ಬೆಂಗಳೂರು ಪೊಲೀಸರಿಂದ ಜೆಡಿಎಸ್ ಅಭ್ಯರ್ಥಿಗೆ ಸೇರಿದ 64 ಲಕ್ಷ ಜಪ್ತಿ

ಬೆಂಗಳೂರು, ಏಪ್ರಿಲ್ 30: ಬೆಂಗಳೂರು ಗ್ರಾಮಾಂತರ ಪೊಲೀಸರು ಇಂದು ದೊಡ್ಡ ಮೊತ್ತದ ಹಣವನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ದೇವನಹಳ್ಳಿಯ ಈ ಹಣವನ್ನು ವಶಕ್ಕೆ ಪಡೆಯಲಾಗಿದೆ.

ದೇವನಹಳ್ಳಿ ಸಮೀಪ ಕಾರಿನಲ್ಲಿ 64 ಲಕ್ಷ ರೂಪಾಯಿಗಳನ್ನು ದಾಖಲೆ ಇಲ್ಲದೆ ಸಾಗಿಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಕಾರನ್ನು ಪರಿಶೀಲನೆ ನಡೆಸುತ್ತಿದ್ದ ಪೊಲೀಸರಿಗೆ ಈ ಹಣ ಸಿಕ್ಕಿದೆ.

ಇದು ದೇವನಹಳ್ಳಿ ಜೆಡಿಎಸ್ ಅಭ್ಯರ್ಥಿ ನಿಸರ್ಗ ನಾರಾಯಣಸ್ವಾಮಿಯವರಿಗೆ ಸೇರಿದ ಹಣ ಎಂದು ಪೊಲೀಸರು ಹೇಳಿದ್ದಾರೆ.

Police has seized Rs 64 lakhs cash in Devanahalli belongs to JDS Nisarga Narayanaswamy.

ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮತದಾರರನ್ನು ಓಲೈಸುವ ಕೆಲಸ ಭರದಿಂದ ಸಾಗುತ್ತಿದೆ. ಈ ಕಾರಣದಿಂದ ಈ ಹಣವೂ ಮತದಾರರಿಗೆ ಹಂಚಲು ಒಯ್ಯುತ್ತಿರಬಹುದು ಎಂದು ಅಂದಾಜಿಸಲಾಗಿದೆ.

ಇಂದು ಬೆಳಿಗ್ಗೆಯಷ್ಟೇ ಚಿಕ್ಕಮಗಳೂರಿನಲ್ಲಿ 50,000 ಕ್ಕೂ ಅಧಿಕ ಸೀರೆಗಳನ್ನು ಇದೇ ರೀತಿ ಪೊಲೀಸರು ವಶಕ್ಕೆ ಪಡೆದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+