ಬೆಂಗಳೂರಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಕೋವಿಡ್‌ಗೆ ಬಲಿ
ಬೆಂಗಳೂರು, ಸೆಪ್ಟೆಂಬರ್ 15: ಕೋವಿಡ್ ಸೋಂಕು ತಗುಲಿದ್ದ ಪೊಲೀಸ್ ಇನ್ಸ್‌ಪೆಕ್ಟರ್‌ವೊಬ್ಬರು ಬೆಂಗಳೂರು ನಗರದಲ್ಲಿ ಮೃತಪಟ್ಟಿದ್ದಾರೆ. ನಿವೃತ್ತರಾಗಲು ಇನ್ನೂ ಎರಡು ತಿಂಗಳ ಸೇವೆ ಬಾಕಿ ಇತ್ತು.
ವಿಲ್ಸನ್ ಗಾರ್ಡನ್ ಠಾಣೆಯ ಇನ್ಸ್‌ಪೆಕ್ಟರ್ ಮೀರ್ ಗೌಸ್ ಮಂಗಳವಾರ ಮೃತಪಟ್ಟಿದ್ದಾರೆ. ಕೋವಿಡ್ ಸೋಂಕು ತಗುಲಿದ ಹಿನ್ನಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿತ್ತು.
ಕಳೆದ ಒಂದು ವಾರದಿಂದ ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಮೀರ್ ಗೌಸ್ ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕರ್ನಾಟಕದಲ್ಲಿ ಕೋವಿಡ್ ಸೋಂಕಿನಿಂದಾಗಿ 40ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳು ಮೃತಪಟ್ಟಿದ್ದಾರೆ. ಸಿಬ್ಬಂದಿ ಕುಟುಂಬಕ್ಕೆ ಸರ್ಕಾರದ ವತಿಯಿಂದ 30 ಲಕ್ಷ ಪರಿಹಾರವನ್ನು ನೀಡಲಾಗುತ್ತದೆ.
ಬೆಂಗಳೂರು ನಗರದಲ್ಲಿ ಸೋಮವಾರ 2966 ಹೊಸ ಕೋವಿಡ್ ಸೋಂಕಿನ ಪ್ರಕರಣ ವರದಿಯಾಗಿತ್ತು. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 173628. ಇದುವರೆಗೂ 2473 ಜನರು ಬೆಂಗಳೂರು ನಗರದಲ್ಲಿ ಮೃತಪಟ್ಟಿದ್ದಾರೆ.












Click it and Unblock the Notifications