Breaking: ಬೆಂಗಳೂರು ಗ್ಯಾಂಗ್ ರೇಪಿಸ್ಟ್‌ಗಳ ಮೇಲೆ ಫೈರಿಂಗ್

ಬೆಂಗಳೂರು, ಮೇ 28: ರಾಜಧಾನಿ ಬೆಂಗಳೂರಿನಲ್ಲಿ ನಿರ್ಭಯಾ ರೀತಿಯ ಅತ್ಯಾಚಾರ ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತು. ಯುವತಿಯನ್ನು ಅತ್ಯಾಚಾರಗೈದು ಗುಪ್ತಾಂಗಕ್ಕೆ ಮದ್ಯದ ಬಾಟಲ್ ಇರಿಸಿ ವಿಕೃತಿ ಮರೆದಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿತ್ತು.

ಇಂದು ಅತ್ಯಾಚಾರ ಮಾಡಿದ ಸ್ಥಳ ಪರಿಶೀಲನೆಗೆ ಆರೋಪಿಗಳಾದ ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದಾಯ್ ಬಾಬು ಹಾಗೂ ಹಕೀಲ್ ಅವರನ್ನು ಕರೆದುಕೊಂಡು ಹೋದಾಗ, ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಪ್ರಯತ್ನಿಸಿದ್ದಾರೆ. ನಂತರ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದಾಗ ಪೊಲೀಸರು ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ.

ಇಂದು ಬೆಳಿಗ್ಗೆ ಸ್ಥಳ ಮಹಜರು ಮಾಡುವಾಗ ಹಲ್ಲೆ ಮಾಡಿ ತಪ್ಪಿಸಿಕೊಳ್ಳುವ ಸಂದರ್ಭದಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹೊಡೆದಿದ್ದಾರೆ.

Bengaluru: Police Firing On Gang Rapists

10 ದಿನಗಳ ಹಿಂದೆ ಅತ್ಯಾಚಾರದ ವೀಡಿಯೋ ವೈರಲ್ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ನಾಲ್ವರು ಕಾಮುಕ ಆರೋಪಿಗಳಿಗೆ ಇಬ್ಬರು ಯುವತಿಯರು ಸಾಥ್ ನೀಡಿದ್ದಾರೆ ಎಂಬ ವಿಷಯವೂ ಬೆಳಕಿಗೆ ಬಂದಿದೆ.

ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದಾಯ್ ಬಾಬು ಹಾಗೂ ಹಕೀಲ್ ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳು ಬಾಂಗ್ಲಾ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದರು. ಸಂತ್ರಸ್ಥೆ ಯುವತಿ ಸೇರಿದಂತೆ ಆರೋಪಿಗಳು ರಾಮಮೂರ್ತಿ ನಗರದ ಎನ್ಆರ್ಐ ಲೇಔಟ್‌ನಲ್ಲಿ ವಾಸವಾಗಿದ್ದರು.

Police open fire on bengaluru gang rape case accused while trying to escape : ಬೆಂಗಳೂರು ಗ್ಯಾಂಗ್ ರೇಪಿಸ್ಟ್‌ಗಳ ಮೇಲೆ ಫೈರಿಂಗ್

ಯುವತಿಯನ್ನು ಅತ್ಯಾಚಾರಗೈದು, ದೌರ್ಜನ್ಯ ನಡೆಸಿದ್ದಾರೆ. ಈ ಎಲ್ಲ ಘಟನೆಯನ್ನು ಕಿರಾತಕರು ವಿಡಿಯೋ ಮಾಡಿದ್ದು, ಯುವತಿಯ ಮೇಲಿನ ದ್ವೇಷಕ್ಕಾಗಿ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಪೂರ್ವ ವಿಭಾಗ ಡಿಸಿಪಿ ಡಾ.ಶರಣಪ್ಪ ಎಸ್.ಡಿ ಹೇಳಿಕೆ ನೀಡಿದ್ದು, ""ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಆರೋಪಿಗಳನ್ನು ಸ್ಥಳ ಮಹಜರು ಮಾಡಲು ಕರೆತರಲಾಗಿತ್ತು. ಕರೆತಂದ ವೇಳೆ ಸಕ್ರಿ ಹಾಗೂ ಕ್ರೈಂ ಸ್ಟಾಫ್ ಮೇಲೆ ಹಲ್ಲೆಗೆ ಆರೋಪಿಗಳು ಮುಂದಾದದರು''.

ಕಲ್ಲು‌ ತೂರಿ, ಪೊಲೀಸರ ಮೇಲೆ ಹಲ್ಲೆಗೆ ಪ್ರಯತ್ನಿಸಿದ್ದು, ಈ ವೇಳೆ ಇನ್ಸ್‌ಪೆಕ್ಟರ್ ಮೆಲ್ವಿನ್ ಪ್ರಾನ್ಸಿಸ್, ಪಿಎಸ್ಐ ಅರವಿಂದ್ ಅವರಿಂದ ಫೈರಿಂಗ್ ಮಾಡಲಾಗಿದೆ ಎಂದು ಪೂರ್ವ ವಿಭಾಗ ಡಿಸಿಪಿ ಡಾ.ಶರಣಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಅರೋಪಿಗಳಾದ ರಿದಾಯ್ ಬಾಬು ಮತ್ತು ಸಾಗರ್‌ ಮೇಲೆ ಫೈರಿಂಗ್ ಮಾಡಿದ್ದಾರೆ.

ಸ್ಥಳದಲ್ಲಿ ಪೊಲೀಸರ ಮೇಲೆ ಅಟ್ಯಾಕ್ ಮಾಡಿ ಎಸ್ಕೇಪ್ ಅಗಲು ಯತ್ನಿಸಿದರು. ಆಗ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಪೊಲೀಸರು ಸೂಚಿಸಿದರು. ಈ ವೇಳೆಪೊಲೀಸರ ಮೇಲೆ ಹಲ್ಲೆ ಮಾಡಲು ಆರೋಪಿಗಳು ಮುಂದಾದರು. ಈ ವೇಳೆ ರಿದಾಯ್ ಬಾಬು ಬಲಗಾಲಿಗೆ, ಸಾಗರ್ ಎಡಗಾಲಿಗೆ ಗುಂಡು ಹಾರಿಸಿ ಪೊಲೀಸರು ಮತ್ತೆ ವಶಕ್ಕೆ ಪಡೆದರು. ಆರೋಪಿಗಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ.

Recommended Video

      ಬೆಡ್ ರೂಮಿನ ಅಸಲಿ ಕಹಾನಿ ಬಿಚ್ಚಿಟ್ಟ Ramesh jarakiholi! | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+