ಬೆಂಗಳೂರಿನ ಆಸ್ತಿದಾರರಿಗೆ ಮಹತ್ವದ ಎಚ್ಚರಿಕೆ ನೀಡಿದ ಪೊಲೀಸ್: ನಿಯಮ ಉಲ್ಲಂಘಿಸಿದರೆ ದಂಡ ಮತ್ತು ಜೈಲು ಶಿಕ್ಷೆ!
ಬೆಂಗಳೂರಿನ ಆಸ್ತಿದಾರರಿಗೆ ಹಾಗೂ ಬಾಡಿಗೆ ನೀಡುವವರಿಗೆ ಬೆಂಗಳೂರು ಪೊಲೀಸರು ಮಹತ್ವದ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವೊಂದು ಮಹತ್ವದ ಸೂಚನೆಗಳನ್ನು ನೀಡಲಾಗಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಸಹ ಈ ಸಂಬಂಧ ಮಹತ್ವದ ಎಚ್ಚರಿಕೆಯನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಆಸ್ತಿದಾರರು ಹಾಗೂ ಬಾಡಿಗೆಗೆ ಮನೆ ಕೊಡುವವರು ಮತ್ತು ಭೋಗ್ಯಕ್ಕೆ ಮನೆ ನೀಡುವವರು ಏನು ಮಾಡಬೇಕು ಎನ್ನುವ ಸಂಪೂರ್ಣ ವಿವರ ನೋಡೋಣ.
ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಬಾಡಿಗೆಗೆ ಮನೆ ಪಡೆದುಕೊಳ್ಳುವವರು ಕೆಲವರು ಕ್ರೈಂ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಹೇಳಲಾಗಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಬೆಂಗಳೂರು ಪೊಲೀಸರು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

ನಗರದಲ್ಲಿ ಮನೆಗಳನ್ನು ಬಾಡಿಗೆ ನೀಡುವವರು ಈ ನಿಯಮಗಳನ್ನು ಪಾಲಿಸದೆ ಇದ್ದರೆ, ಅವರು ಸಹ ಈ ಆರೋಪದಲ್ಲಿ ಭಾಗಿಯಾಗಿದ್ದಾರೆ ಅಥವಾ ಕಾನೂನು ನಿಯಮಗಳ ಉಲ್ಲಂಘನೆಯ ಅಡಿಯಲ್ಲಿ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದೂ ಸಹ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ಆಸ್ತಿದಾರರಿಗೆ ಪೊಲೀಸರ ಎಚ್ಚರಿಕೆ
ಬೆಂಗಳೂರಿನ ಪೊಲೀಸರು ಬೆಂಗಳೂರಿನಲ್ಲಿರುವ ಆಸ್ತಿದಾರರಿಗೆ ಮನೆಗಳನ್ನು ಬಾಡಿಗೆಗೆ ನೀಡುವ ಸಂದರ್ಭದಲ್ಲಿ ಪೊಲೀಸ್ (Police Verification) ಪರಿಶೀಲನೆ ಮಾಡುವುದು ಕಡ್ಡಾಯ ಎಂದು ಸೂಚನೆ ನೀಡಲಾಗಿದೆ.
ಈ ರೀತಿ ಪರಿಶೀಲನೆ ಮಾಡದೆ ಮನೆಗಳನ್ನು ಬಾಡಿಗೆಗೆ ನೀಡುವುದನ್ನು ಅಪರಾಧ ಎಂದು ಪರಿಗಣಿಸಬೇಕಾಗುತ್ತದೆ. ಅಲ್ಲದೇ ಈ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಮನೆ ಮಾಲೀಕರನ್ನು ಬಂಧಿಸುವ ಸಾಧ್ಯತೆಯೂ ಇದೆ ಎಂದು ಬೆಂಗಳೂರು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ವಿಡಿಯೋ ಮೂಲಕ ಎಚ್ಚರಿಕೆ!
ಇನ್ನು ಬೆಂಗಳೂರು ಪೊಲೀಸರು ವಿಡಿಯೋ ಮೂಲಕ ಎಚ್ಚರಿಕೆ ನೀಡಿದ್ದಾರೆ. ಮನೆ ಮಾಲೀಕರು ಬಾಡಿಗೆದಾರರಿಂದ ಕೇವಲ ಬಾಡಿಗೆಯನ್ನು ಪಡೆಯುವುದು ಮಾತ್ರವಲ್ಲ ಮನೆ ಬಾಡಿಗೆಯನ್ನು ಯಾರಿಗೆ ಕೊಡುತ್ತಿದ್ದೀರಿ ಎನ್ನುವುದನ್ನು ಸರಿಯಾಗಿ ಹಾಗೂ ಸಂಪೂರ್ಣವಾಗಿ ಪರಿಶೀಲನೆ ಮಾಡಬೇಕು ಎಂದೂ ತಿಳಿಸಲಾಗಿದೆ.
ಈ ವಿಚಾರವಾಗಿ ಮಾತನಾಡಿರುವ ಬೆಂಗಳೂರು ಸೀಮಂತ್ ಕುಮಾರ್ ಸಿಂಗ್ ಅವರು, ನೀವು ನಿಮ್ಮ ಮನೆಯನ್ನು ಯಾರಿಗೆ ಬಾಡಿಗೆಗೆ ನೀಡುತ್ತೀರಿ ಎನ್ನುವುದು ನಿಮ್ಮ ಆಯ್ಕೆ. ಆದರೆ, ಮನೆಗಳನ್ನು ಬಾಡಿಗೆಗೆ ಕೊಡುವಾಗ ಒಂದು ವಿಷಯವನ್ನು ನೆನಪಿಡಿ, ಬಾಡಿಗೆದಾರರ ಪೊಲೀಸ್ ಪರಿಶೀಲನೆ ಮಾಡಿಸಲು ವಿಫಲವಾದರೆ, ನೀವು ಗಂಭೀರ ಕಾನೂನು ತೊಂದರೆಗಳನ್ನು ಎದುರಿಸಬೇಕಾಗುತ್ತದೆ.
ಯಾವುದೇ ಬಾಡಿಗೆದಾರರನ್ನು ಪರಿಶೀಲನೆ ಮಾಡದೇ ಮನೆ ನೀಡಿದ ನಂತರ, ಅವರು ಮಾದಕ ವಸ್ತು ಕಳ್ಳಸಾಗಣೆ, ಮಾನವ ಕಳ್ಳಸಾಗಣೆ ಅಥವಾ ಇತರ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ, ಅವರಿಗೆ ಅಶ್ರಯ ನೀಡಿದಂತೆ ನೀವು ಸಹ ಅಪರಾಧಕ್ಕೆ ಹೊಣೆಗಾರರಾಗುತ್ತೀರಿ ಎಂದು ಬೆಂಗಳೂರು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಬಾಡಿಗೆದಾರನ ದೃಢೀಕರಣದ ಒಂದು ಸಣ್ಣ ಹೆಜ್ಜೆಯು ದೊಡ್ಡ ಕಾನೂನು ಸಂಕಷ್ಟದಿಂದ ಪಾರು ಮಾಡಬಹುದು.
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) December 8, 2025
ನಿಮ್ಮ ಮನೆ ಬಾಡಿಗೆ ಪಡೆದ ವ್ಯಕ್ತಿಯು ಅಪರಾಧದಲ್ಲಿ ಭಾಗಿಯಾಗಿದ್ದರೆ, ನೀವು ಜೈಲು, ದಂಡ ಅಥವಾ ಬಂಧನವನ್ನು ಎದುರಿಸಬಹುದು. ಪೊಲೀಸ್ ಠಾಣೆ / BBMP / BCP ವೆಬ್ಸೈಟ್ನಲ್ಲಿ ದೃಢೀಕರಿಸಿ.
ಒಟ್ಟಾರೆಯಾಗಿ ಬೆಂಗಳೂರನ್ನು ಸುರಕ್ಷಿತ ನಗರದ ಕಡೆಗಿನ… pic.twitter.com/3nr5Cs3vpG
ಈ ರೀತಿಯ ಸಂದರ್ಭದಲ್ಲಿ ಬಾಡಿಗೆದಾರರು ಹಾಗೂ ಮನೆ ಮಾಲೀಕರು ಇಬ್ಬರೂ ಕಠಿಣ ಕಾನೂನು ಕ್ರಮಕ್ಕೆ ಒಳಗಾಗುತ್ತಾರೆ. ಬಾಡಿಗೆದಾರರ ಮೇಲೆ ವಿವಿಧ ಕ್ರಿಮಿನಲ್ ಕಾನೂನುಗಳ ಅಡಿ ಕ್ರಮ ಕೈಗೊಳ್ಳಲಾಗುತ್ತದೆ. ಮಾಲೀಕರು ಸಹ ಬಂಧನ, ದಂಡ ಅಥವಾ ಜೈಲು ಶಿಕ್ಷೆ ಎದುರಿಸಬೇಕಾಗಬಹುದು.
ವಿದೇಶಿ ಪ್ರಜೆಗಳ ವಿಚಾರದಲ್ಲಿ ಕಡ್ಡಾಯವಾಗಿ ಮನೆ ಮಾಲೀಕರು, ಹೋಟೆಲ್ಗಳು, ಅತಿಥಿ ಗೃಹಗಳು, ಪಿಜಿಗಳು ಹಾಗೂ ಸರ್ವಿಸ್ ಅಪಾರ್ಟ್ಮೆಂಟ್ಗಳು ಸೇರಿದಂತೆ ಯಾವುದೇ ಸಂಸ್ಥೆಗಳು ತಮ್ಮ ವಾಸ್ತವ್ಯದ ಬಗ್ಗೆ ಫಾರ್ಮ್ C ಮೂಲಕ ಸ್ಥಳೀಯ ಪೊಲೀಸ್ ಅಥವಾ FRRO ಗೆ ವರದಿ ಮಾಡುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications