ಪೇದೆಗೆ ಚಾಕು ಇರಿತ: ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್
ಬೆಂಗಳೂರು, ಮಾರ್ಚ್ 26: ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಬೆಂಗಳೂರಿನ ಕೊಡತಿ ಬಸ್ ನಿಲ್ದಾಣದ ಬಳಿ ಸೋಮವಾರ ನಡೆದಿದೆ.
ಯುವತಿಯೋರ್ವಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಶೋಧಕಾರ್ಯದಲ್ಲಿ ತೊಡಗಿದ್ದರು, ಸಂದರ್ಭದಲ್ಲಿ ಆರೋಪಿಗಳು ಪೇದೆ ಮಹಂತೇಶ್ ಗೆ ಚಾಕುವಿನಿಂದ ಇರಿದಿದ್ದಾರೆ. ಸಂದರ್ಭದಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ.

ಯುವತಿ ಅಪಹರಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ ಶೋಧ ಕಾರ್ಯದಲ್ಲಿ ಆರೋಪಿಗಳಾದ ಸೆಲ್ವ ಕುಮಾರ್ ಹಾಗೂ ಶಂಕರ್ ತಪ್ಪಿಸಿಕೊಳ್ಳಲು ಪೊಲೀಸ್ ಮೇಲೆ ಚಾಕುವಿನಿಂದ ಇರಿದಿದ್ದಾರೆ, ಪೊಲೀಸರು ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ನಂತರ ಆರೋಪಿಗಳ ಕಾಲಿಗೆ ಹಾರಿಸಿದ್ದಾರೆ. ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೇದೆ ಮಹಂತೇಶ್ ಅವರನ್ನು ಆಸ್ಪತ್ರೆಗೆದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ












Click it and Unblock the Notifications