀಕ್ ಮಾಡಿದ ಆರೋಪ ಇದೆ. ಪ್ರಕರಣವು ದಿನೇ ದಿನೇ ಟ್ವಿಸ್ಟ್‌ ಪಡೆದುಕೊಳ್ಳುತ್ತಿದ್ದು, ಶಿವಕುಮಾರ್‌ನಿಗೆ ಪಿಡಿಓ ಸೇರಿದಂತೆ ಪೊಲೀಸ್ ಇಲಾಖೆಯ ಪ್ರಮುಖ ಅಧಿಕಾರಿಗಳು ಬೆಂಬಲ ನೀಡಿದ್ದರು ಎನ್ನಲಾಗಿದೆ.

ಪೊಲೀಸ್ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆ: ಆರೋಪಿ ಬಂಧನ ಪೊಲೀಸ್ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆ: ಆರೋಪಿ ಬಂಧನ

ಪಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನಲೆಯಲ್ಲಿ ನವೆಂಬರ್ 25ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ರದ್ದುಗೊಳಿಸಿ ನೇಮಕಾತಿ ವಿಭಾಗದ ಎಡಿಜಿಪಿ ಆದೇಶ ಹೊರಡಿಸಿದ್ದರು. ಪರೀಕ್ಷೆ ನಡೆಯುವ ಮುಂದಿನ ದಿನಾಂಕ ಇನ್ನೂ ಘೋಷಣೆಯಾಗಿಲ್ಲ.

ಪಾತಕಿಗೆ ಗೌಪ್ಯ ಮಾಹಿತಿ ನೀಡುತ್ತಿದ್ದ ಸಿಸಿಬಿ ಪೊಲೀಸ್ ಆಡಿಯೋ ಬಹಿರಂಗಪಾತಕಿಗೆ ಗೌಪ್ಯ ಮಾಹಿತಿ ನೀಡುತ್ತಿದ್ದ ಸಿಸಿಬಿ ಪೊಲೀಸ್ ಆಡಿಯೋ ಬಹಿರಂಗ

ಪೊಲೀಸ್ ಪೇದೆ ನೇಮಕಾತಿ ಪ್ರವೇಶ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಸಿಕ್ಕಿತ್ತು. ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಕಿಂಗ್‌ಪಿನ್ ಶಿವಕುಮಾರ್ ಕೊಡಗು ಮತ್ತು ಹಾಸನ ಗಡಿ ಭಾಗದಲ್ಲಿ ಅದನ್ನು ಮಾರಾಟ ಮಾಡುತ್ತಿದ್ದೇನೆ ಎಂಬ ಮಾಹಿತಿಯೂ ಸಿಕ್ಕಿತ್ತು. ಸಿಸಿಬಿ ಎಸಿಪಿ ವೇಣುಗೋಪಾಲ್ ದಾಳಿ ನಡೆಸಿ ಶಿವಕುಮಾರ್‌ನನ್ನು ಹಿಡಿದಿದ್ದರು.

English summary
Police constable exam question paper leak main accused Shivakumar gets 14 day judicial custody by city civil court. He was arrested by CCB police.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X