ಈಶ್ವರಪ್ಪ ಪಿಎ ಅಪಹರಣ ಯತ್ನ ಕೇಸ್, ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು, ನವೆಂಬರ್ 22 : ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕರಾಗಿದ್ದ ವಿನಯ್ ಅಪಹರಣ ಯತ್ನ ಪ್ರಕರಣದ ಚಾರ್ಜ್‌ ಶೀಟ್‌ ಅನ್ನು ಪೊಲಿಸರು ಸಲ್ಲಿಕೆ ಮಾಡಿದ್ದಾರೆ. 11 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

ಬೆಂಗಳೂರಿನ ಮಹಾಲಕ್ಷ್ಮೀಪುರಂ ಪೊಲೀಸರು 7ನೇ ಎಸಿಎಂಎಂ ನ್ಯಾಯಾಲಯಕ್ಕೆ ಬುಧವಾರ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪ ಆಪ್ತ ಕಾರ್ಯದರ್ಶಿ ಎನ್.ಆರ್.ಸಂತೋಷ್ ಸೇರಿದಂತೆ 10 ಆರೋಪಿಗಳ ವಿರುದ್ಧ ದೋಷರೋಪ ಪಟ್ಟಿ ಸಲ್ಲಿಕೆಯಾಗಿದೆ.

Police file chargesheet in Eshwarappa PA kidnap attempt case

ಎನ್.ಆರ್.ಸಂತೋಷ್, ಉಮಾಕಾಂತ್, ರಾಜೇಂದ್ರ ಅರಸ್, ಅಭಿಷೇಕ್, ಪ್ರಶಾಂತ್ ಸೆಲ್ವಂ, ವಿರುದ್ಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

2017ರ ಮೇ 11ರಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಮೇಲೆ ಹಲ್ಲೆ ನಡೆಸಿ, ಅಪಹರಿಸಲು ಯತ್ನಿಸಲಾಗಿತ್ತು.

ಎನ್.ಆರ್.ಸಂತೋಷ್ ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸಬೇಕು ಎಂದು ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಮುಂದೆನಾಗುತ್ತದೆ? ಎಂದು ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+